ಛತ್ತೀಸ್ ಗಢದ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ನಾಲ್ವರು ಮೃತ್ಯು

ಸಾಂದರ್ಭಿಕ ಚಿತ್ರ
ರಾಯಪುರ: ಛತ್ತೀಸ್ ಗಢದ ರಾಯಪುರ ಕೋವಿಡ್ -19 ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾಗಿ hindustantimes.com ವರದಿ ಮಾಡಿದೆ.
ರಾಯ್ ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
"ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಬೆಂಕಿಯಿಂದ ಒಬ್ಬರು ಮತ್ತು ಮೂವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ" ಎಂದು ರಾಯಪುರ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್ ತಿಳಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶನಿವಾರ ಸಂಜೆ ಐಸಿಯು ಕೋಣೆಯಲ್ಲಿದ್ದ ಫ್ಯಾನ್ ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಆರಂಭದಲ್ಲಿ ಆಸ್ಪತ್ರೆಯ ಆಡಳಿತವು ಬೆಂಕಿಯ ಬಗ್ಗೆ ಗಂಭೀರತೆ ತೋರಲಿಲ್ಲವಾದ್ದರಿಂದ ಬಳಿಕ ಭಯಾನಕ ರೂಪವನ್ನು ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
Next Story