ಕೋವಿಡ್ ಉಲ್ಬಣ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ
ಬೆಂಗಳೂರು, ಎ.16: ರಾಜ್ಯದಲ್ಲಿ ಕೋವಿಡ್–19 ಪಾಸಿಟಿವ್ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತುರ್ತು ಸಭೆ ಕರೆದಿದ್ದಾರೆ.
ಸಭೆ ಈಗಾಗಲೇ ಆರಂಭಗೊಂಡಿದ್ದು, ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ.
ಕೊರೊನಾ ವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಎ.18ರ ಬಳಿಕ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸೂಚನೆ ನೀಡಿದ್ದರು.
ಗುರುವಾರ ರಾಜ್ಯದಲ್ಲಿ 14,738 ಹೊಸ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದ ಈ ಸಭೆ ಮಹತ್ವದ್ದಾಗಿದೆ.
Next Story