Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲ ಬಾರಿ ಇಂತಹ ರ‍್ಯಾಲಿಗೆ...

ಮೊದಲ ಬಾರಿ ಇಂತಹ ರ‍್ಯಾಲಿಗೆ ಸಾಕ್ಷಿಯಾಗಿದ್ದೇನೆ: ಬಂಗಾಳದಲ್ಲಿ ಭಾರೀ ಜನಸಂದಣಿ ನೋಡಿ ಪ್ರಧಾನಿ ಪ್ರಶಂಸೆ

ಕೊರೋನ ಕಾಲದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿಗರ ವಿರುದ್ಧ ಕಾಂಗ್ರೆಸ್ ಕಟು ಟೀಕೆ

ವಾರ್ತಾಭಾರತಿವಾರ್ತಾಭಾರತಿ18 April 2021 10:57 AM IST
share
ಮೊದಲ ಬಾರಿ ಇಂತಹ ರ‍್ಯಾಲಿಗೆ ಸಾಕ್ಷಿಯಾಗಿದ್ದೇನೆ: ಬಂಗಾಳದಲ್ಲಿ ಭಾರೀ ಜನಸಂದಣಿ ನೋಡಿ ಪ್ರಧಾನಿ ಪ್ರಶಂಸೆ

ಕೋಲ್ಕತಾ: ಒಂದಡೆ ದೇಶದಲ್ಲಿ ದಿನಕ್ಕೆ 2 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗಿ ಹೊಸ ದಾಖಲೆ ನಿರ್ಮಿಸುವ ಮೂಲಕ ಜನ ಸಾಮಾನ್ಯರ ಜೀವ  ಹಿಂಡುತ್ತಿದ್ದರೆ,  ಮತ್ತೊಂದೆಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು, ರ‍್ಯಾಲಿಗೆ ಸೇರಿರುವ ಭಾರೀ ಜನಸಂದಣಿಯನ್ನು ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಶನಿವಾರ ಒಂದೇ ದಿನ 2.34 ಲಕ್ಷ ಹೊಸ ಸೋಂಕು ವರದಿಯಾದ ದಿನವೇ ಅಸನ್ಸೋಲ್‌ನಲ್ಲಿ ನಡೆದ ತಮ್ಮ ರ್ಯಾಲಿಯಲ್ಲಿ ಹೆಚ್ಚಿನ ಜನಸಮೂಹ ಸೇರಿದ್ದನ್ನು ಕಂಡು ಶ್ಲಾಘನೆ ವ್ಯಕ್ತಪಡಿಸಿರುವ ಪ್ರಧಾನಿಯ ನಡೆ ಹುಬ್ಬೇರಿಸುವಂತೆ ಮಾಡಿದೆ.

"ಲೋಕಸಭಾ ಚುನಾವಣೆಯ ಸಮಯದಲ್ಲಿ ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ. ಕೊನೆಯ ಬಾರಿ ನಾನು ಬಾಬುಲ್ ಜೀಗೆ (ಅಸನ್ಸೋಲ್ ಸಂಸದ, ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ) ಮತ ಯಾಚಿಸಲು ಬಂದಿದ್ದೇನೆ. ಆಗ ನಾನು ಮೊದಲ ಬಾರಿ ಇಲ್ಲಿಗೆ ಬಂದಿದ್ದಾಗ  ಜನಸಮೂಹದ ಗಾತ್ರ ಇಂದಿಗಿಂತ ಕಾಲು ಭಾಗ ಮಾತ್ರ ಇತ್ತು. ಆದರೆ ಇಂದು, ಎಲ್ಲಾ ದಿಕ್ಕುಗಳಲ್ಲಿಯೂ ನಾನು ಅಪಾರ ಜನಸಂದಣಿಯನ್ನು ನೋಡುತ್ತಿದ್ದೇನೆ ... ಮೊದಲ ಬಾರಿಗೆ ಇಂತಹ ರ್ಯಾಲಿಗೆ ಸಾಕ್ಷಿಯಾಗಿದ್ದೇನೆ ... ಇಂದು, ನೀವು ನಿಮ್ಮ ಶಕ್ತಿಯನ್ನು ತೋರಿಸಿದ್ದೀರಿ. ಮುಂದಿನ ಹಂತವು ಹೆಚ್ಚು ಮುಖ್ಯವಾಗಿದೆ. ನೀವೆಲ್ಲರೂ ಮತ ಚಲಾಯಿಸಿ ಇತರರನ್ನು ಸಹ ಮತ ಚಲಾಯಿಸಲು ಪ್ರೇರೇಪಿಸಿ "ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ಎಪ್ರಿಲ್ 26 ರಂದು ಅಸನ್ಸೋಲ್ ನಲ್ಲಿ  ಮತದಾನ ನಡೆಯಲಿದೆ. ಬಂಗಾಳ ವಿಧಾನಸಭಾ ಚುನಾವಣೆಯ ಎಂಟು ಹಂತಗಳಲ್ಲಿ ಏಳನೇ ಹಂತ ಈ ಜಿಲ್ಲೆಯಲ್ಲಿ ನಡೆಯಲಿದೆ.

ದೇಶವು ಕೊರೋನ ಸೋಂಕಿನ ಎರಡನೇ ಅಲೆಯನ್ನು  ಎದುರಿಸುತ್ತಿರುವ ವೇಳೆ ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಮಂತ್ರಿ ನಿರಂತರವಾಗಿ, ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ.

ರಾಜ್ಯ ಚುನಾವಣೆಗೆ ಪ್ರಚಾರ ಮಾಡುತ್ತಿರುವ ಪ್ರಧಾನಿ ಹಾಗೂ  ಇತರ ರಾಜಕೀಯ ಮುಖಂಡರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಟೀಕಿಸಿದ್ದಾರೆ: "ಇಂತಹ ದೊಡ್ಡ ಸಂಖ್ಯೆಯ ಅನಾರೋಗ್ಯ ಪೀಡಿತರು ಹಾಗೂ  ದಾಖಲೆಯ ಸಾವುಗಳು ಕಂಡುಬರುವುದು ಇದೇ ಮೊದಲು''  ಎಂದು ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X