ಉಡುಪಿ: ‘ಪ್ರೊಫೆಶನಲ್ ಟ್ರೋಫಿ’ ಕ್ರಿಕೆಟ್ ಪಂದ್ಯಕೂಟ ಉದ್ಘಾಟನೆ
ಉಡುಪಿ, ಎ.18: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ ಉಡುಪಿ ಶಾಖೆ ವತಿಯಿಂದ ವೈದ್ಯರು, ಇಂಜಿನಿಯರ್, ವಕೀಲರು ಹಾಗೂ ಚಾರ್ಟೆಡ್ ಅಕೌಂಟೆಂಟ್ ತಂಡಗಳಿಗೆ ಕ್ರಿಕೆಟ್ ಪಂದ್ಯಾಟ ಪ್ರೊಫೆಶನಲ್ ಟ್ರೋಫಿ-2021 ನ್ನು ರವಿವಾರ ಉಡುಪಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಆಯೋಜಿಸ ಲಾಗಿತ್ತು.
ಮುಖ್ಯ ಅತಿಥಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಪಂದ್ಯಕೂಟವನ್ನು ಉದ್ಘಾಟಿಸಿ, ಶುಭ ಹಾರೈಸಿದರು.
ಸಮಾರಂಭದಲ್ಲಿ ಐಎಂಎ ಕರಾವಳಿ ಶಾಖೆಯ ಅಧ್ಯಕ್ಷ ಡಾ.ಉಮೇಶ್ ಪ್ರಭು, ಇಂಜಿನಿಯರ್ ಅಸೋಸಿಯೇಷನ್ ಅಧ್ಯಕ್ಷ ಗೋಪಾಲ್ ಭಟ್, ಗೌರವಾಧ್ಯಕ್ಷ ನಾಗೇಶ್ ಹೆಗ್ಡೆ, ಸಂಸ್ಥೆಯ ಅಧ್ಯಕ್ಷ ಸಿಎ ಕವಿತಾ ಎಂ.ಪೈ, ಕಾರ್ಯದರ್ಶಿ ಸಿಎ ಪ್ರದೀಪ್ ಜೋಗಿ ಉಪಸ್ಥಿತರಿದ್ದರು.
Next Story