ದೂರದೃಷ್ಟಿ, ತಿಳುವಳಿಕೆ ಮರೆ ಮಾಚಲು ಕೋವಿಡ್ ನಿರ್ಲಕ್ಷಿಸಿದ ಪ್ರಧಾನಿ: ಪ್ರಶಾಂತ್ ಕಿಶೋರ್ ಆರೋಪ
ಕೋಲ್ಕತಾ, ಎ. 19: ತಿಳುವಳಿಕೆ ಹಾಗೂ ಮುಂದಾಲೋಚನೆ ಕೊರತೆ ಮರೆ ಮಾಚಲು ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಬಿಕ್ಕಟ್ಟನ್ನು ನಿರ್ಲಕ್ಷಿಸಿದ್ದಾರೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮಂಗಳವಾರ ಆರೋಪಿಸಿದ್ದಾರೆ.
ದೇಶದಲ್ಲಿ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜೆಗಳನ್ನು ಉದ್ದೇಶಿಸಿ ಮಾತನಾಡಿದ ಬಳಿಕ ಪ್ರಶಾಂತ್ ಕಿಶೋರ್ ಅವರು ಈ ಹೇಳಿಕೆ ನೀಡಿದ್ದಾರೆ. ಕೊರೋನ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ವಿಜಯ ಸಾಧಿಸಿದೆ ಎಂದು ಪ್ರತಿಪಾದಿಸಿ ಪ್ರಧಾನಿ ಜನರನ್ನು ವಂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
Next Story