Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾ.ಹೆದ್ದಾರಿ ಅಸಮರ್ಪಕ ಕಾಮಗಾರಿ ವಿರುದ್ಧ...

ರಾ.ಹೆದ್ದಾರಿ ಅಸಮರ್ಪಕ ಕಾಮಗಾರಿ ವಿರುದ್ಧ ಜನಾಕ್ರೋಶ

ಕುಂದಾಪುರದಲ್ಲಿ ಸಾರ್ವಜನಿಕ ಸಭೆ: ಅಧಿಕಾರಿಗಳ ಭೇಟಿಗೆ ಹಕ್ಕೊತ್ತಾಯ

ವಾರ್ತಾಭಾರತಿವಾರ್ತಾಭಾರತಿ18 April 2021 10:25 PM IST
share
ರಾ.ಹೆದ್ದಾರಿ ಅಸಮರ್ಪಕ ಕಾಮಗಾರಿ ವಿರುದ್ಧ ಜನಾಕ್ರೋಶ

ಕುಂದಾಪುರ, ಎ.18: ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯನ್ನು ಗುತ್ತಿಗೆ ವಹಿಸಿಕೊಂಡ ನವಯುಗ ಕಂಪೆನಿ ತರಾತುರಿಯಲ್ಲಿ ಕೆಲಸ ಮುಗಿಸಿ, ಹೊರಡಲು ಮುಂದಾಗಿದೆ. ಆದರೆ ಇಲ್ಲಿನ ಚರಂಡಿ, ಕ್ರಾಸಿಂಗ್ ಸಹಿತ ಅನೇಕ ಸಮಸ್ಯೆಗಳು ಮಾತ್ರ ಹಾಗೇ ಉಳಿದುಕೊಂಡಿವೆ. ಆದ್ದರಿಂದ ಈ ಕುರಿತು ಜಿಲ್ಲಾಧಿಕಾರಿ ಹಾಗೂ ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿಗಳು ಸ್ವತಃ ಭೇಟಿ ನೀಡಿ ಪರಿಹರಿಸಬೇಕು ಎಂಬ ಹಕ್ಕೊತ್ತಾಯವನ್ನು ರಾಷ್ಟ್ರೀಯ ಹೆದ್ದಾರಿ ಹೋರಾಟ ಜಾಗೃತಿ ಸಮಿತಿಯ ನೇತೃತ್ವದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಡಲಾಯಿತು.

ಸಮಿತಿಯ ಪ್ರಮುಖರಾದ ಕಿಶೋರ್ ಕುಮಾರ್ ಮಾತನಾಡಿ, ಕುಂದಾ ಪುರ ಫ್ಲೈಓವರ್ ಕಾಮಗಾರಿಯ ಅವ್ಯವಸ್ಥೆಗೆ ನಮ್ಮೆಲ್ಲರ ನಿರ್ಲಕ್ಷ್ಯವೇ ಕಾರಣ ಆಗಿದೆ. ಮಾತ್ರವಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಈವರೆಗೆ ನಮ್ಮ ಹಾಗೂ ಕಾಮಗಾರಿ ವಹಿಸಿಕೊಂಡೆ ಗುತ್ತಿಗೆ ಸಂಸ್ಥೆಯ ಮಧ್ಯವರ್ತಿಯಾಗಿ ಮಾತ್ರ ಕೆಲಸ ಮಾಡಿದ್ದು ಬಿಟ್ಟರೆ, ಬೇರೇನು ಮಾಡಿಲ್ಲ. ಈ ಬಗ್ಗೆ ಈಗಲೂ ಎಚ್ಚೆತ್ತು ಕೊಳ್ಳದಿದ್ದರೆ, ಮತ್ತೆ ಯಾವತ್ತೂ ಈ ಅವ್ಯವಸ್ಥೆಯನ್ನು ಸರಿಪಡಿಸಿ ಕೊಳ್ಳಲು ಸಾಧ್ಯವೇ ಇಲ್ಲ ಎಂದರು.

ಸಮಿತಿಯ ಸಂಚಾಲಕ ಕೆಂಚನೂರು ಸೋಮಶೇಖರ್ ಶೆಟ್ಟಿ, ವಕೀಲರಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಸ್ಥಳೀಯರಾದ ಮಾಧವ ನಾಯಕ್, ಸುದೀಪ್, ಶ್ರೀಪತಿ ಆಚಾರ್ಯ, ಮಹೇಶ್ ಶೆಣೈ, ವೆಂಕಟೇಶ್, ಜಯಾನಂದ ಖಾರ್ವಿ, ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೋಟ ಇಬ್ರಾಹಿಂ ಸಾಹೇಬ್, ಪುರಸಭೆ ಸದಸ್ಯ ಗಿರೀಶ್, ಚಂದ್ರಶೇಖರ ಖಾರ್ವಿ, ಅಬ್ಬು ಮೊಹಮ್ಮದ್, ರಾಜೇಶ್ ಕಾವೇರಿ, ವಿಕಾಸ್ ಹೆಗ್ಡೆ, ಹರಿಪ್ರಸಾದ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಸಾಸ್ತಾನ ಸಮಿತಿಯ ಪ್ರತಾಪ್ ಶೆಟ್ಟಿ, ನಾಗರಾಜ್ ಗಾಣಿಗ, ಪ್ರಶಾಂತ್ ಶೆಟ್ಟಿ, ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿಯ ಅಧ್ಯಕ್ಷ ಗಣೇಶ್ ಪುತ್ರನ್, ವಿವೇಕ್ ನಾಯಕ್, ಪುರಸಭೆ ಸದಸ್ಯರು, ವಿವಿಧ ಪಕ್ಷಗಳ ಮುಖಂಡರು, ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ನಾಗರಿಕರು ಪಾಲ್ಗೊಂಡಿದ್ದರು. ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X