ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ನಿಧನ

ಬೆಂಗಳೂರು, ಎ.16: ಕನ್ನಡದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಪತ್ನಿ ಅಂಬುಜಾ ದ್ವಾರಕೀಶ್ ಶುಕ್ರವಾರ ವಿಧಿವಶರಾಗಿದ್ದಾರೆ.
ಎಚ್‍ಎಸ್‍ಆರ್ ಲೇಔಟ್‍ನ ತಮ್ಮ ಸ್ವಗೃಹದಲ್ಲಿಯೇ ಅಂಬುಜಾ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಂಬುಜಾ ಅವರಿಗೆ 80 ವರ್ಷ ವಯಸ್ಸಾಗಿದ್ದು, ಐದು ಮಂದಿ ಗಂಡು ಮಕ್ಕಳು ಮತ್ತು ಪತಿ ದ್ವಾರಕೀಶ್ ಅವರನ್ನು ಅಗಲಿದ್ದಾರೆ.
ಸಾರ್ವಜನಿಕ ದರ್ಶನಕ್ಕಾಗಿ ಅಂಬುಜಾ ಅವರ ಪ್ರಾರ್ಥಿವ ಶರೀರವನ್ನು ಎಚ್‍ಎಸ್‍ಆರ್ ಲೇಔಟ್‍ನ ಅಪಾರ್ಟ್‍ಮೆಂಟ್‍ನಲ್ಲಿ ಇಡಲಾಗಿತ್ತು. ನಗರದಲ್ಲಿ ಸಂಜೆ ಪೂಜಾ ವಿಧಿ ವಿಧಾನಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.
ಡಾ.ರಾಜ್ ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಚಿತ್ರವನ್ನ ಅಂಬುಜಾ ನಿರ್ಮಾಣ ಮಾಡಿದ್ದರು.
Next Story





