ಐಪಿಎಲ್:ಧೋನಿ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ
ಗರಿಷ್ಠ ಸಿಕ್ಸರ್ ಸಾಧನೆ

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಮಹೇಂದ್ರ ಸಿಂಗ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಶನಿವಾರ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ 25 ಎಸೆತಗಳಲ್ಲಿ 32 ರನ್ ಗಳಿಸಿದ ರೋಹಿತ್ ಎರಡು ಬಾರಿ ಸಿಕ್ಸರ್ ಸಿಡಿಸಿದರು. ಈ ಮೂಲಕ ಒಟ್ಟು ಸಿಕ್ಸರ್ ಸಂಖ್ಯೆಯನ್ನು 217ಕ್ಕೆ ವಿಸ್ತರಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್. ಧೋನಿ ಒಟ್ಟು 216 ಸಿಕ್ಸರ್ ಸಿಡಿಸಿದ್ದಾರೆ. ಒಟ್ಟಾರೆ ಗರಿಷ್ಟ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ರೋಹಿತ್ ಅವರು ಮೂರನೇ ಸ್ಥಾನದಲ್ಲಿದ್ದಾರೆ. ಕ್ರಿಸ್ ಗೇಲ್ (351) ಹಾಗೂ ಎಬಿ ಡಿ ವಿಲಿಯರ್ಸ್ (237) ಮೊದಲೆರಡು ಸ್ಥಾನದಲ್ಲಿದ್ದಾರೆ. ಐಪಿಎಲ್ ನಲ್ಲಿ ಗರಿಷ್ಟ ಸಿಕ್ಸರ್ ಸಿಡಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ರೋಹಿತ್ ಈಗ ಅಗ್ರಸ್ಥಾನದಲ್ಲಿದ್ದಾರೆ.
ರೋಹಿತ್ ಗೆ ಧೋನಿ (216 ಸಿಕ್ಸರ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ (201 ಸಿಕ್ಸರ್) ನಿಕಟ ಪೈಪೋಟಿ ನೀಡುತ್ತಿದ್ದಾರೆ.