Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿಗಳಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ...

ವಿವಿಗಳಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಕುಲಪತಿಗಳ ಸಮಾವೇಶ: ಮೇ 1ರಿಂದ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 April 2021 10:44 PM IST
share
ವಿವಿಗಳಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಕುಲಪತಿಗಳ ಸಮಾವೇಶ: ಮೇ 1ರಿಂದ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲು ಸೂಚನೆ

ಬೆಂಗಳೂರು, ಎ. 21: ಕೋವಿಡ್ ಎರಡನೇ ಅಲೆಯನ್ನು ಕಟ್ಟಿಹಾಕುವ ಉದ್ದೇಶದಿಂದ ರಾಜ್ಯದ ಸರಕಾರಿ ಮತ್ತು ಖಾಸಗಿ ವಲಯದ ಎಲ್ಲ 33 ವಿಶ್ವವಿದ್ಯಾಲಯಗಳಲ್ಲೂ ಕಠಿಣ ಕೋವಿಡ್ ನಿರ್ವಹಣಾ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕುಲಪತಿಗಳ ಸಮಾವೇಶ ನಡೆಸಿದರು.

ಬುಧವಾರ ರಾಜಭವನದಲ್ಲಿ ರಾಜ್ಯಪಾಲರು ಕರೆದಿದ್ದ ಸಮಾವೇಶದಲ್ಲಿ ವಿಶ್ವ ವಿದ್ಯಾಲಯಗಳು, ಅವುಗಳ ವ್ಯಾಪ್ತಿಯಲ್ಲಿರುವ ಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಲ್ಲ ಕುಲಪತಿಗಳಿಗೆ ಸೂಚಿಸಲಾಯಿತು. ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಆಯಾ ವಿಶ್ವವಿದ್ಯಾಲಯ ಹಾಗೂ ಅದರ ವ್ಯಾಪ್ತಿಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಲಸಿಕೆ ಪಡೆಯಬೇಕು. ವಿದ್ಯಾರ್ಥಿಗಳ ಮನವೊಲಿಕೆ ಸೇರಿ ಅದಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ಕುಲಪತಿಗಳು ಕೈಗೊಳ್ಳಬೇಕು ಎಂದು ಉಭಯರು ಸೂಚಿಸಿದರು.

ನಿರ್ವಹಣಾ ಸಮಿತಿ ರಚಿಸಿಕೊಳ್ಳಿ: ಪ್ರತಿಯೊಂದು ವಿವಿ ವ್ಯಾಪ್ತಿಯಲ್ಲಿ ಕುಲಪತಿ ನೇತೃತ್ವದಲ್ಲಿ ನಿರ್ವಹಣಾ ಸಮಿತಿ ರಚನೆ ಮಾಡಿಕೊಳ್ಳಿ. ಎರಡನೇ ಅಲೆ ತಡೆಯುವ ಬಗ್ಗೆ ವಿದ್ಯಾರ್ಥಿಗಳು ಮತ್ತು ಅವರ ಮೂಲಕ ಪೋಷಕರಿಗೂ ತಿಳುವಳಿಕೆ ನೀಡಿ. ಎಲ್ಲರಿಗೂ ಲಸಿಕೆ ಕೊಡಿಸಿ. ಶೈಕ್ಷಣಿಕ ಚಟುವಟಿಕೆಗಳ ಸಾಧನೆಯ ಜತೆಗೆ ಕೋವಿಡ್ ಸಾಧನೆಯೂ ಮುಖ್ಯ. ಕೋವಿಡ್ ತಡೆಗಟ್ಟುವಲ್ಲಿ ವಿವಿಗಳ ಪಾತ್ರ ಮಹತ್ವದ್ದು ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ಹೇಳಿದರು.

ಆಯಾ ವಿವಿ ಕಾರ್ಯವ್ಯಾಪ್ತಿಯ ಪ್ರದೇಶದಲ್ಲಿ ಕೋವಿಡ್ ಕುರಿತಾಗಿ ಯಾವುದೇ ಸಹಕಾರ ಬೇಕಿದ್ದರೂ ತಪ್ಪದೇ ಮಾಡಬೇಕು ಎಂದು ಕುಲಪತಿಗಳಿಗೆ ರಾಜ್ಯಪಾಲರು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು.

ರೋಗ ಲಕ್ಷಣಗಳಿದ್ದರೆ ಪರೀಕ್ಷೆ ಮಾಡಿಸಿ: ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಈಗ ಚಟುವಟಿಕೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳಲ್ಲಿ ಅಥವಾ ಸಿಬ್ಬಂದಿಯಲ್ಲಿ ಕೆಮ್ಮು, ಶೀತ, ಜ್ವರ ಇತ್ಯಾದಿ ರೋಗ ಲಕ್ಷಣ ಕಂಡುಬಂದ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಉಪೇಕ್ಷೆ ಮಾಡಬಾರದು. ಒಂದು ವೇಳೆ ಪಾಸಿಟೀವ್ ರಿಸಲ್ಟ್ ಬಂದರೆ ತಕ್ಷಣದಿಂದಲೇ ಚಿಕಿತ್ಸೆ ಪಡೆಯಬೇಕು. ಈ ನಿಟ್ಟಿನಲ್ಲಿ ಕುಲಪತಿಗಳು, ಕುಲ ಸಚಿವರು ಹಾಗೂ ಸಿಬ್ಬಂದಿ ಕೆಲಸ ಮಾಡಬೇಕು ಎಂದು ಡಾ.ಅಶ್ವತ್ಥನಾರಾಯಣ ಸಲಹೆ ಮಾಡಿದರು.

ಲಸಿಕೆ ಪಡೆಯುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಿ. ಆ ಮೂಲಕ ಅವರ ಪೋಷಕರನ್ನೂ ಮನವೊಲಿಸಿ. ಎಲ್ಲರಲ್ಲೂ ಜಾಗೃತಿ ಮೂಡಿಸಿ. ಆಯಾ ವಿವಿಗಳ ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಿ. ಇಡೀ ರಾಜ್ಯದಲ್ಲಿ ಆರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಇವರ ಜತೆಗೆ ಅವರವರ ಪೋಷಕರು ಲಸಿಕೆ ಪಡೆದರೆ ಅದೇ ಒಂದು ದೊಡ್ಡ ಮೈಲುಗಲ್ಲು ಆಗುತ್ತದೆ ಎಂದು ಡಾ.ಅಶ್ವತ್ಥ ನಾರಾಯಣ ಕುಲಪತಿಗಳಿಗೆ ತಿಳಿಸಿದರು.

ಆಯಾ ವಿವಿಗಳಲ್ಲಿ ಇರುವ ಎಲ್ಲ ಸೌಲಭ್ಯಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳಿ. ನಿಮ್ಮ ಸುತ್ತಮುತ್ತಲಿನ ಪ್ರದೇಶಗಳ ಜನರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಸೇರಿದಂತೆ 33 ವಿವಿಗಳ ಕುಲಪತಿಗಳು ಸೇರಿದಂತೆ ಇನ್ನಿತರೆ ಉನ್ನತ ಪ್ರತಿನಿಧಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X