Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ...

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸೈಕಲ್ ಟ್ರಾಕ್ ನಿರ್ಮಾಣ ಶ್ಲಾಘನೀಯ: ಎಮ್. ಎಸ್. ಮುತ್ತಲಿಬ್

ವಾರ್ತಾಭಾರತಿವಾರ್ತಾಭಾರತಿ23 April 2021 9:59 PM IST
share
ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸೈಕಲ್ ಟ್ರಾಕ್ ನಿರ್ಮಾಣ ಶ್ಲಾಘನೀಯ: ಎಮ್. ಎಸ್. ಮುತ್ತಲಿಬ್

ಮಂಗಳೂರು, ಎ. 23:  ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಯಲ್ಲಿ, ಸೈಕಲ್ ಟ್ರಾಕ್ ನಿರ್ಮಾಣಕ್ಕೆ ಮುಂದಾಗಿರುವ ಸರಕಾರದ ನಿರ್ಣಯವು ಹರ್ಷದಾಯಕ ಕ್ರಮವೆಂದು ನಗರದ ಪ್ರಸಿದ್ಧ ತಾಜ್ ಸೈಕಲ್ ಸಂಸ್ಥೆಗಳ ಮಾಲಕ ಎಮ್. ಎಸ್. ಮುತ್ತಲಿಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದು ಮಂಗಳೂರು ನಗರವನ್ನು ಸ್ಮಾರ್ಟ್ ಸಿಟಿಯಾಗಿ ಪರಿವರ್ತಿಸುವಲ್ಲಿ ಒಂದು ಉತ್ತಮ ಹೆಜ್ಜೆಯಾಗಿರುವುದಲ್ಲದೆ, ಮಂಗಳೂರಿನ ಸೈಕ್ಲರ್ಸ್ ಗಳ ಮನವಿಗೆ ದೊರೆತ ಮಾನ್ಯತೆಯೂ ಆಗಿದೆ, ನಗರದಲ್ಲಿ ಈಗಾಗಲೇ ಸೈಕಲ್ ತುಳಿಯುವ ಜನಗಳು ಬಹುತೇಕ ಕಡಿಮೆಗೊಂಡಿರುವುದರಲ್ಲಿ, ಸೈಕಲ್ ಗಳಿಗೆ ಪ್ರತ್ಯೇಕ ಟ್ರಾಕ್ ಗಳಿಲ್ಲದಿರುವುದೂ ಒಂದು ಕಾರಣವಾಗಿದೆ. ಯಾಕೆಂದರೆ, ಇಂದು ಮಂಗಳೂರು ಮಹಾನಗರದ  ಪ್ರಮುಖ ರಸ್ತೆಗಳೆಂದು ಮಾತ್ರವಲ್ಲದೆ ಸಿಟಿ ಬಸ್ಸುಗಳ ಮತ್ತು ಇತರ ವಾಹನಗಳ ದಟ್ಟಣೆಯಿರುವ ಯಾವುದೇ ಒಳ ರಸ್ತೆಗಳಲ್ಲಿ ಕೂಡಾ ಸೈಕಲಿಂಗ್ ಅಪಾಯಕಾರಿಯೆಂಬಂತಹ ಸ್ಥಿತಿಯಲ್ಲಿ ವಾಹನಗಳ ವೇಗದ ಓಡಾಟ ಸಾಮಾನ್ಯವಾಗಿದೆ. ಇದರಿಂದಾಗಿ ಬೆಳಗಿನ ಜಾವ ಮತ್ತು ಸಂಧ್ಯಾ ಸಮಯದಲ್ಲಿ ವ್ಯಾಯಾಮಕ್ಕಾಗಿ ಸೈಕಲ್ ಓಡಿಸುವವರೂ ಹಿಂದೇಟು ಹಾಕುವಂತಹ ಸನ್ನಿವೇಶವೆದುರಾಗಿದ್ದು, ಮಹಾ ನಗರದೆಲ್ಲೆಡೆ, ಪ್ಲಾಟ್ ಗಳಲ್ಲಿ ವಾಸಿಸುವ ಜನರು ತಮ್ಮ ಮಕ್ಕಳು ಸೈಕಲ್ ತೆಗೆದು ಪ್ಲಾಟ್ ಆವರಣದ ಹೊರಗೆ ಹೋಗದಂತೆ ಎಚ್ಚರಿಕೆವಹಿಸುತ್ತಿದ್ದಾರೆ ಹೀಗೆ ಮಕ್ಕಳು ತಮ್ಮ ಮುಕ್ತ ಆಟೋಟ ಮನರಂಜನೆಯಿಂದಲೂ, ಅವಕಾಶ ವಂಚಿತರಾಗುತ್ತಿದ್ದಾರೆ, ಈ ನಿಟ್ಟಿನಲ್ಲಿ ಸದ್ಯ ಸುಮಾರು 6.4 ಕೋಟಿ ರೂಪಾಯಿ ವೆಚ್ಚದಲ್ಲಿ ಕನಿಷ್ಠ 12 ಕಿ. ಮೀ. ಸೈಕಲ್ ಟ್ರಾಕ್ ನಿರ್ಮಿಸಲು ನೀಡಿದ ಸರ್ಕಾರದ ಆದೇಶ ಸ್ವಾಗತಾರ್ಹ. ಇದಕ್ಕಾಗಿ ಮುತುವರ್ಜಿವಹಿಸಿದ ಶಾಸಕ ವೇದವ್ಯಾಸ ಕಾಮತ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದನಾರ್ಹರೆಂದು ಹೇಳಿದರು.

ನಮ್ಮ ನಗರವೂ ಬೆಂಗಳೂರು, ಚೆನ್ನೈ ಮಹಾನಗರಗಳಂತೆ ಬೈಸಿಕಲ್ ಟ್ರಾಕ್ ಹೊಂದಿರುವ ಮಹಾನಗರಗಳ ಸಾಲಿಗೆ ಸೇರಲಿದೆಯೆಂದು ಸುಮಾರು 94 ವರ್ಷಗಳಿಂದ, ತನ್ನ ತಂದೆಯ ಕಾಲದಿಂದಲೇ ಅಸ್ತಿತ್ವ ಹೊಂದಿರುವ, 1927 ರಲ್ಲಿ ಸ್ಥಾಪನೆಯಾದ ಜಿಲ್ಲೆಯ ಹೆಸರಾಂತ ತಾಜ್ ಸೈಕಲ್ ಸಮೂಹ ಸಂಸ್ಥೆಗಳ ಮಾಲಕ ಎಮ್. ಎಸ್. ಮುತ್ತಲಿಬ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X