ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕೊರೋನ ಸೋಂಕು ದೃಢ
ಬೆಂಗಳೂರು, ಎ.17: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
Next Story