Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಗತ್ಯ ವಸ್ತುಗಳ ಅಂಗಡಿಗಳನ್ನು...

ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಶಿವಮೊಗ್ಗ ಡಿಸಿ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 April 2021 6:09 PM IST
share
ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಶಿವಮೊಗ್ಗ ಡಿಸಿ ಶಿವಕುಮಾರ್

ಶಿವಮೊಗ್ಗ,ಎ.22: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ನಿರ್ಮಾಣ ಸಾಮಾಗ್ರಿ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳನ್ನು ನಿರ್ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮೈದಾನ ಇಲ್ಲವೇ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು, ಹೂ ವ್ಯಾಪಾರ ನಡೆಸಲು ಅನುಮತಿ ಇದೆ. ಮುಂಗಾರು ಕೃಷಿ ಪೂರ್ವ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ. ಎಲ್ಲಾ ರೀತಿಯ ಕೈಗಾರಿಕೆ, ಸಂಸ್ಥೆಗಳು ಕಾರ್ಯನಿರ್ವಹಿಸಬಹುದು. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವವರಿಗೆ ಅಧಿಕೃತವಾದ ಐಡಿ ಕಾರ್ಡ್ ನೀಡಿರಬೇಕು. ಮದುವೆ ಸಮಾರಂಭಗಳಿಗೆ ತಹಶೀಲ್ದಾರ್ ಕಚೇರಿಯಿಂದ ಅನುಮತಿ ಪಡೆದು ಗರಿಷ್ಠ 50ಮಂದಿ ಮೀರದಂತೆ ನಿರ್ವಹಿಸಬೇಕು. ರಾಜ್ಯದೊಳಗೆ ವ್ಯಕ್ತಿಗಳ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಮುಕ್ತ ಅವಕಾಶವಿದೆ ಎಂದು ಹೇಳಿದರು.

ವಾರಾಂತ್ಯ ಕರ್ಫ್ಯೂ: ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6ರವರೆಗೆ ಸಂಪೂರ್ಣ ಕರ್ಫ್ಯೂ ಇರಲಿದ್ದು, ಈ ಅವಧಿಯಲ್ಲಿ ಬೆಳಗ್ಗೆ 6ರಿಂದ 10 ರವರೆಗೆ ದಿನಸಿ, ತರಕಾರಿ ಹಾಲು ಅಂಗಡಿಗಳು ಮಾತ್ರ ತೆರೆದಿರುತ್ತದೆ. ಮೇ 4ರವರೆಗೆ ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದರು.

ಆಕ್ಸಿಜನ್ ಲಭ್ಯತೆ: ಮೆಗ್ಗಾನ್ ಮಾತ್ರವಲ್ಲದೆ ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಮೆಗ್ಗಾನ್‌ನಲ್ಲಿ ಪ್ರಸ್ತುತ 280 ಆಕ್ಸಿಜನ್ ಬೆಡ್ ಲಭ್ಯವಿದ್ದು, 470ರವರೆಗೆ ಇದನ್ನು ಹೆಚ್ಚಿಸಲು ಸೌಲಭ್ಯಗಳಿವೆ. 40 ಐಸಿಯು ಸೌಲಭ್ಯವಿದ್ದು ಹೆಚ್ಚುವರಿಯಾಗಿ 20 ಜಂಬೋ ಸಿಲಿಂಡರ್ ಸಂಗ್ರಹಿಸಿಡಲು ಸೂಚಿಸಲಾಗಿದೆ. ಮೆಗ್ಗಾನ್‌ನಲ್ಲಿ 16 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಫಿಲ್ಲಿಂಗ್ ಪ್ಲಾಂಟ್ ಇದೆ. ಪ್ರತಿ ತಾಲೂಕಿನಲ್ಲಿ 50 ಆಕ್ಸಿಜನ್ ಬೆಡ್ ಲಭ್ಯವಿದೆ. ತಾಲೂಕಿನಲ್ಲಿ ತಲಾ 3 ಐಸಿಯು ಬೆಡ್ ಮತ್ತು 20 ಆಕ್ಸಿಜನ್ ಜಂಬೋ ಸಿಲಿಂಡರ್ ಇವೆ ಎಂದು ಹೇಳಿದರು.

ರೆಮ್‍ಡೆಸಿವಿರ್: ರೆಮಡೆಸಿವಿರ್ ಇಂಜೆಕ್ಷನ್ ಅಗತ್ಯ ಪ್ರಮಾಣದಲ್ಲಿ ಲಭ್ಯವಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 307, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 116 ಹಾಗೂ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ 18 ಇಂಜೆಕ್ಷನ್ ಲಭ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮಾಹಿತಿ ನೀಡಿದರು.

ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X