Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ...

ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ: ಸಚಿವ ಡಾ.ಕೆ.ಸುಧಾಕರ್

ಕ್ರೀಡಾ ಇಲಾಖೆ-ರಾಜೀವ್ ಗಾಂಧಿ ಆರೋಗ್ಯ ವಿವಿ ನಡುವೆ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ15 April 2021 2:38 PM IST
share
ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಎ.15: ರಾಜ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರಿಗೆ ಸರಿಯಾದ ತರಬೇತಿ, ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ತಜ್ಞರ ಸಲಹೆ ಪಡೆಯುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದ ರಾಜ್ಯದ 34 ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಿದ್ದು,  ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತಿಯಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರು ಮತ್ತು ಕ್ರೀಡಾ ವಿಜ್ಞಾನ ಕೇಂದ್ರಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಬಳಿಕ ಮಾತನಾಡಿದ ಸಚಿವರು, ಯುವಜನರಿಗೆ ಕ್ರೀಡಾ ಚಟುವಟಿಕೆ ಬಹಳ ಮುಖ್ಯ. ಮಕ್ಕಳಿಗೆ ದೈಹಿಕ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಲು ಕ್ರೀಡೆ ಅಗತ್ಯ. ಕ್ರೀಡೆಯಲ್ಲಿ ತೊಡಗಿಸಿಕೊಂಡವರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬೇಕು. ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ರಾಜ್ಯದ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ. ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರಿಂದ ಆರಂಭವಾಗಿ, ಯಾವ ವ್ಯಕ್ತಿಯ ದೇಹಕ್ಕೆ ಯಾವ ರೀತಿ ಚಟುವಟಿಕೆ ಬೇಕು ಎಂಬ ಬಗ್ಗೆ ವಿಶ್ಲೇಷಣೆ ಮಾಡಿ, ಸಲಹೆ ನೀಡಲಾಗುತ್ತದೆ ಎಂದು ತಿಳಿಸಿದರು.

130 ಕೋಟಿ ಜನರಿರುವ ದೇಶದಲ್ಲಿ ಒಲಿಂಪಿಕ್ಸ್ ಮೊದಲಾದ ಕ್ರೀಡಾಸ್ಪರ್ಧೆಗಳಲ್ಲಿ ಎಷ್ಟು ಪದಕ ಪಡೆಯುತ್ತಿದ್ದೇವೆ ಎಂದು ಪ್ರಶ್ನಿಸಿಕೊಳ್ಳಬೇಕಿದೆ. ನಮ್ಮಲ್ಲಿ ಎಲ್ಲ ರೀತಿಯ ಪ್ರತಿಭಾವಂತರಿದ್ದಾರೆ. ಆದರೆ ಇಂತಹವರಿಗೆ ಸರಿಯಾದ ತರಬೇತಿ, ಮಾರ್ಗದರ್ಶನ ನೀಡಬೇಕಿದೆ. ಕ್ರೀಡಾ ಇಲಾಖೆಯವರು ಮಕ್ಕಳಲ್ಲಿ ಹೊಸತನ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ನೆರವು ಪಡೆಯಲಾಗುತ್ತಿದೆ. 34 ಕ್ರೀಡಾ ವಸತಿ ಶಾಲೆಗಳ ಮಕ್ಕಳು ಇದರ ಸದುಪಯೋಗ ಪಡೆಯಬೇಕು ಎಂದರು.

ಒಪ್ಪಂದ: ರಾಜ್ಯದ 30 ಜಿಲ್ಲೆಗಳ ಕ್ರೀಡಾ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ, ಆರೋಗ್ಯ ಶಿಕ್ಷಣ, ಆರೋಗ್ಯ ಮಾಹಿತಿ, ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಹಕಾರಿ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ  ಹಲವಾರು ಸಂಶೋಧನೆ, ಚಿಕಿತ್ಸೆಗಳಿಗೆ ಜನಪ್ರಿಯ. ಈ ಸಂಸ್ಥೆಯ ತಜ್ಞರನ್ನು ಬಳಸಿಕೊಂಡು ಕ್ರೀಡಾಪಟುಗಳಿಗೆ ಆರೋಗ್ಯ ಮಾರ್ಗದರ್ಶನ ನೀಡಲಿದೆ.

ಪ್ರತಿ ದಿನ ವೈದ್ಯಕೀಯ ತಪಾಸಣೆ, ಗಾಯಗಳ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸಾ ವಿಧಾನ, ಆರೋಗ್ಯವನ್ನು ಸದಾ ಉತ್ತಮವಾಗಿರಿಸಿಕೊಳ್ಳಲು ಅನುಸರಿಸಬೇಕಾದ ಕ್ರಮ, ಪೌಷ್ಟಿಕ ಆಹಾರ ಸೇವನೆ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಮೊದಲಾದವುಗಳ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ.

ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳ ವಿವಿಧ ವಿಭಾಗಗಳ ತಜ್ಞರ ಸಹಾಯವನ್ನು ವಸತಿ ಶಾಲೆಗಳು ಪಡೆಯಬಹುದು. ಕ್ರೀಡಾಪಟುಗಳ ಆರೋಗ್ಯ ತಪಾಸಣೆ ಮಾಡಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X