Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್...

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಹೆಚ್ಚುವ ಸಾಧ್ಯತೆ: ಡಿಸಿ ಜಗದೀಶ್

'ಎಚ್ಚರಿಕೆ ವಹಿಸುವಂತೆ ಜನತೆಗೆ ಕರೆ'

ವಾರ್ತಾಭಾರತಿವಾರ್ತಾಭಾರತಿ23 April 2021 8:30 PM IST
share
ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಹೆಚ್ಚುವ ಸಾಧ್ಯತೆ: ಡಿಸಿ ಜಗದೀಶ್

ಉಡುಪಿ, ಎ.23: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಕೋವಿಡ್-19 ಸೋಂಕಿಗೆ ಪಾಸಿಟಿವ್ ಬರುವವರ ಸಂಖ್ಯೆ ಕಳವಳಕಾರಿ ರೀತಿಯಲ್ಲಿ ಹೆಚ್ಚುತಿದ್ದು, ಮುಂದಿನ ದಿನಗಳಲ್ಲಿ ಅದು ಇನ್ನಷ್ಟು ಏರಿಕೆ ಗತಿಯಲ್ಲಿ ಸಾಗುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಜಿಲ್ಲೆಯ ಜನತೆ ಕೊರೋನ ಕುರಿತಂತೆ ಹೆಚ್ಚಿನ ನಿಗಾ ವಹಿಸಬೇಕಾದ ಅಗತ್ಯವಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು. ವಾರಾಂತ್ಯ ಕರ್ಫ್ಯೂ ಹಾಗೂ ಪ್ರಸಕ್ತ ಜಿಲ್ಲೆಯಲ್ಲಿ ಕೊರೋನ ಸ್ಥಿತಿಗತಿ ಕುರಿತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಕೋವಿಡ್ ಎರಡನೇ ಅಲೆಗೆ ಮುನ್ನ ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ಪ್ರಮಾಣ ಶೇ.2.5 ಆಗಿತ್ತು. 15 ದಿನಗಳ ಹಿಂದೆ ಇದು ಶೇ.5.45ಕ್ಕೇರಿತ್ತು. ಒಂದು ವಾರದ ಹಿಂದೆ ಪಾಸಿಟಿವಿ ಪ್ರಮಾಣ ಶೇ.7.72ಕ್ಕೇರಿ, ಮೂರು ದಿನಗಳಿಂದ ಶೇ.10.50ಗೆ ನೆಗೆದಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ ಎಂದವರು ವಿವರಿಸಿದರು.

15 ದಿನಗಳಿಗೆ ಮೊದಲು ಪ್ರತಿದಿನ 50 ಮಂದಿ ಪಾಸಿಟಿವ್ ಬರುತಿದ್ದರೆ, ಒಂದು ವಾರದಿಂದ ಇದು 100ಕ್ಕೇರಿತ್ತು. ಕಳೆದ ಮೂರು ದಿನಗಳಿಂದ ಒಟ್ಟು 926 ಮಂದಿ ಪಾಸಿಟಿವ್ ಬಂದಿದ್ದು, ದಿನದ ಸರಾಸರಿ 300 ದಾಟಿದೆ. ಇದು ಅತ್ಯಂತ ಕಳವಳಕರ ವಿಷಯ. ಇದೀಗ ಈ ಹೆಚ್ಚಳಕ್ಕೆ ನಾವು ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ ಎಂದರು.

ಆದರೆ ಜನತೆ ಕೊರೋನ ಕುರಿತಂತೆ ಜಾಗೃತಿಯನ್ನು ವಹಿಸಬೇಕು. ರೋಗದ ಲಕ್ಷಣ ಕಾಣಿಸಿದಾಕ್ಷಣ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಹಾಸಿಗೆಗಳಿಗೆ ಯಾವುದೇ ಕೊರತೆ ಇಲ್ಲ. ಐಸಿಯು ಹಾಗೂ ವೆಂಟಿಲೇಟರ್ ಬೆಡ್ ಎಲ್ಲವೂ ಲಭ್ಯವಿದೆ ಎಂದವರು ನುಡಿದರು.

ಸದ್ಯ ಜಿಲ್ಲೆಯಲ್ಲಿ 1165 ಮಂದಿ ಸೋಂಕಿಗೆ ಸಕ್ರಿಯರಿದ್ದಾರೆ. ಇವರಲ್ಲಿ 280 ಮಂದಿ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿ ದ್ದಾರೆ. ತಿಂಗಳ ಮೊದಲು ಶೇ.5ರಷ್ಟು ಮಂದಿ ಸೋಂಕಿತರು ಮಾತ್ರ ರೋಗ ಲಕ್ಷಣ ಹೊಂದಿದ್ದರೆ, ಈಗ ಈ ಸಂಖ್ಯೆ ಶೇ.25ಕ್ಕೇರಿದೆ. ಮುಂದೆ ಇದು ಶೇ.40ಕ್ಕೆ ಏರುವ ಲಕ್ಷಣ ಕಂಡುಬರುತ್ತಿದೆ. ಆದರೂ ಸದ್ಯಕ್ಕೆ ಜಿಲ್ಲೆಯಲ್ಲಿ 13 ವೆಂಟಿಲೇಟರ್, 35 ಐಸಿಯು ಬೆಡ್ ಹಾಗೂ 6 ಎಚ್‌ಎಫ್‌ಎನ್‌ಸಿ ಮಾತ್ರ ಭರ್ತಿಯಾಗಿವೆ ಎಂದು ಜಿ.ಜಗದೀಶ್ ನುಡಿದರು.

ಈ ವರ್ಷದ ಜನವರಿ ಬಳಿಕ ಉಡುಪಿ ಜಿಲ್ಲೆಯಲ್ಲಿ ಕೇವಲ ನಾಲ್ಕು ಕೋವಿಡ್ ಸಾವು ಸಂಭವಿಸಿದೆ. ಈಗಿನ ಪರಿಸ್ಥಿತಿಯಲ್ಲಿ ಐಸಿಯು ಬೇಡಿಕೆ ಜಾಸ್ತಿಯಾಗುವ ಸಾಧ್ಯತೆ ಇದೆ. ಐಸಿಯು ಬೆಡ್ ಬೇಡಿಕೆ ಹೆಚ್ಚಾದರೆ ಸಾವಿನ ಪ್ರಮಾಣವೂ ಏರುವ ಸಾಧ್ಯತೆ ಇರುತ್ತದೆ. ಆದುದರಿಂದ ಸರಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಅಲ್ಲೂ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾದಿರಿಸಲು ಸೂಚಿಸಲಾಗಿದೆ ಎಂದರು.

ಸರಕಾರಿ ಆಸ್ಪತ್ರೆಯಲ್ಲಿ 41 ಐಸಿಯು ಬೆಡ್

ನಮ್ಮಲ್ಲೀಗ ಸರಕಾರಿ ವ್ಯವಸ್ಥೆಯಲ್ಲಿ 41 ಐಸಿಯು ಬೆಡ್‌ಗಳು, 46 ವೆಂಟಿಲೇಟರ್ ಬೆಡ್, 12 ಎಚ್‌ಎಫ್‌ಎನ್‌ಸಿ ಹಾಗೂ 480 ಆಕ್ಸಿಜನ್ ಬೆಡ್‌ಗಳಿವೆ. ಖಾಸಗಿ ಆಸ್ಪತ್ರೆಗಳಲ್ಲಿ 629 ಆಕ್ಸಿಜನ್ ಬೆಡ್, 428 ಸಾಮಾನ್ಯ ಬೆಡ್, 100 ಐಸಿಯು ಬೆಡ್ ಹಾಗೂ 13 ಎಚ್‌ಎಫ್‌ಎನ್‌ಸಿ ಬೆಡ್‌ಗಳಿವೆ. ಇವುಗಳಲ್ಲಿ 49 ಆಕ್ಸಿಜನ್ ಬೆಡ್, 158 ಸಾಮಾನ್ಯ ಬೆಡ್, 27 ಎಚ್‌ಡಿಯು, 44 ಐಸಿಯು ಹಾಗೂ 8 ಎಚ್‌ಎಫ್‌ಎನ್‌ಸಿ ಬೆಡ್‌ಗಳು ಭರ್ತಿಯಾಗಿವೆ ಎಂದವರು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಈಗ ಪ್ರತಿದಿನ 3000 ಕೋವಿಡ್ ಪರೀಕ್ಷೆಗಳಾಗುತ್ತಿವೆ. ಇಡೀ ರಾಜ್ಯದಲ್ಲಿ ಅತ್ಯಧಿಕ ಪರೀಕ್ಷೆ ನಡೆಸುತ್ತಿರುವ ಹೆಗ್ಗಳಿಕೆ ಉಡುಪಿ ಜಿಲ್ಲೆಗಿದೆ. ಇದರಿಂದ ರೋಗವನ್ನು ಬೇಗ ಪತ್ತೆ ಹಚ್ಚಿ ತ್ವರಿತವಾಗಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿ. ಜಿಲ್ಲೆಯ ಲ್ಲೀಗ ಕಾರ್ಕಳದ ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ಒಂದು ಮಾತ್ರ ಕಂಟೈನ್‌ಮೆಂಟ್ ವಲಯವಾಗಿದೆ. ಮಣಿಪಾಲದ ಎಂಐಟಿಯನ್ನು ಈಗಾಗಲೇ ಡಿನೊಟಿಫೈ ಮಾಡಲಾಗಿದೆ ಎಂದರು.

ಚಿಕಿತ್ಸೆಗೆ ಆಸ್ಪತ್ರೆಗಳು: ಸದ್ಯ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯ ಎರಡು ಮಹಡಿಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಿಟ್ಟುಕೊಡಲು ಆಡಳಿತ ಮಂಡಳಿ ಒಪ್ಪಿಕೊಂಡಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಉಳಿದೆರಡು ಮಹಡಿಗಳನ್ನು ನೀಡುವ ಬಗ್ಗೆ ಸಹಮತ ಸೂಚಿಸಿದ್ದಾರೆ. ಮಣಿಪಾಲದಲ್ಲೂ ಸದ್ಯ ಕೋವಿಡ್ ರೋಗಿಗಳ ಚಿಕಿತ್ಸೆಗೆ 20 ಬೆಡ್ ಹಾಗೂ ಐಸಿಯು ಬೆಡ್ ನೀಡಿದ್ದಾರೆ. ಮುಂದೆ ಬೇಡಿಕೆ ಹೆಚ್ಚಾದಂತೆ 200 ಬೆಡ್‌ಗಳನ್ನು ನೀಡುವ ಭರವಸೆ ಆಡಳಿತ ಮಂಡಳಿಯಿಂದ ಸಿಕ್ಕಿದೆ ಎಂದು ಜಗದೀಶ್ ನುಡಿದರು.

ಸದ್ಯಕ್ಕೆ ಜಿಲ್ಲೆಯಲ್ಲಿ ಐಸಿಯು ಬೆಡ್‌ಗಳ ಕೊರತೆ ಇಲ್ಲ. ಬೇಕಷ್ಟು ಲಭ್ಯವಿದೆ. ಆದರೆ ಜನರು ಕೋವಿಡ್ ಲಕ್ಷಣ ಕಂಡಾಕ್ಷಣ ಪರೀಕ್ಷೆಗೊಳಪಟ್ಟು ಚಿಕಿತ್ಸೆಗೆ ಬರಬೇಕು. ಆಗ ಮಾತ್ರ ತ್ವರಿತ ಚಿಕಿತ್ಸೆಯಿಂದ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಪೊಲೀಸ್ ವೈದ್ಯಾಧಿಕಾರಿ ವಿಷ್ಣುವರ್ಧನ್, ಎಡಿಸಿ ಸದಾಶಿವ ಪ್ರಭು, ಉಪವಿಭಾಗಾಧಿಕಾರಿ ಕೆ.ರಾಜು ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ

ಉಡುಪಿ ಜಿಲ್ಲೆಯಲ್ಲಿ ಆಕ್ಸಿಜನ್ ಸಂಗ್ರಹವಿದೆ. ಸದ್ಯಕ್ಕಂತೂ ಇಲ್ಲಿ ಆಕ್ಸಿಜನ್‌ನ ಕೊರತೆ ಇರುವುದಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಆರು ಕೆಎಲ್‌ನ ಟ್ಯಾಂಕ್, ಕೆಎಂಸಿ ಮಣಿಪಾಲದಲ್ಲಿ 20 ಕೆಎಲ್‌ನ ಟ್ಯಾಂಕ್ ಲಭ್ಯವಿದೆ. ಜಂಬೋ ಸಿಲಿಂಡರ್‌ನ್ನು ಮಂಗಳೂರಿನಿಂದ ತರಿಸಲಾಗುತ್ತಿದೆ. ಅಲ್ಲದೇ ಬೆಳಪುವಿನಲ್ಲಿ 25 ಕೆಎಲ್‌ನ ರಿಫೀಲ್ ಫ್ಲಾಂಟ್ ಸಿದ್ಧವಾಗಿದ್ದು, ಸೋಮವಾರದಿಂದ ಕಾರ್ಯಾರಂಭ ಮಾಡಲಿದೆ ಎಂದು ಜಿ.ಜಗದೀಶ್ ವಿವರಿಸಿದರು.

ಸರಕಾರದ ಸೂಚನೆಯಂತೆ ಕೈಗಾರಿಕಾ ಬೇಡಿಕೆಗಳಿಗೆ ಸರಬರಾಜನ್ನು ಕಡಿಮೆ ಮಾಡಿ, ಜೀವ ಉಳಿಸುವ ಉದ್ದೇಶಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಲಿದ್ದೇವೆ. ಈ ಮೂಲಕ ಜಿಲ್ಲೆಯಲ್ಲಿ ಆಕ್ಸಿಜನ್‌ಗೆ ಕೊರತೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಸದ್ಯಕ್ಕೆ ಜಿಲ್ಲೆಯಲ್ಲಿ ಲಸಿಕೆಗೂ ಕೊರತೆ ಕಂಡುಬಂದಿಲ್ಲ. ವಾರ ವಾರ ನಿಗದಿತ ಪ್ರಮಾಣದಲ್ಲಿ ಲಸಿಕೆ ಲಭ್ಯವಾಗುತ್ತಿದೆ. 18 ವರ್ಷದ ಮೇಲಿನವರಿಗೆ ಲಸಿಕೆ ನೀಡುವ ಸೂಚನೆ ಬಂದರೆ, ಸರಕಾರದಿಂದ ಹೆಚ್ಚುವರಿ ಲಸಿಕೆ ಸಿಗಲಿದೆ ಎಂದವರು ಹೇಳಿದರು.

ವೀಕೆಂಡ್ ಕರ್ಫ್ಯೂನಲ್ಲಿ ಬೆಳಗ್ಗೆ 6ರಿಂದ 10ಕ್ಕೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ಇಂದು ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 8ಗಂಟೆಯವರೆಗೆ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜನರಿಗೆ ಬೆಳಗ್ಗೆ 6ರಿಂದ 10ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುತ್ತದೆ. ಅದೂ ತಮ್ಮ ಮನೆಯ ಸಮೀಪದ ಅಂಗಡಿಯಿಂದ ಇದನ್ನು ಖರೀದಿಸಬೇಕಾಗುತ್ತದೆ. ಅನಂತರ ಯಾವುದಕ್ಕೂ ಅವಕಾಶವಿರುವುದಿಲ್ಲ ಎಂದರು.

ಆದರೆ ಹೊಟೇಲ್‌ಗಳು ತೆರೆದಿದ್ದು, ಪಾರ್ಸೆಲ್‌ಗಳನ್ನು ಮಾತ್ರ ನೀಡಬಹುದಾಗಿದೆ. ಮೆಡಿಕಲ್ ಶಾಪ್‌ಗಳು ಬಾಗಿಲು ತೆರೆದಿರುತ್ತವೆ. ತುರ್ತು ಸಂದರ್ಭದಲ್ಲಿ ಹೋಗುವವರಿಗೆ ಅವಕಾಶ ನೀಡಲಾಗುತ್ತದೆ. ಅದಕ್ಕೆ ಸೂಕ್ತ ದಾಖಲೆ ನೀಡಬೇಕಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X