Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಲಾನ್ ರೆಮ್‍ಡೆಸಿವಿರ್ ಉತ್ಪಾದಕ...

ಮೈಲಾನ್ ರೆಮ್‍ಡೆಸಿವಿರ್ ಉತ್ಪಾದಕ ಘಟಕಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ಭೇಟಿ

ರಾಜ್ಯಕ್ಕೆ 15000 ವೈಯಲ್ಸ್ ರೆಮ್‍ಡೆಸಿವಿರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ23 April 2021 10:54 PM IST
share

ಬೆಂಗಳೂರು, ಎ.23: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ನಡೆಸಿದ ಪ್ರಯತ್ನದ ಫಲವಾಗಿ ಮೈಲಾನ್ ಫಾರ್ಮಾ ಕಂಪನಿಯು ರಾಜ್ಯಕ್ಕೆ ಹೆಚ್ಚುವರಿ ರೆಮ್‍ಡೆಸಿವಿರ್ ಚುಚ್ಚುಮದ್ದು ಒದಗಿಸಲು ಒಪ್ಪಿಕೊಂಡಿದೆ.

ಕೊರೋನ ಚಿಕಿತ್ಸೆಯಲ್ಲಿ ಬಳಸುವ ರೆಮ್‍ಡೆಸಿವಿರ್ ಉತ್ಪಾದನೆ ಮತ್ತು ಪೂರೈಕೆ ಏರುಪೇರಾದ ಕಾರಣ ಕಳೆದ ವಾರದಿಂದ ಕೇಂದ್ರ ಸರಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಫಾರ್ಮಾ ಕಂಪನಿಗಳು ತಮ್ಮ ರೆಮ್‍ಡೆಸಿವಿರ್ ಉತ್ಪಾದನೆಯಲ್ಲಿ ಶೇ.70ರಷ್ಟು ಕೇಂದ್ರ ಸರಕಾರವು ಸೂಚಿಸುವ ರಾಜ್ಯಗಳಿಗೆ ನಿಗದಿತ ಪ್ರಮಾಣದಲ್ಲಿ ಪೂರೈಕೆ ಮಾಡಬೇಕಾಗುತ್ತದೆ. ಇನ್ನುಳಿದ ಶೇ.30ರಷ್ಟು ಉತ್ಪಾದನೆಯ ವಿತರಣೆಯನ್ನು ಕಂಪನಿಗಳ ವಿವೇಚನೆಗೆ ಬಿಡಲಾಗಿದೆ.

ಮೊನ್ನೆ ಬುಧವಾರ ಕೇಂದ್ರವು ಕರ್ನಾಟಕಕ್ಕೆ ಎಪ್ರಿಲ್ 30ರವರೆಗಿನ ಬಳಕೆಗಾಗಿ 25352 ರೆಮ್‍ಡೆಸಿವಿರ್ ವೈಯಲ್ಸ್ ಹಂಚಿಕೆ ಮಾಡಿತ್ತು. ಆದರೆ ರಾಜ್ಯವು ಹೆಚ್ಚುವರಿ ರೆಮ್‍ಡೆಸಿವಿರ್ ವೈಯಲ್ಸ್ ಗೆ ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಔಷಧ ಇಲಾಖೆಯನ್ನೂ ನಿರ್ವಹಿಸುವ ಸದಾನಂದ ಗೌಡ ಮಧ್ಯಪ್ರವೇಶಿಸಬೇಕಾಗಿ ಬಂತು. ಹೀಗಾಗಿ ರಾಜ್ಯಕ್ಕೆ ನಿನ್ನೆ ಗುರುವಾರ ಹೆಚ್ಚುವರಿಯಾಗಿ 25,000 ರೆಮ್‍ಡೆಸಿವಿರ್ ವೈಯಲ್ಸ್ ಹಂಚಿಕೆಯಾಯಿತು. ಈ ವಾರದ ಬಳಕೆಗಾಗಿ ರಾಜ್ಯಕ್ಕೆ ಹಂಚಿಕೆಯಾದ ಒಟ್ಟು 50,352 ವೈಯಲ್ಸ್ ರೆಮ್‍ಡೆಸಿವಿರ್‍ನಲ್ಲಿ ಮುಕ್ಕಾಲು ಭಾಗವನ್ನು ಮೈಲಾನ್ ಕಂಪನಿಯೇ ಪೂರೈಸಬೇಕಿದೆ.

ಬೆಂಗಳೂರಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿರುವ ಮೈಲಾನ್ ಕಂಪನಿ ಔಷಧ ಉತ್ಪಾದನಾ ಘಟಕಕ್ಕೆ ಇಂದು ಭೇಟಿ ನೀಡಿದ ಸದಾನಂದ ಗೌಡ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಬೊಮ್ಜೈ ಮತ್ತವರ ಸಹಪಾಠಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ರಾಜ್ಯಕ್ಕೆ ಇಂದು 15000 ವೈಯಲ್ಸ್ ರೆಮ್‍ಡೆಸಿವಿರ್ ಬಿಡುಗಡೆ ಆಗಿದೆ. ಮೈಲಾನ್ ಕಂಪನಿಯು ಉತ್ಪಾದನೆಯನ್ನು ಹೆಚ್ಚಿಸುತ್ತಿದೆ. ಕಂಪನಿಯು ವಿವೇಚನಾಧೀಕಾರದಲ್ಲಿ ಬರುವ ಶೇ.30ರಷ್ಟು ಉತ್ಪಾದನೆಯಲ್ಲಿ ರಾಜ್ಯಕ್ಕೆ ಹಚ್ಚುವರಿ ರೆಮ್‍ಡೆಸಿವಿರ್ ವೈಯಲ್ಸ್ ಒದಗಿಸಲು ಒಪ್ಪಿಕೊಂಡಿದೆ ಎಂದರು.

ಅದೇ ರೀತಿ ಅಮೆರಿಕದ ಗಿಲೀಡ್ ಸೈಯನ್ಸಸ್ ಕಂಪನಿಯಿಂದ ರೆಮ್ಡಿಸಿವಿರ್ ಉತ್ಪಾದನೆಯ ಲೈಸನ್ಸ್ ಪಡೆದಿರುವ ಭಾರತದ ಇತರ ಫಾರ್ಮಾ ಕಂಪನಿಗಳ ಜೊತೆಗೂ ಹೆಚ್ಚುವರಿ ಚುಚ್ಚುಮದ್ದು ಪೂರೈಸುವ ಬಗ್ಗೆ ಮಾತುಕತೆ ನಡೆದಿದೆ. ಹಾಗಾಗಿ ಇನ್ನೊಂದು ವಾರದಲ್ಲಿ ಈ ಚುಚ್ಚುಮದ್ದು ವಿಫುಲವಾಗಿ ಲಭ್ಯವಾಗಲಿದೆ. ಯಾರೂ ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಪ್ರಶ್ನೆಯೊಂದಿಗೆ ಉತ್ತರಿಸಿದ ಅವರು, ರೆಮ್‍ಡೆಸಿವಿರ್ ಕಾಳಸಂತೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಲಾಗಿದೆ. ಕಳೆದ ಹಂಗಾಮಿನಲ್ಲಿ ರಸಗೊಬ್ಬರ ಕಾಳಸಂತೆ ಮಾಡಿದ ನೂರಕ್ಕೂ ಹೆಚ್ಚು ವಿತರಕರ ಲೈಸನ್ಸ್ ರದ್ದುಗೊಳಿಸಲಾಗಿತ್ತು. ಈ ವಿಚಾರವಾಗಿಯೂ ಕಠಿಣ ಕ್ರಮ ಜಾರಿಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್, ಬೆಂಗಳೂರು ದಕ್ಷಿಣ ಶಾಸಕ ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ವೈ.ಎನ್.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X