Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೋವಿಡ್ ಎರಡನೇ ಅಲೆ ನಿಯಂತ್ರಣ;...

ಉಡುಪಿ: ಕೋವಿಡ್ ಎರಡನೇ ಅಲೆ ನಿಯಂತ್ರಣ; ಜಿಲ್ಲಾ ತಜ್ಞರ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ16 April 2021 9:28 PM IST
share
ಉಡುಪಿ: ಕೋವಿಡ್ ಎರಡನೇ ಅಲೆ ನಿಯಂತ್ರಣ; ಜಿಲ್ಲಾ ತಜ್ಞರ ಸಮಿತಿ ಸಭೆ

ಉಡುಪಿ, ಎ.16: ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಜಿಲ್ಲಾ ತಜ್ಞರ ಸಮಿತಿ ಸಭೆಯು ಇಂದು ಸಂಜೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ರಾಜ್ಯದೆಲ್ಲಡೆ ಕೋವಿಡ್-2 ಅಲೆ ವ್ಯಾಪಕವಾಗಿದ್ದು, ಜಿಲ್ಲೆಯಲ್ಲಿಯೂ ಸಹ ಹರಡುತ್ತಿದೆ. ಇದನ್ನು ನಿಯಂತ್ರಿಸುವ ಕುರಿತಂತೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆ, ಪತ್ತೆ ಹಚ್ಚುವಿಕೆ, ಚಿಕಿತ್ಸೆ ನೀಡುವುದನ್ನು ಶೀಘ್ರವಾಗಿ ಕೈಗೊಳ್ಳಬೇಕು. ಹೃದಯ ಸಂಬಂಧಿ ಕಾಯಿಲೆ ರೋಗಿಗಳು, ಕಿಡ್ನಿ ಸಮಸ್ಯೆಯಿರುವವರು, ಕ್ಯಾನ್ಸರ್ ರೋಗಿಗಳು ಕೋವಿಡ್‌ನಿಂದ ಮರಣ ಹೊಂದುವ ಸಾಧ್ಯತೆ ಅಧಿಕವಿದ್ದು, ಇಂತಹ ರೋಗಿಗಳನ್ನು 15 ದಿನಗಳಿಗೊಮ್ಮೆ ನಿಯಮಿತವಾಗಿ ತಪಾಸಣೆ ಮಾಡುವುದರ ಮೂಲಕ ಬೇಗ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಸಾವು ಸಂಭವಿಸುವುದನ್ನು ತಪ್ಪಿಸಬಹುದು. ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೋವಿಡ್ ಸೊಂಕಿಗೆ ಒಳಗಾಗದಂತೆ ಆಸ್ಪತ್ರೆಗಳಲ್ಲಿ ಇನ್ಫೆಕ್ಷನ್ ಕಂಟ್ರೋಲ್ ಮಾಡುವ ಕುರಿತು ತರಬೇತಿ ನೀಡಬೇಕು ಎಂದು ತಜ್ಞರ ಸಮಿತಿ ತಿಳಿಸಿತು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಅಗತ್ಯವಿರುವ ರೆಮಿಡಿಸಿವರ್ ಚುಚ್ಚುಮದ್ದಿನ ಬಳಕೆಯನ್ನು ಎಚ್ಚರಿಕೆಯಿಂದ ಬಳಸಬೇಕು. ಕೋವಿಡ್ ಲಸಿಕೆ, ಮಾಸ್ಕ್‌ಗಳು, ಪಿಪಿಇ ಕಿಟ್, ಆಕ್ಸಿಜಿನ್ ಕೊರತೆಯಾಗದಂತೆ ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಹೊಂದಿರಬೇಕು ಎಂದು ಸಮಿತಿಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಎಂಐಟಿಯಲ್ಲಿ ಕಂಟೈನ್ಮೆಂಟ್ ರೆನ್ ರಚಿಸಿ ಕೋವಿಡ್ ನಿಯಂತ್ರಣಕ್ಕೆ ತಂದ ಕ್ರಮದ ಕುರಿತು ಪ್ರಧಾನ ಮಂತ್ರ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ಪ್ರಕರಣಗಳಲ್ಲಿ ಇದೇ ರೀತಿಯ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಸರ್ಕಾರದ ಸೂಚನೆಯಂತೆ ಅಗತ್ಯ ಪ್ರಮಾಣದ ಬೆಡ್‌ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು. ತಮ್ಮಲ್ಲಿಗೆ ಬರುವ ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಕುರಿತು ಮಾಹಿತಿ ನೀಡಬೇಕು. ಎಲ್ಲಾ ಖಾಸಗಿ ಸಂಸ್ಥೆಗಳು, ಮಾಲ್‌ಗಳು , ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು ಸೇರಿದಂತೆ ಎಲ್ಲಡೆ ಕೋವಿಡ್ ಪರೀಕ್ಷೆ ನಡೆಸಲು ಅಗತ್ಯ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ದ ಎಪಿಡಮಿಕ್ ಕಾಯಿದೆ ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಬೆಡ್‌ಗಳ ಕೊರತೆ ಕಂಡುಬರದಂತೆ ಬೆಡ್ ಮ್ಯಾನೇಜ್‌ಮೆಂಟ್ ವ್ಯವಸ್ಥೆ ಯನ್ನು ಆಯೋಜಿಸಲಾಗಿದೆ. ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಬೆಡ್‌ಗಳ ವಿವರಗಳನ್ನು ಪ್ರತೀದಿನ ನೀಡಬೇಕು. ಅಂಬುಲೆನ್ಸ್‌ಗಳ ಕೊರತೆಯಾಗದಂತೆ ಆಂಬುಲೆನ್ಸ್ ಮೆನೇಜ್‌ಮೆಂಟ್ ವ್ಯವಸ್ಥೆ ಮಾಡಲಾಗಿದ್ದು, ತಕ್ಷಣದಲ್ಲಿ ಅಂಬುಲೆನ್ಸ್‌ಗಳ ಸೇವೆ ದೊರೆಯುವಂತೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಟ್, ಅಪರ ಜಿಲ್ಲಾದಿಕಾರಿ ಸದಾಶಿವ ಪ್ರಭು, ಉಪವಿಬಾಗಾಧಿಕಾರಿ ರಾಜು, ಡಿಹೆಚ್‌ಓ ಡಾ. ಸುಧೀರ್‌ಚಂದ್ರ ಸೂಢಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ ಭಟ್, ಜಿಲ್ಲಾ ತಜ್ಞರ ಸಮಿತಿಯ ವೈದ್ಯರುಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X