Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ: ಸಚಿವ...

ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ: ಸಚಿವ ಡಾ.ಸುಧಾಕರ್

''ಕೋವಿಡ್‍ಗೆ ಹಾಸಿಗೆ ಮೀಸಲಿಡದಿದ್ದರೆ ಕಾನೂನು ಕ್ರಮ''

ವಾರ್ತಾಭಾರತಿವಾರ್ತಾಭಾರತಿ18 April 2021 9:42 PM IST
share
ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ: ಸಚಿವ ಡಾ.ಸುಧಾಕರ್

ಬೆಂಗಳೂರು, ಎ. 18: ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆ ಮೀಸಲಿಡುವ ವಿಚಾರದಲ್ಲಿ ಸಮಾಧಾನ ಆಗಿಲ್ಲ. ರಾಜ್ಯ ಸರಕಾರದ ಆದೇಶವನ್ನು ಖಾಸಗಿ ಆಸ್ಪತ್ರೆಗಳು ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ರವಿವಾರ ನಗರದಲ್ಲಿನ ಸಕ್ರ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ, ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಕೋವಿಡ್‍ಗೆ ಶೇ.50ರಷ್ಟು ಹಾಸಿಗೆ ಮೀಸಲಿಡುವ ಆದೇಶ ಯಾರೆಲ್ಲ ಪಾಲಿಸಿದ್ದಾರೆ ಎಂದು ಪರಿಶೀಲಿಸಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯವರು ಶೇ.50 ಹಾಸಿಗೆ ನೀಡಿಲ್ಲ. ಹೀಗಾಗಿ ಆಸ್ಪತ್ರೆಯವರಿಗೆ ತೀಕ್ಷ್ಣವಾಗಿ ಸೂಚನೆ ನೀಡಲಾಗಿದೆ ಎಂದರು.

ಖಾಸಗಿ ಆಸ್ಪತ್ರೆಗಳು ಹಾಸಿಗೆ ನೀಡುವ ವಿಚಾರದಲ್ಲಿ ನನಗೆ ಸಮಾಧಾನ ಆಗಿಲ್ಲ. ಕೆಲ ದೊಡ್ಡ ಆಸ್ಪತ್ರೆಗಳು ಹಾಸಿಗೆ ನೀಡಿಲ್ಲ. ಖಾಸಗಿ ಆಸ್ಪತ್ರೆಯವರು ಈ ಆದೇಶ ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಇಂತಹ ಸ್ಥಿತಿ ನಿರ್ಮಿಸುವುದು ಬೇಡ ಎಂದು ಸಚಿವ ಸುಧಾಕರ್ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಇರುತ್ತದೆ. ಈ ಎಲ್ಲ ಅಂಶಗಳನ್ನು ನೋಡಿಕೊಂಡು ಖಾಸಗಿ ಆಸ್ಪತ್ರೆಗಳೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಲ ನ್ಯೂನತೆಗಳು ಬರಬಹುದು. ಆಮ್ಲಜನಕ, ರೆಮಿಡಿಸ್ವಿರ್ ಔಷಧ ಪೂರೈಕೆ, ಹಾಸಿಗೆ ಹೆಚ್ಚಳ, ಹೋಟೆಲ್ ಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಆಮ್ಲಜನಕ ಕೊರತೆ ಇಲ್ಲ: ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ವಲಯವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈಗ ಇರುವ 800 ಮೆಟ್ರಿಕ್ ಟನ್ ಆಮ್ಲಜನಕ ಜೊತೆಗೆ 300 ಟನ್‍ಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಅಗತ್ಯವಿರುವಷ್ಟು ಆಮ್ಲಜನಕ ನೀಡಲಾಗುವುದು ಎಂದು ಕೈಗಾರಿಕಾ ವಲಯದವರು ಹೇಳಿದ್ದಾರೆ ಎಂದು ಅವರು ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅನೌಪಚಾರಿಕವಾಗಿ ನಾಳೆ(ಎ.19)ಯ ಸಭೆಗೆ ಪೂರ್ವಭಾವಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕೋವಿಡ್ ಸ್ಥಿತಿಗತಿ ಬಗ್ಗೆ ವಿವರ ಪಡೆದಿದ್ದಾರೆ ಎಂದ ಅವರು, ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲ ಬಿಗಿ ಕ್ರಮ ಕೈಗೊಳ್ಳುವುದು ಅವಶ್ಯ. ನಾಳೆಯ ಸರ್ವಪಕ್ಷ ಸಭೆ ಬಳಿಕ ಎಲ್ಲವೂ ನಿರ್ಧಾರವಾಗಲಿದೆ ಎಂದರು.

ಕೋವಿಡ್ ಎರಡನೇ ಅಲೆ ವೇಗವಾಗಿದ್ದು, ಜನರು ಮುನ್ನೆಚ್ಚರಿಕೆ ಕ್ರಮ ವಹಿಸಲೇಬೇಕು. ವಾಸ್ತವ ಅರ್ಥ ಮಾಡಿಕೊಳ್ಳಬೇಕು, ನಿರ್ಲಕ್ಷ್ಯ ತೋರಬಾರದು. ಕೊರೊನಾ ಪ್ರಕರಣ ಸಂಖ್ಯೆ ನೋಡಿಕೊಂಡು ಹಾಸಿಗೆ ಎಷ್ಟು ಬೇಕೆಂದು ನಿರ್ಧರಿಸಲಾಗುತ್ತದೆ. ಜನರ ಕಷ್ಟದಲ್ಲಿ, ಸರಕಾರದ ಹೋರಾಟದಲ್ಲಿ ಖಾಸಗಿ ಆಸ್ಪತ್ರೆಗಳು ಭಾಗಿಯಾಗಬೇಕು ಎಂದು ಸಚಿವ ಸುಧಾಕರ್ ಇದೇ ವೇಳೆ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X