Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಹತೋಟಿಗೆ ಸಿಐಐ ಸಹಯೋಗದಲ್ಲಿ...

ಕೋವಿಡ್ ಹತೋಟಿಗೆ ಸಿಐಐ ಸಹಯೋಗದಲ್ಲಿ ಟಾಸ್ಕ್ ಫೋರ್ಸ್: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ24 April 2021 10:01 PM IST
share
ಕೋವಿಡ್ ಹತೋಟಿಗೆ ಸಿಐಐ ಸಹಯೋಗದಲ್ಲಿ ಟಾಸ್ಕ್ ಫೋರ್ಸ್: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಎ.24: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯನ್ನು ಸಮರ್ಥವಾಗಿ ಹತೋಟಿಗೆ ತರಲು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ(ಸಿಐಐ) ಸಹಯೋಗದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಶನಿವಾರ ನಗರದಲ್ಲಿ ಸಿಐಐ ಪ್ರತಿನಿಧಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಅವರು, ರಾಜ್ಯದಲ್ಲಿ ಕೊರೋನ ಪರಿಸ್ಥಿತಿಯನ್ನು ನಿಯಂತ್ರಿಸಲು ಸಿಐಐ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುತ್ತದೆ. ಈ ಸಮಿತಿಯು ವೈದ್ಯಕೀಯ ಹಾಗೂ ಇತರೆ ಮೂಲಸೌಕರ್ಯಗಳನ್ನು ಬಲಪಡಿಸುವ ಕಾರ್ಯ ಮಾಡಲಿದೆ ಎಂದರು.

ಕೊರೋನ ಕುರಿತ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಕಾಲ್ ಸೆಂಟರ್, ಮಾಡ್ಯೂಲರ್ ಐಸಿಯುಗಳ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳಲ್ಲಿ ಟಾಸ್ಕ್ ಫೋರ್ಸ್ ಮುಂದಾಳತ್ವ ವಹಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಆರೋಗ್ಯ ವಲಯದಲ್ಲಿ ತಂತ್ರಜ್ಞಾನ ಬಳಕೆ, ಔಷಧಿಗಳ ಪೂರೈಕೆ, ವೈದ್ಯಕೀಯ ಸಾಧನ, ಉಪಕರಣಗಳ ಪೂರೈಕೆ, ತಂತ್ರಾಂಶ ಒದಗಿಸುವುದು ಸೇರಿದಂತೆ ಹಲವು ರೀತಿಯಲ್ಲಿ ಟಾಸ್ಕ್ ಫೋರ್ಸ್ ರಾಜ್ಯ ಸರಕಾರಕ್ಕೆ ನೆರವು ನೀಡಲಿದೆ ಎಂದು ಸುಧಾಕರ್ ಹೇಳಿದರು.

ಕಾಲ್ ಸೆಂಟರ್: ಕೋವಿಡ್ ನಿರ್ವಹಣೆ ಮಾಡಲು ಕೆಲ ಸಹಾಯವಾಣಿಗಳಿವೆ. ಆದರೆ ಇದರಿಂದಾಗಿ ಜನರಿಂದ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಇದಕ್ಕಾಗಿ ಒಂದು ಬೃಹತ್ ಕಾಲ್ ಸೆಂಟರ್ ನಿರ್ಮಿಸಿ ಎಲ್ಲವನ್ನೂ ಸಮನ್ವಯಗೊಳಿಸುವ ವ್ಯವಸ್ಥೆ ತರಬೇಕಿದೆ. ಈ ಕಾರ್ಯವನ್ನು ಟಾಸ್ಕ್ ಫೋರ್ಸ್‍ಗೆ ವಹಿಸಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರು ಸಹಾಯವಾಣಿ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಈ ಟಾಸ್ಕ್ ಫೋರ್ಸ್ ಕೋವಿಡ್ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಕುರಿತಾಗಿ ಸರಕಾರಕ್ಕೆ ನೆರವು ನೀಡಲಿದೆ. ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ 3,000-5,000 ಮಾಡ್ಯೂಲರ್ ಐಸಿಯು ಹಾಸಿಗೆ ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕೂ ಟಾಸ್ಕ್ ಫೋರ್ಸ್ ನೆರವಾಗಲಿದೆ. ಕೆಲ ಕಂಪನಿಗಳು ಕೇವಲ 7-10 ದಿನಗಳಲ್ಲಿ ಇಂತಹ ಐಸಿಯು ರೂಪಿಸುವುದಾಗಿ ತಿಳಿಸಿವೆ ಎಂದು ಅವರು ಹೇಳಿದರು.

ಕಂಪನಿಗಳ ಸಿಎಸ್‍ಆರ್ ಅನುದಾನವನ್ನು ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಬಳಸಿಕೊಳ್ಳಲು ಕೇಂದ್ರ ಸರಕಾರ ಸಲಹೆ ನೀಡಿದೆ. ಎಲ್ಲ ಉದ್ಯಮಗಳು ಸಿಎಸ್‍ಆರ್ ಅನುದಾನವನ್ನು ಕೊರೋನ ನಿಯಂತ್ರಣಕ್ಕೆ ನೀಡಬೇಕು. ಅದಕ್ಕಿಂತ ಹೆಚ್ಚಾಗಿ ತಂತ್ರಜ್ಞಾನದ ನೆರವು ನೀಡಬೇಕು ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಶೇ.95ರಷ್ಟು ರೋಗಿಗಳು ಮನೆ ಆರೈಕೆಯಲ್ಲಿದ್ದು, ಅವರಿಗೆ ತಂತ್ರಜ್ಞಾನದ ಮೂಲಕ ಮಾರ್ಗದರ್ಶನ ನೀಡಲು ತಂತ್ರಜ್ಞಾನ ಅಗತ್ಯ. ಹಾಗೆಯೇ ರೆಮ್ ಡಿಸಿವಿರ್, ಟೊಸಿಲಿಜುಮಾಬ್ ಔಷಧಿಗಳನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಲು ನೆರವಾಗಬೇಕು ಎಂದು ಅವರು ಮನವಿ ಮಾಡಿದರು.

ಸಿಐಐ ಮಾಜಿ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ವಿಕ್ರಮ್ ಕಿರ್ಲೋಸ್ಕರ್, ವೈದ್ಯ ಡಾ.ದೇವಿಶೆಟ್ಟಿ ಸಭೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X