ವೀಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂ ನಿಯಮ ಪಾಲಿಸಿ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು, ಎ.24: ಮೇ 4ರವರಗೆ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ವಾರಾಂತ್ಯದ ಕರ್ಫ್ಯೂ ಸಂರ್ಭದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಆದರೂ ನಿರ್ಮಾಣ ಕೆಲಸ ನಡೆಯುವ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದು, ಹೊರಗಿನ ಪ್ರದೇಶದಿಂದ ಕಾರ್ಮಿಕರನ್ನು ಕರೆತರುವ ಅಗತ್ಯವಿಲ್ಲದೆ ನಿರ್ಮಾಣ ಕಾರ್ಯಗಳನ್ನು ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಮಾಸ್ಕ್ ಧರಿಸುವುದು, ಕೈಗಳ ನೈರ್ಮಲ್ಯ ಹಾಗೂ ಸುರಕ್ಷಿತ ಅಂತರವನ್ನು ಕಾಪಾಡುವುದು, ಅಲ್ಲಲ್ಲಿ ಉಗುಳದೆ ಕೋವಿಡ್ ನಿಯಮ ಪಾಲನೆ ಮಾಡುವ ಮೂಲಕ ನಿಯಂತ್ರಣ ಕಾರ್ಯದಲ್ಲಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Next Story





