Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ಆಸ್ಪತ್ರೆಗಳು ಸರ್ಕಾರಿ ಕೋಟಾ ಅಡಿ...

ಖಾಸಗಿ ಆಸ್ಪತ್ರೆಗಳು ಸರ್ಕಾರಿ ಕೋಟಾ ಅಡಿ ಶೇ.50 ಹಾಸಿಗೆ ಮೀಸಲಿಡಬೇಕು: ಶಿವಮೊಗ್ಗ ಡಿಸಿ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ19 April 2021 4:21 PM IST
share
ಖಾಸಗಿ ಆಸ್ಪತ್ರೆಗಳು ಸರ್ಕಾರಿ ಕೋಟಾ ಅಡಿ ಶೇ.50 ಹಾಸಿಗೆ ಮೀಸಲಿಡಬೇಕು: ಶಿವಮೊಗ್ಗ ಡಿಸಿ ಶಿವಕುಮಾರ್

ಶಿವಮೊಗ್ಗ, ಎ.19: ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದೆ. ಕೋವಿಡ್ ಪಾಸಿಟಿವ್ ಸಂಖ್ಯೆ ಪ್ರತಿದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ಸೌಲಭ್ಯವನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಲಿದೆ. ಅಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಆಸ್ಪತ್ರೆಗಳು ತಮ್ಮಲ್ಲಿನ ಜನರಲ್ ಹಾಸಿಗೆ, ಆಕ್ಸಿಜನ್ ಬೆಡ್, ಐಸಿಯು, ವೆಂಟಿರೇಟರ್ ಸೌಲಭ್ಯ ಹೊಂದಿರುವ ಬೆಡ್‌ಗಳ ಪೈಕಿ ಶೇ.50ರಷ್ಟನ್ನು ಸರ್ಕಾರದ ಕೋಟಾದ ಅಡಿ ನೀಡಬೇಕು. ಒಂದು ವೇಳೆ ಈ ಬೆಡ್‌ಗಳನ್ನು ಬಳಸುವುದಿದ್ದರೆ ಜಿಲ್ಲಾಡಳಿತದಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು. ಈ ನಿರ್ದೇಶನ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಈ ಬಾರಿ ಕ್ರಮ ಜರುಗಿಸುವುದು ಖಚಿತ ಎಂದು ಅವರು ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಈ ಹಿಂದೆಯೇ ನಿಗದಿಪಡಿಸಿದೆ. ಅದರಂತೆ ಶುಲ್ಕ ವಿಧಿಸಲು ಅವಕಾಶವಿದೆ. ಹೆಚ್ಚುವರಿ ಶುಲ್ಕ ವಿಧಿಸುವ ಕುರಿತು ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಡಿಯೋ ಕಾನ್ಫರೆನ್ಸ್: ಇದಕ್ಕೂ ಮೊದಲು ಜಿಲ್ಲಾಧಿಕಾರಿ ಅವರು ಎಲ್ಲಾ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೋವಿಡ್ ನಿರ್ವಹಣೆ ಕುರಿತು ಸೂಚನೆಗಳನ್ನು ನೀಡಿದರು.

ಪ್ರಸ್ತುತ ಗಾಜನೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸಜ್ಜುಗೊಳಿಸಲಾಗಿದೆ. ಎಲ್ಲಾ ತಾಲೂಕುಗಳಲ್ಲಿ ಸಹ ಕೇರ್ ಸೆಂಟರ್ ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ಮನೆ ಆರೈಕೆಯಲ್ಲಿ ಇರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಮಾಹಿತಿಯನ್ನು ಪ್ರತಿದಿನ ಪಡೆಯಲು ತಾಲೂಕು ಮಟ್ಟದಲ್ಲಿ ತಂಡ ರಚಿಸಬೇಕು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಆರಂಭಿಸಬೇಕು. ಪ್ರತಿ ತಾಲೂಕಿನಲ್ಲಿ ಕನಿಷ್ಠ 50 ಆಕ್ಸಿಜನ್ ಬೆಡ್ ಸೌಲಭ್ಯ ಇರಬೇಕು. ವ್ಯಾಕ್ಸಿನೇಷನ್ ಲಭ್ಯತೆ ಬಗ್ಗೆ ಪ್ರತಿ ದಿನ ಮಾಹಿತಿ ನೀಡಬೇಕು. ಮಾಸ್ಕ್ ಧಾರಣೆ, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗರೂಕತಾ ಕ್ರಮಗಳ ಮೇಲುಸ್ತುವಾರಿಗೆ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗುವುದು. ಅಂಬುಲೆನ್ಸ್ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಎಂದು ಹೇಳಿದರು.

ರೂಪಾಂತರಿತ ಕೊರೋನ ಅತ್ಯಂತ ವೇಗವಾಗಿ ಹರಡುತ್ತಿದ್ದು, ಪ್ರಾಥಮಿಕ ಸೋಂಕಿತರಲ್ಲಿ ಶೇ.30ರಷ್ಟು ಮಂದಿಗೆ ಪಾಸಿಟಿವ್ ಕಂಡು ಬರುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಎಂ.ಎಲ್, ಅಪರ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೇಖರ್ ಎಚ್.ಟಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ, ವಿವಿಧ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X