Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ...

ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ: ಸಚಿವ ಡಾ.ಕೆ.ಸುಧಾಕರ್

''ಕೋವಿಡ್ ಲಕ್ಷಣವಿಲ್ಲದವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡರೆ ಕ್ರಮ''

ವಾರ್ತಾಭಾರತಿವಾರ್ತಾಭಾರತಿ24 April 2021 4:59 PM IST
share
ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ: ಸಚಿವ ಡಾ.ಕೆ.ಸುಧಾಕರ್

ಶೇ.82.08ರಷ್ಟು ಜನರು ಗುಣಮುಖ

ಬೆಂಗಳೂರು, ಎ. 24: ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐಸಿಯು ಹೊಂದಿರುವ ಮೇಕ್‍ಶಿಫ್ಟ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 2 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಮೈಸೂರು, ಬೀದರ್, ಹುಬಳ್ಳಿ, ಬೆಳಗಾವಿ ಹಾಗೂ ಶಿವಮೊಗ್ಗದಲ್ಲಿ ಮಾಡ್ಯೂಲರ್ ಐಸಿಯು ಹೊಂದಿರುವ 200-250 ಮೇಕ್‍ಶಿಫ್ಟ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ. 15 ದಿನದೊಳಗೆ ಈ ಆಸ್ಪತ್ರೆಗಳು ನಿರ್ಮಾಣವಾಗಬೇಕಿದೆ ಎಂದು ಹೇಳಿದರು.

ಕೊರೋನ ಎರಡನೇ ಅಲೆಯಲ್ಲಿ ರೂಪಾಂತರಗೊಂಡ ವೈರಾಣು ಬಂದಿದ್ದು, ಹೊಸ ರೋಗದಂತಿದೆ. ರಾಜ್ಯದಲ್ಲಿ ಹೆಚ್ಚು ಜನರು ಸೋಂಕಿತರಾದರೂ ಸಾವಿನ ಪ್ರಮಾಣ ಶೇ.0.4ರಷ್ಟಿದೆ. ರಾಜ್ಯ ಸರಕಾರ ಇದಕ್ಕಾಗಿಯೇ ಬಿಗಿಯಾದ ಮಾರ್ಗಸೂಚಿ ಪ್ರಕಟಿಸಿದ್ದು, ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಹೊಸ ಮಾರ್ಗಸೂಚಿಯು ಜನರು ಗುಂಪುಗೂಡುವುದನ್ನು, ಅನಗತ್ಯ ಓಡಾಟ ತಪ್ಪಿಸುತ್ತದೆ ಎಂದು ಅವರು ತಿಳಿಸಿದರು.

ಕೋವಿಡ್ ಲಸಿಕೆ ಬೇಗ ಬಂದಿದ್ದು, ಲಸಿಕೆ ಪಡೆಯುವುದರಲ್ಲಿ ಮುಂಚೂಣಿಯಲ್ಲಿರಬೇಕು. ವೈರಾಣು ರೂಪಾಂತರವಾದಂತೆ ಸೋಂಕು ಹೆಚ್ಚಾಗಬಹುದು. ವೈದ್ಯಕೀಯ ಜಗತ್ತಿಗೆ ಇದು ಸವಾಲಾಗಿ ಪರಿಣಮಿಸಿದೆ. ಮೊದಲ ಅಲೆಯಲ್ಲಿ ಯಾರಿಗೂ ಇಷ್ಟು ಆಕ್ಸಿಜನ್ ಅಗತ್ಯವಿರಲಿಲ್ಲ. ಆದರೆ, ಈಗ ಅನೇಕರು ಆಕ್ಸಿಜನ್ ಬೇಕೆಂದು ಹೇಳುತ್ತಿದ್ದಾರೆ. ಕಳೆದ ವರ್ಷ ಪೀಕ್ ಇದ್ದಾಗಲೂ 300-350 ಟನ್ ಆಕ್ಸಿಜನ್ ಪೂರೈಸಲಾಗಿತ್ತು. ಈ ಹಂತದಲ್ಲಿ 500 ಟನ್ ಬಳಕೆಯಾಗುತ್ತಿದೆ. ಇದು ತೀವ್ರವಾದರೆ ಆಕ್ಸಿಜನ್ ಬೇಡಿಕೆ ಹೆಚ್ಚಾಗಬಹುದು. ಅದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು 1,414 ಟನ್ ನಷ್ಟು ಆಕ್ಸಿಜನ್ ಮೇನಲ್ಲಿ ಪ್ರತಿ ದಿನ ಬೇಕಾಗುತ್ತದೆ ಎಂದು ಕೇಂದ್ರ ಸರಕಾರಕ್ಕೆ ಕೋರಿದ್ದಾರೆಂದು ವಿವರಿಸಿದರು.

ಶೇ.82ರಷ್ಟು ಗುಣಮುಖ: ರಾಜ್ಯದಲ್ಲಿ ಈವರೆಗೆ ಶೇ.82.08ರಷ್ಟು ಮಂದಿ ಕೋವಿಡ್‍ನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ 10,46,554 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ. ಇಂತಹ ಸಕಾರಾತ್ಮಕ ಅಂಶಗಳ ಕಡೆಗೂ ಗಮನಹರಿಸಬೇಕು. ಕೇವಲ ಆತಂಕಗೊಂಡು ಕಡಿಮೆ ಲಕ್ಷಣ ಇರುವಾಗಲೂ ಆಸ್ಪತೆಗೆ ದಾಖಲಾದರೆ ತೀವ್ರ ಸೋಂಕಿನಿಂದ ಬಳಲುತ್ತಿರುವವರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಅವರು ತಿಳಿಸಿದರು.

ಯಾವುದೇ ಕಾರಣಕ್ಕೂ ಕೋವಿಡ್ ಲಕ್ಷಣ ಇಲ್ಲದವರನ್ನ ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಬಾರದು. ಈ ರೀತಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಸೋಮವಾರ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಎ.26ರ ಬಳಿಕವೂ ವಾರಂತ್ಯದ ಕರ್ಫ್ಯೂ ಹೇರಿಕೆ ಸೇರಿ ಕಠಿಣ ನಿರ್ಬಂಧ ಹೇರುವ ಸಂಬಂಧ ಚರ್ಚಿಸಿ ತೀರ್ಮಾನ ಮಾಡಲಾಗುವುದು'

-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X