ಉಡುಪಿ: ಕೋವಿಡ್ ಹೆಚ್ಚಳ ಹಿನ್ನಲೆ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ರದ್ದು
ಉಡುಪಿ, ಎ.15: ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಎ.17ರ ಶನಿವಾರ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮಾಸೆಬೈಲು, ರಟ್ಟಾಡಿ ಮತ್ತು ಮಚ್ಚಟ್ಟು ಗ್ರಾಮಗಳಲ್ಲಿ ಆಯೋಜಿಸಿದ್ದ ಗ್ರಾಮ ಭೇಟಿ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.
ಪ್ರಸ್ತುತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





