Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಪಿಎಂಇಎ ಕಾಯ್ದೆ ಉಲ್ಲಂಘನೆ ಆರೋಪ :...

ಕೆಪಿಎಂಇಎ ಕಾಯ್ದೆ ಉಲ್ಲಂಘನೆ ಆರೋಪ : ಸುರತ್ಕಲ್‌ನ ಆಸ್ಪತ್ರೆಯನ್ನು ಮುಚ್ಚಿಸಿದ ದ.ಕ. ಜಿಲ್ಲಾಡಳಿತ

ವಾರ್ತಾಭಾರತಿವಾರ್ತಾಭಾರತಿ23 April 2021 9:41 PM IST
share

ಮಂಗಳೂರು, ಎ.23: ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಆ್ಯಕ್ಟ್ (ಕೆಪಿಎಂಇಎ ಕಾಯ್ದೆ)ನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಸುರತ್ಕಲ್‌ನ ಮಿಸ್ಕಿತ್ ಆಸ್ಪತ್ರೆಯನ್ನು ದ.ಕ.ಜಿಲ್ಲಾಡಳಿತ ಶುಕ್ರವಾರ ಮುಚ್ಚಿಸಿದೆ.

ಈ ಆಸ್ಪತ್ರೆಯ ಆರ್ಯುವೇದ ವೈದ್ಯರು ಅಲೋಪತಿ ಪದ್ಧತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರೆ, ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶುಶ್ರೂಷಕಿಯರು ಕೂಡ ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ಮಾನ್ಯತೆ ಪಡೆಯದೆ ಚಿಕಿತ್ಸೆಯನ್ನು ನೀಡುತ್ತಿರುವ ಬಗ್ಗೆ ಪರಿಶೀಲಿಸಿದಾಗ ಬೆಳಕಿಗೆ ಬಂದಿದೆ ಎಂದು ದ.ಕ.ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಕೆಪಿಎಂಇಎ ಸಕ್ಷಮ ಪ್ರಾಧಿಕಾರ ಅಧ್ಯಕ್ಷ ಡಾ.ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಾ.6ರಿಂದ 8ರವರೆಗೆ ಮಾಧವ ಎಂಬವರ ಪತ್ನಿ ಅಪ್ಪಿ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆವಾಗ ರೋಗಿಯ ಕೋವಿಡ್ ಪರೀಕ್ಷೆ ನಡೆಸದೆ ರೋಗಿಯ ಚಿಕಿತ್ಸೆಯ ಬಗ್ಗೆ ನಿರ್ಲಕ್ಷ್ಯ ತಾಳಿದ್ದರು ಎನ್ನಲಾಗಿದ್ದು, ಮಾ.18ರಂದು ಅಪ್ಪಿ ಕೋವಿಡ್‌ನಿಂದ ಮೃತಪಟ್ಟಿದ್ದರು. ಈ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದಾಗ ರೋಗಿಯ ಚಿಕಿತ್ಸೆಯ ಬಗ್ಗೆ ವೈದ್ಯಕೀಯ ನಿರ್ಲಕ್ಷ ತಾಳಿರುವುದು ದಾಖಲೆಗಳಿಂದ ತಿಳಿದು ಬಂದಿದೆ. ಆಯುರ್ವೇದ ಪದ್ಧತಿಯ ವೈದ್ಯರು ಅಲೋಪತಿ ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದರಲ್ಲದೆ, ಆಸ್ಪತ್ರೆಯ ಆವರಣದಲ್ಲಿ ಕೆಪಿಎಂಇಎ ನೋಂದಣಿ ಇಲ್ಲದೆ ಕ್ಲಿನಿಕ್ ನಡೆಸುತ್ತಿರುವುದು ಕೂಡ ತನಿಖೆಯ ವೇಳೆ ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಶೀಲನೆಯ ಸಂದರ್ಭ ಆಸ್ಪತ್ರೆಯಲ್ಲಿ 18 ರೋಗಿಗಳಿದ್ದರೂ ಕೂಡ ಕೇಸ್‌ಶೀಟ್‌ನಲ್ಲಿ ಕೇವಲ 9 ಮಂದಿಯನ್ನು ಅಧಿಕೃತವಾಗಿ ದಾಖಲಿಸಿರುವುದು ಕಂಡು ಬಂದಿದೆ. ನಾಲ್ಕು ಮಂದಿಯಲ್ಲಿ ಜ್ವರದ ಲಕ್ಷಣಗಳು ಕಂಡು ಬಂದಿದ್ದು, ಸಾಂಕ್ರಾಮಿಕ ಕಾಯ್ದೆಯನ್ನು ಅನುಸರಿಸದೆ ಉಲ್ಲಂಘಿಸಲಾಗಿದೆ. ಈ ಎಲ್ಲಾ ಕಾರಣಕ್ಕಾಗಿ ಶುಕ್ರವಾರ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಆಸ್ಪತ್ರೆಯ ನೋಂದಣಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿದು ಆಸ್ಪತ್ರೆಯನ್ನು ಮುಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ತಜ್ಞವೈದ್ಯ ಡಾ. ರಹ್ಮಾನ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಅಶ್ಪಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳಿಪಾಡಿ, ಕೆಪಿಎಂಇಎ ಕಾಯ್ದೆಯ ಕಾನೂನು ಸಲಹೆಗಾರ ಚಂದ್ರಹಾಸ, ಶುಶ್ರೂಷಾಧಿಕಾರಿ ಗುಲ್ಜಾರ್ ಬಾನು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X