Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದುವೆ ಕಾರ್ಯಕ್ರಮಗಳ ನಿರ್ಬಂಧಗಳನ್ನು...

ಮದುವೆ ಕಾರ್ಯಕ್ರಮಗಳ ನಿರ್ಬಂಧಗಳನ್ನು ಸರಳೀಕರಿಸಲು ಡಿವೈಎಫ್‌ಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 April 2021 8:38 PM IST
share

ಮಂಗಳೂರು, ಎ.24: ಕೋವಿಡ್ ಸೋಂಕು ಹೆಚ್ಚಳದ ಹಿನ್ನಲೆಯಲ್ಲಿ ಜಾರಿಗೊಳಿಸಲಾಗಿರುವ ಹೊಸ ಮಾರ್ಗಸೂಚಿಗಳ ಅನ್ವಯ ನಿಗದಿಯಾಗಿರುವ ಮದುವೆಗಳನ್ನು ನಡೆಸಲು ಅವಕಾಶ ನೀಡಿ ಹಲವು ಕಠಿಣ ನಿಯಮಗಳನ್ನು ವಿಧಿಸಲಾಗಿದೆ. ಆದರೆ ಈಗ ವಿಧಿಸಲಾಗಿರುವ ನಿಯಮಗಳು ಪಾಲಿಸಲು ಅಸಾಧ್ಯವಾಗುವಷ್ಟು ಕಠಿಣವಾಗಿದ್ದು, ಮದುವೆ ನಿಗದಿಯಾಗಿರುವ ಕುಟುಂಬಗಳು ಸ್ಥಿತಿ ದಿಕ್ಕು ಕಾಣದಂತಾಗಿದೆ. ಸರಕಾರ ನಿಯಮಗಳಲ್ಲಿರುವ ಕಠಿಣ ಅಂಶಗಳನ್ನು ತಕ್ಷಣ ತೆಗೆದು ಹಾಕಿ ನಿಗದಿಯಾಗಿರುವ ಮದುವೆಗಳು ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿ ಸರಳವಾಗಿ ನಡೆಯಲು ಅವಕಾಶ ನೀಡಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಪ್ರಭಾವಿಗಳ ಕುಟುಂಬದ ಮದುವೆ, ಮೆಹಂದಿಗಳು ಯಾವುದೆ ಅನುಮತಿ,ನಿರ್ಬಂಧಗಳಿಲ್ಲದೆ ಶಿಷ್ಟಾಚಾರ ಉಲ್ಲಂಘಿಸಿ ನಡೆಯುತ್ತಿದೆ. ಇಂತಹ ತಾರತಮ್ಯಗಳನ್ನು ನಿವಾರಿಸಬೇಕು. ಕೋವಿಡ್-19 ಮಾರ್ಗಸೂಚಿಯ ಪ್ರಕಾರ ಮದುವೆಗಳಿಗೆ ಕೇವಲ 50 ಜನರಿಗಷ್ಟೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಭಾಗವಹಿಸುವ ಪ್ರತಿಯೊಬ್ಬರ ಆಧಾರ್ ಕಾರ್ಡ್ ಸಹಿತ ಗುರುತು ಚೀಟಿಗಳನ್ನು ಸಂಬಂಧ ಪಟ್ಟ ಅಧಿಕಾರಿಗಳ ಮುಂದೆ ಹಾಜರುಪಡಿಸಿ ಪಾಸ್‌ಗಳನ್ನು ಪಡೆಯುವಂತೆ ಸೂಚಿಸಲಾಗಿದೆ. ಇದು ಕಠಿಣ ಶರತ್ತಾಗಿದ್ದು ಮದುವೆ ನಡೆಯುವ ಕುಟುಂಬಸ್ಥರು ಈ ಶರತ್ತನ್ನು ಪಾಲಿಸಲಾಗದೆ ಕಂಗೆಟ್ಟಿದ್ದಾರೆ. ಜೊತೆಗೆ ಬಟ್ಟೆ ಬರೆ, ಚಿನ್ನ, ಅಲಂಕಾರಿಕ ಸಾಮಗ್ರಿಗಳ ಅಂಗಡಿ, ಹೂವಿನ ಸ್ಟಾಲ್ಗಳನ್ನು ಮುಚ್ಚಿಸಿರುವುದು ಮದುವೆ ನಿಗದಿಯಾಗಿರುವ ಕುಟುಂಬಳನ್ನು ಅತ್ಯಂತ ಸಂಕಷ್ಟಮಯ ಸ್ಥಿತಿಗೆ ತಲುಪಿಸಿದೆ. ಈ ಹಿನ್ನಲೆಯಲ್ಲಿ ಸರಕಾರ ಶರತ್ತುಬದ್ಧ ಪಾಸ್ ವಿತರಿಸುವ ಕ್ರಮಗಳನ್ನು ಕೈಬಿಡಬೇಕು. ಮದುವೆಗಳಲ್ಲಿ ಭಾಗವಹಿಸುವ ಜನರ ಮಿತಿಯನ್ನು ಕನಿಷ್ಟ ನೂರರಿಂದ ನೂರೈವತ್ತಕ್ಕೆ ಏರಿಸಬೇಕು. ಮದುವೆಯ ಖರೀದಿಗಳಿಗೆ ಅವಕಾಶ ಒದಗಿಸಬೇಕು, ಕೋವಿಡ್ ಶಿಷ್ಟಾಚಾರ ಪಾಲಿಸಿ ಮದುವೆಗಳು ಸರಳವಾಗಿ ನಡೆಯಲು ವ್ಯವಸ್ಥೆ ಮಾಡಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಹಾಗೆಯೆ ಜನಸಾಮಾನ್ಯರ ಮದುವೆ ಮನೆ, ಮಂಟಪಗಳಿಗೆ ತಪಾಸಣೆಗೆ ನುಗ್ಗುವ ಅಧಿಕಾರಿ ವರ್ಗ, ಕೆಲವೆಡೆ ಪ್ರಭಾವಿ ವ್ಯಕ್ತಿಗಳ ಕುಟುಂಬದ ಮದುವೆ, ಮೆಹಂದಿಗಳು ಯಾವುದೇ ಅನುಮತಿ ಇಲ್ಲದೆ, ಶಿಷ್ಟಾಚಾರಗಳನ್ನು ಮೀರಿ ನಡೆಯಲು ಅವಕಾಶ ನೀಡಿವೆ. ಈ ತಾರತಮ್ಯ ಸಲ್ಲದು. ಉಡುಪಿಯಲ್ಲಿ ಹೆಚ್ಚುವರಿ ಎಸ್ಪಿಯ ಮಗಳ ಮೆಹಂದಿ ಕಾರ್ಯಕ್ರಮ ಅನುಮತಿ ಪಡೆಯದೆ ಕೋವಿಡ್ ಮಾರ್ಗಸೂಚಿ, ಶಿಷ್ಟಾಚಾರ ಉಲ್ಲಂಘಿಸಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಸಹಿತ ಪ್ರತಿಷ್ಟಿತರು ಭಾಗಿಯಾಗಿರುವ ಕುರಿತು ವರದಿಯಾಗಿದೆ. ಇದು ಅಕ್ಷಮ್ಯ ನಡೆಯಾಗಿದ್ದು, ಸಾಮಾನ್ಯ ನಾಗರಿಕರಿಗೂ, ಅಧಿಕಾರಸ್ಥರಿಗೂ ನಡುವೆ ಮಾಡಿದ ಅಸಮಾನತೆಯ ನಿರ್ಲಜ್ಜ ಉದಾಹರಣೆಯಾಗಿದೆ. ಈ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಜಿಲ್ಲಾಧಿಕಾರಿ, ಹೆಚ್ಚುವರಿ ಎಸ್ಪಿ ಸಹಿತ ತಪ್ಪಿತಸ್ಥರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಆ ಮೂಲಕ ಈ ಪ್ರಕರಣದ ಕುರಿತು ಎದ್ದಿರುವ ಜನಾಗ್ರಹಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X