ಜೋಡುಪಾಲ ಬಳಿ ರಸ್ತೆ ಬದಿ ಮಣ್ಣು ಕುಸಿತ: ಭಾರೀ ವಾಹನಗಳ ಸಂಚಾರ ಸ್ಥಗಿತ ಸಾಧ್ಯತೆ

ಮಡಿಕೇರಿ ಏ.23 : ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಜೋಡುಪಾಲ ಬಳಿ ರಸ್ತೆ ಬದಿ ಮಣ್ಣು ಕುಸಿದಿದ್ದು, ಸ್ಥಳಕ್ಕೆ ಶಾಸಕ ಕೆ.ಜಿ.ಬೋಪಯ್ಯ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ರಸ್ತೆ ಬದಿ ನಿರ್ಮಾಣ ಮಾಡಲಾಗಿರುವ ಚರಂಡಿ ಬಳಿ ಮಣ್ಣು ಕುಸಿದಿದ್ದು, ರಸ್ತೆಯ ಮೇಲೆ ನೀರು ಹೋಗುತ್ತಿದೆ. ಆದ್ದರಿಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಗೆ ಸೂಚಿಸಿದರು.
ಹೆದ್ದಾರಿ ಬಳಿ ಮತ್ತಷ್ಟು ಸಿಪೇಜ್ ಆಗುವುದು ಕಂಡುಬಂದಲ್ಲಿ ತಾತ್ಕಾಲಿಕವಾಗಿ ಬದಲಿ ಸಂಚಾರ ಮಾರ್ಗ ಮಾಡುವಂತೆ ನಿರ್ದೇಶನ ನೀಡಿದರು. ಬೃಹತ್ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಡಳಿತಕ್ಕೆ ಶಾಸಕರು ಸಲಹೆ ಮಾಡಿದರು.

Next Story





