ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಅವಧಿ ವಿಚಾರ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಎ.23: ಐಎಎಸ್ ಮತ್ತು ಐಪಿಎಸ್ ಸೇರಿ ನಾಗರಿಕ ಸೇವಾ ವೃಂದದ ವರ್ಗಾವಣೆ ವಿಚಾರದಲ್ಲಿ ಕನಿಷ್ಠ ಸೇವಾವಧಿ ನಿಗದಿಪಡಿಸುವ ಮತ್ತು ಅದಕ್ಕಾಗಿ ಕೇಂದ್ರ ನಾಗರಿಕ ಸೇವಾ ಮಂಡಳಿ ರಚಿಸುವ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ವಕೀಲೆ ಸುಧಾ ಕಾಟ್ವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿತು.
ಕೆಲ ಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಸುಧಾರಣಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತು.
Next Story





