ಉಡುಪಿ: ದಿನದಲ್ಲಿ 7184 ಮಂದಿಯಿಂದ ಲಸಿಕೆ ಸ್ವೀಕಾರ
ಉಡುಪಿ, ಎ.23: ಕೊರೋನ ವಿರುದ್ಧದ ಲಸಿಕೆಯನ್ನು ಜಿಲ್ಲೆಯಲ್ಲಿ ಇಂದು ಒಟ್ಟು 7184 ಮಂದಿ ಸ್ವೀಕರಿಸಿದ್ದಾರೆ. ಇವರಲ್ಲಿ 3993 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 3191 ಮಂದಿಗೆ ಎರಡನೇ ಡೋಸ್ ನೀಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 6963 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 3947 ಮಂದಿ ಮೊದಲ ಡೋಸ್‌ನ್ನೂ, 3016 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 179 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 127 ಮಂದಿ ಕೊರೋನ ಮುಂಚೂಣಿ ಯೋಧರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 1,77,935 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 37,916 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
Next Story





