Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಕಷ್ಟಕ್ಕೆ ನೆರವಾದ ಮಾಜಿ ಸಚಿವ...

ಸಂಕಷ್ಟಕ್ಕೆ ನೆರವಾದ ಮಾಜಿ ಸಚಿವ ಎಂ.ಬಿ.ಪಾಟೀಲ್: ಧನ್ಯವಾದ ತಿಳಿಸಿದ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ23 April 2021 8:07 PM IST
share
ಸಂಕಷ್ಟಕ್ಕೆ ನೆರವಾದ ಮಾಜಿ ಸಚಿವ ಎಂ.ಬಿ.ಪಾಟೀಲ್: ಧನ್ಯವಾದ ತಿಳಿಸಿದ ಡಾ.ಕೆ.ಸುಧಾಕರ್

ಬೆಂಗಳೂರು, ಎ.23: ಮಾಜಿ ಸಚಿವ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೋನ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ. ಇದೇ ರೀತಿ ಆಸ್ಪತ್ರೆಗಳು, ವೈದ್ಯಕೀಯ ಸಂಸ್ಥೆಗಳು ಜನರ ಸಂಕಷ್ಟಕ್ಕೆ ಮಿಡಿಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ವಿಜಯಪುರದ ಬಿಎಲ್‍ಡಿಇ ಮೆಡಿಕಲ್ ಕಾಲೇಜಿನ ಮುಖ್ಯಸ್ಥರಾದ ಮಾಜಿ ಸಚಿವ ಎಂ.ಬಿ.ಪಾಟೀಲ್, ಕೊರೋನದಿಂದಾಗಿ ಬಾಧಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ರಾಜ್ಯ ಸರಕಾರದಿಂದ ಖಾಸಗಿ ಆಸ್ಪತ್ರೆಗಳ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್‍ಗೆ ಮೀಸಲಿಡುವ ಕ್ರಮ ಜಾರಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಜನಪ್ರತಿನಿಧಿಯಾಗಿ ಜನರ ಸಮಸ್ಯೆಗಳನ್ನು ಅರಿತಿರುವ ಹಿರಿಯ ರಾಜಕಾರಣಿ ಎಂ.ಬಿ.ಪಾಟೀಲ್, ತಮ್ಮ ಆಸ್ಪತ್ರೆಯಲ್ಲಿ ಹಾಸಿಗೆಗಳ ದರವನ್ನು ಶೇ.70ರಷ್ಟು ಕಡಿತಗೊಳಿಸಿದ್ದಾರೆ. ಜೊತೆಗೆ 500 ಹಾಸಿಗೆಗಳನ್ನು ಆರ್ಥಿಕವಾಗಿ ದುರ್ಬಲರಾದ ವರ್ಗಕ್ಕೆ ಮೀಸಲಿಟ್ಟಿದ್ದಾರೆ. ಈ ಜನಸ್ನೇಹಿ ಕ್ರಮ ಇಂತಹ ಕೋವಿಡ್ ಪರಿಸ್ಥಿತಿಗೆ ಬಹಳಷ್ಟು ನೆರವಾಗಿದೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ.

ಇನ್ನೂ ಅನೇಕರು ಈ ರೀತಿ ಕೊರೋನ ವಿರುದ್ಧದ ಹೋರಾಟದಲ್ಲಿ ಸರಕಾರದೊಂದಿಗೆ ಕೈ ಜೋಡಿಸಿದ್ದಾರೆ. ಡಾ.ಸಿ.ವಿ.ಮೋಹನ್ ಅವರು ಬೊಮ್ಮಸಂದ್ರದ ಚೇತನ ವಿಹಾರ ಎಲ್ಡರ್ ಕೇರ್ ಸೆಂಟರ್ ನ 200 ಹಾಸಿಗೆಗಳನ್ನು ಸ್ವಯಂಪ್ರೇರಿತರಾಗಿ ಕೋವಿಡ್‍ಗೆ ಮೀಸಲಿಟ್ಟಿದ್ದಾರೆ. ರಾಜ್ಯ ಸರಕಾರ ನೀಡಿರುವ ಕರೆಗೆ ಈ ರೀತಿ ತ್ವರಿತವಾಗಿ ಸ್ಪಂದಿಸಿರುವುದು ಶ್ಲಾಘನೀಯವಾಗಿದ್ದು, ಇವರಿಗೂ ಧನ್ಯವಾದಗಳು ಎಂದು ಸುಧಾಕರ್ ತಿಳಿಸಿದ್ದಾರೆ.

ರಾಷ್ಟ್ರೋತ್ಥಾನ ರಕ್ತ ನಿಧಿ ಕೇಂದ್ರದಲ್ಲಿ ಕೋವಿಡ್‍ನಿಂದ ಚೇತರಿಸಿಕೊಂಡವರ ರಕ್ತದಿಂದ ಪ್ಲಾಸ್ಮಾ ತೆಗೆದು ಚಿಕಿತ್ಸೆಗೆ ಒದಗಿಸಿಕೊಡುವ ಅಭಿಯಾನ ಆರಂಭವಾಗಿದೆ. ಇದು ಕೋವಿಡ್‍ನಿಂದ ತೀವ್ರವಾಗಿ ಬಳಲುತ್ತಿರುವ ರೋಗಿಗಳಿಗೆ ಸಂಜೀವಿನಿ ನೀಡುವ ಉತ್ತಮ ಕ್ರಮವಾಗಿದೆ ಎಂದು ಅವರು ಹೇಳಿದ್ದಾರೆ.

ಒಗ್ಗಟ್ಟಿನ ಹೋರಾಟ ಬೇಕು: ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರಾಜ್ಯ ಸರಕಾರ ಹಾಗೂ ಅಧಿಕಾರಿ, ಸಿಬ್ಬಂದಿ ವರ್ಗ ಅವಿರತವಾಗಿ ಶ್ರಮಿಸುತ್ತಿದೆ. ಯಾವುದೇ ಪಕ್ಷ, ಸಿದ್ಧಾಂತಗಳ ಭೇದವಿಲ್ಲದೆ ಜನಪ್ರತಿನಿಧಿಗಳು, ಸಂಘ, ಸಂಸ್ಥೆಗಳು ಕೋವಿಡ್ ಹೋರಾಟದಲ್ಲಿ ಭಾಗಿಯಾಗಿರುವುದು ಒಗ್ಗಟ್ಟಿನ ಸಂಕೇತವಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಇಂತಹ ಒಗ್ಗಟ್ಟಿನ ಹೋರಾಟದಿಂದ ನಾವು ಕೊರೋನವನ್ನು ಮಣಿಸಬೇಕಿದೆ. ಇನ್ನೂ ಹೆಚ್ಚು ಸಂಘ, ಸಂಸ್ಥೆಗಳು ಮುಂದೆ ಬಂದು ತಮ್ಮ ವ್ಯಾಪ್ತಿಯಲ್ಲಿ ಕೊರೋನ ಸಾಂಕ್ರಾಮಿಕವನ್ನು ಹೊಡೆದೋಡಿಸಲು ನೆರವಾಗಬೇಕು ಎಂದು ಸುಧಾಕರ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X