Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಗೆ 250 ಕೋಟಿ ರೂ.ವೆಚ್ಚದ ಆಧುನಿಕ...

ಉಡುಪಿಗೆ 250 ಕೋಟಿ ರೂ.ವೆಚ್ಚದ ಆಧುನಿಕ ಒಳಚರಂಡಿ ವ್ಯವಸ್ಥೆ: ಶಾಸಕ ಭಟ್

ವಾರ್ತಾಭಾರತಿವಾರ್ತಾಭಾರತಿ16 April 2021 8:54 PM IST
share
ಉಡುಪಿಗೆ 250 ಕೋಟಿ ರೂ.ವೆಚ್ಚದ ಆಧುನಿಕ ಒಳಚರಂಡಿ ವ್ಯವಸ್ಥೆ: ಶಾಸಕ ಭಟ್

ಉಡುಪಿ, ಎ.16: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 250 ಕೋಟಿ ರೂ. ವೆಚ್ಚದ ಆಧುನಿಕ ಒಳಚರಂಡಿ ವ್ಯವಸ್ಥೆಯ (ಯುಜಿಡಿ) ನಿರ್ಮಾಣಕ್ಕೆ ಸಮಗ್ರ ಯೋಜನಾ ವರದಿ (ಡಿಪಿಆರ್) ಯನ್ನು ಕೂಡಲೇ ಸಿದ್ಧಪಡಿಸುವಂತೆ ಶಾಸಕ ಕೆ.ರಘುಪತಿ ಭಟ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉಡುಪಿ ನಗರಸಭೆಯ ಒಳಚರಂಡಿ ವ್ಯವಸ್ಥೆಗಾಗಿ ಡಿಪಿಆರ್ ವರದಿಗೆ ಸಂಬಂಧಿಸಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳ ತುರ್ತು ಸಭೆಯಲ್ಲಿ ಸಂಬಂಧಿತ ಅಧಿಕಾರಿಗಳಿಂದ ಯೋಜನೆಯ ಸಮಗ್ರ ಮಾಹಿತಿ ಪಡೆದು ಅವರು ಮಾತನಾಡುತಿದ್ದರು.

ನಗರಕ್ಕೆ ಸಮರ್ಪಕ ಒಳಚರಂಡಿ ವ್ಯವಸ್ಥೆಗಾಗಿ ಸಮಗ್ರವಾದ ವರದಿಯೊಂದನ್ನು ಸಲ್ಲಿಸುವಂತೆ ಈ ಹಿಂದೆ ಕುಂಡ್ಸೆಪ್‌ಗೆ ಸೂಚಿಸಲಾಗಿತ್ತು. ಆದರೆ ಅವರು ನೀಡಿರುವ ಯೋಜನೆ ಯನ್ನು ಕಾರ್ಯರೂಪಕ್ಕೆ ತರುವುದು ಕಷ್ಟವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸೂಚಿಸಲಾಗಿತ್ತು. ಇದಕ್ಕಾಗಿ 25 ಲಕ್ಷ ರೂ. ಅನುದಾನ ನೀಡಿ ವಿಸ್ಕೃತ ಯೋಜನಾ ವರದಿ ಸಲ್ಲಿಸುವಂತೆ ತಿಳಿಸಲಾಗಿತ್ತು ಎಂದವರು ಹೇಳಿದರು. ಇದೀಗ ಮಂಡಳಿಯ ಅಧಿಕಾರಿಗಳು ಸರ್ವೇ ನಡೆಸಿ 250 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ಸಮಗ್ರ ನಕ್ಷೆ ಸಿದ್ಧವಾಗಿದೆ. ಇದರಲ್ಲಿ ಕೆಲವೊಂದು ಸಣ್ಣ ಬದಲಾವಣೆ ಗಳನ್ನು ಮಾಡಬೇಕಿದ್ದು, ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜಂಟಿಯಾಗಿ ಪರಿಶೀಲನೆ ನಡೆಸಿ ಯೋಜನೆಯನ್ನು ಅಂತಿಮಗೊಳಿಸುವಂತೆ ಶಾಸಕರು ತಿಳಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಸರ್ವೇ ನಡೆಸಿ ವರದಿ ತಯಾರಿಸಿದ್ದಾರೆ. ಅದರಂತೆ ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 93 ಕಿ.ಮೀ. ವ್ಯಾಪ್ತಿಯಲ್ಲಿ ಯುಜಿಡಿ ವ್ಯವಸ್ಥೆ ಇದೆ. ಪೂರ್ಣ ಪ್ರಮಾಣದಲ್ಲಿ 8 ವಾರ್ಡ್‌ಗಳು ಹಾಗೂ 7 ವಾರ್ಡ್‌ಗಳಲ್ಲಿ ಭಾಗಶಃ ಯುಜಿಡಿ ವ್ಯವಸ್ಥೆ ಇದೆ. ಸದ್ಯ 2800 ಮ್ಯಾನ್‌ಹೋಲ್, 4 ವೆಟ್‌ವೆಲ್ ಹಾಗೂ 12 ಎಂಎಲ್‌ಡಿ ಎಸ್‌ಟಿಪಿ ಘಟಕವಿದೆ.
ಮಂಡಳಿಯ ಅಧಿಕಾರಿಗಳು ಸರ್ವೇ ನಡೆಸಿ ಹೊಸದಾಗಿ ಕೊಟ್ಟ ಪ್ರಸ್ತಾವನೆಯಲ್ಲಿ ಯುಜಿಡಿ ವ್ಯವಸ್ಥೆಯನ್ನು 148 ಕಿ.ಮೀ.ಗೆ ವಿಸ್ತರಿಸಲಾಗಿದೆ. ಸುಮಾರು 5500 ಮ್ಯಾನ್‌ಹೋಲ್‌ಗಳು ನಿರ್ಮಾಣವಾಗ ಬೇಕಿವೆ. ಹಿಂದಿನ 2 ವೆಟ್‌ವೆಲ್‌ಗಳ ಜೊತೆಗೆ ಹೆಚ್ಚುವರಿಯಾಗಿ ಮೂರು ವೆಟ್‌ವೆಲ್‌ಗಳ ಅಗತ್ಯವಿದೆ. ಹೀಗಾಗಿ ಒಟ್ಟು 5 ವೆಟ್‌ವೆಲ್, 11 ಸೆಪ್ಟಿಕ್ ಟ್ಯಾಂಕ್ ನಿರ್ಮಾಣಕ್ಕೆ ಮಂಡಳಿ ಶಿಾರಸ್ಸು ಮಾಡಿದೆ. 4 ಮೀ. ಆಳಕ್ಕೆ ಈ ಮ್ಯಾನ್‌ವೆಲ್‌ಗಳನ್ನು ನಿರ್ಮಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ವಿಶೇಷ ಸಭೆಗೆ ಆಗ್ರಹ: ಒಳಚರಂಡಿ ಯೋಜನೆಗೆ ಸುಮಾರು 250 ಕೋಟಿ ರೂ. ವೆಚ್ಚವಾಗಲಿದೆ. ವರದಿಗೆ ನಗರಸಭೆಯ ಅನುಮೋದನೆ ಬೇಕಿದ್ದು, ಯೋಜನೆ ಡಿಪಿಆರ್ ಅಂತಿಮಗೊಂಡ ತಕ್ಷಣ ನಗರಸಭೆಯ ವಿಶೇಷ ಸಭೆ ಕರೆದು ಒಪ್ಪಿಗೆ ಸೂಚಿಸಲಾಗುತ್ತದೆ. ಮಂಡಳಿ ಡಿಪಿಆರ್‌ಯನ್ನು ತಾಂತ್ರಿಕ ಸಮಿತಿಯ ಮುಂದಿಟ್ಟು ಅನುಮತಿ ಪಡೆದುಕೊಳ್ಳುತ್ತದೆ ಎಂದರು.

ಇದರ ಜೊತೆಗೆ ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ಮಣಿಪಾಲ-ಸಂತೆಕಟ್ಟೆಯ ಹೊಸ ಒಳಚರಂಡಿ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಡಿಪಿಆರ್ ಸಿದ್ಧವಾಗಿ ಸಲ್ಲಿಕೆಯೂ ಆಗಿದೆ. ಈ 2 ಯೋಜನೆಗಳು ಒಟ್ಟಿಗೆ ಜಾರಿಯಾದರೂ ಅನುಕೂಲ. ಈ ಬಾರಿಯ ಬಜೆಟ್‌ನಲ್ಲಿಟ್ಟ ಅನುದಾನ ಖಾಲಿಯಾಗುವ ಮುನ್ನ ನಗರದ ಒಳಚರಂಡಿಗೆ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು ಎಂದರು.

ಇಂದ್ರಾಣಿ ಸಮಸ್ಯೆಗೆ ಮುಕ್ತಿ: ಪ್ರಸ್ತುತ ನಗರದ ಒಳಚರಂಡಿ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಈ ವ್ಯವಸ್ಥೆಯನ್ನು ಸ್ಥಗಿತಗೊಳಿಸಿ ಹೊಸ ಸಂಪರ್ಕ ನೀಡಲಾಗುತ್ತದೆ. ನಗರದಲ್ಲಿ ಹೊಸ ಒಳಚರಂಡಿ ವ್ಯವಸ್ಥೆ ನಿರ್ಮಾಣವಾದರೆ ಇಂದ್ರಾಣಿ ನದಿ ಮತ್ತೆ ಹಿಂದಿನ ಸ್ಥಿತಿಗೆ ಬರುತ್ತದೆ. ಇಂದ್ರಾಣಿ ನದಿಗೆ ಸೇರುವ ಎಲ್ಲಾ ತ್ಯಾಜ್ಯಗಳು ನಿಲ್ಲುತ್ತವೆ. ಅಡ್ಕದಕಟ್ಟೆಯಲ್ಲಿ ಸುಮಾರು 1.5 ಕೋಟಿಯಲ್ಲಿ ಕಾಮಗಾರಿ ಮಾಡುತ್ತಿದ್ದೇವೆ. ಮಠದಬೆಟ್ಟುವಿನಲ್ಲಿ ತಡೆಗೋಡೆ ನಿರ್ಮಾಣಗೊಳ್ಳುತ್ತದೆ. ಮುಂದೆ ಕಲ್ಮಾಡಿ, ಕೊಡವೂರಿನಲ್ಲಿ ನಡೆಯುತ್ತದೆ ಎಂದು ಕೆ. ರಘುಪತಿ ಭಟ್ ವಿವರಿಸಿದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಪೌರಾಯುಕ್ತ ಡಾ. ಉದಯ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಆಂಚನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯನಿರ್ವಾಹಕ ಅಭಿಯಂತರ ಚಂದ್ರಶೇಖರ್ ಎಂ., ಸಹಾಯಕ ಕಾರ್ಯಪಾಲಕ ಅಭಿಯಂತರ ರವಿ ಎಂ.ಬಿ., ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್‌ರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರತಿಪಕ್ಷ ನಾಯಕ ರಮೇಶ್ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X