Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಡಿಲು ಬಡಿದು ಜಾನುವಾರು ಮೃತ್ಯು;...

ಸಿಡಿಲು ಬಡಿದು ಜಾನುವಾರು ಮೃತ್ಯು; ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ22 April 2021 6:40 PM IST
share

ಉಡುಪಿ, ಎ.22: ಕಳೆದೆರಡು ದಿನಗಳ ಗುಡುಗು-ಸಿಡಿಲು ಹಾಗೂ ಮಳೆಯಿಂದ ಜಿಲ್ಲೆಯ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿ ರುವ ಬಗ್ಗೆ ವರದಿಯಾಗಿದೆ. ಕುಂದಾಪುರ ತಾಲೂಕು ಹೆಂಗವಳ್ಳಿ ಗ್ರಾಮದ ಸದಾಶಿವ ಎಂಬವರ ಮನೆಯ ಜಾನುವಾರ ಸಿಡಿಲು ಬಡಿದು ಮೃತಪಟ್ಟಿದ್ದು 25,000ರೂ. ನಷ್ಟ ಸಂಭವಿಸಿದೆ.

ಕಾರ್ಕಳ ತಾಲೂಕು ಸೂಡ ಗ್ರಾಮದ ಸುಂದರ ನಾಯ್ಕ ಇವರ ವಾಸ್ತವ್ಯದ ಮನೆ ಹಾಗೂ ಪಳ್ಳಿ ಗ್ರಾಮದ ಕಲ್ಯಾಣಿ ಸಪಳ್ತಿ ಇವರ ವಾಸ್ತವ್ಯದ ಮನೆಗೆ ಸಿಡಿಲು ಬಡಿದು ಭಾಗಶ: ಹಾನಿ ಸಂಭವಿಸಿದೆ. ತಲಾ 30,000ರೂ. ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ.

ಕಾಪು ತಾಲೂಕು ಕುತ್ಯಾರು ಶ್ರೀಕಾಳಿಕಾಂಬ ದೇವಸ್ಥಾನದ ಬಳಿ ಶಾರದಾ ಆಚಾರ್ಯರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವಯರಿಂಗ್ ಹಾಗೂ ವಿದ್ಯುತ್ ಉಪಕರಣಗಳು, ನಿತ್ಯಬಳಕೆಯ ವಸ್ತುಗಳು ಸಂಪೂರ್ಣ ಹಾನಿಗೊಂಡಿದ್ದು ಸುಮಾರು ಒಂದು ಲಕ್ಷ ರೂ.ನಷ್ಟದ ಅಂದಾಜು ಮಾಡಲಾಗಿದೆ.

ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಕಾಳು ಮೂಲ್ಯರ ಮನೆ, ರಘುನಾಥ ಮೂಲ್ಯರ ಮನೆ, ಕೌಡೂರು ಗ್ರಾಮದ ಅಪ್ಪಿ ಪೂಜಾರ್ತಿ ಅವರ ಮನೆ, ನಲ್ತೂರು ಗ್ರಾಮದ ಮೋಂಟಿ ಮೇರ್ತಿ ಎಂಬವರ ವಾಸ್ತವ್ಯದ ಮನೆ ಸಿಡಿಲು, ಗಾಳಿ, ಮಳೆಯಿಂದ ಹಾನಿಗೊಂಡಿದ್ದು ಸುಮಾರು ಒಂದು ಲಕ್ಷ ರೂ. ನಷ್ಟವಾಗಿರುವ ಬಗ್ಗೆ ವರದಿಯಾಗಿದೆ.

ಕಾಪು ತಾಲೂಕು ಪಾದೂರು ಗ್ರಾಮದ ವ್ಯಾಸರಾಯ ಆಚಾರಿ ಎಂಬವರ ಮನೆ ಮೇಲೆ ಮರಬಿದ್ದು 50,000ರೂ., ಬೆಳಪು ಗ್ರಾಮದ ಆಶಾ ಮಾಬೆನ್ ಅವರ ಮನೆಗೆ ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್‌ನಿಂದ ಅಪಾರ ಹಾನಿ ಸಂಭವಿಸಿದೆ. ಎಲ್ಲೂರು ಗ್ರಾಮದ ಸುನಂದ ಎಂಬವರ ಮನೆ ಮೇಲೆ ಅಡಿಕೆ ಮರಬಿದ್ದು ಹಾನಿಯಾಗಿದೆ.

ಉಳಿದಂತೆ ಮೂಳೂರು ಗ್ರಾಮದ ಸಿಂಧು ಮುಖಾರ್ತಿ, ಉಳಿಯಾರಗೋಳಿ ಗ್ರಾಮದ ಜಲಜ ಗೋಪಾಲ ಪೂಜಾರಿ, ಎಲ್ಲೂರು ಗ್ರಾಮದ ಹಸನ್, ರೇಣುಕಾ, ಕೋಟೆ ಗ್ರಾಮದ ಕಮಲ್‌ದಾಸ್, ಪಾದೂರು ಗ್ರಾಮದ ಶೈಲೇಂದ್ರ, ಕಳತ್ತೂರು ಗ್ರಾಮದ ಓಸ್ವಾಲ್ಡ್, ಚಿತ್ರಾ ಶೆಟ್ಟಿ, ಶಿರ್ವ ಗ್ರಾಮದ ಕೃಷ್ಣ ಪೂಜಾರಿ, ಪಿಲಾರು ಗ್ರಾಮದ ದೇವರಾಯ ಆಚಾರ್ಯರ ಮನೆಗಳಿಗೂ ಮಳೆ, ಗಾಳಿ, ಸಿಡಿಲಿನ ಪರಿಣಾಮ ವಿವಿಧ ರೀತಿಯಿಂದ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ಅಂದಾಜಿಸಲಾಗಿದೆ.

ಸಿಡಿಲಿನಿಂದ ಇಬ್ಬರಿಗೆ ಗಾಯ: ಕಾಪು ತಾಲೂಕು ಪಿಲಾರು ಗ್ರಾಮದ ದೇವರಾಯ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು 50,000ರೂ.ಗಳಿಗೂ ಮಿಕ್ಕಿ ಹಾನಿ ಸಂಭಸಿದ್ದು, ಸಿಡಿಲಿನಿಂದ ಸುರೇಖ ಹಾಗೂ ಮೀನಾಕ್ಷಿ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X