Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಡವರ ಖಾತೆಗೆ 25 ಸಾವಿರ ರೂ.ಜಮಾ ಮಾಡಲು...

ಬಡವರ ಖಾತೆಗೆ 25 ಸಾವಿರ ರೂ.ಜಮಾ ಮಾಡಲು ಎಚ್‌.ಎಸ್‌. ಸುಂದರೇಶ್‌ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 April 2021 7:53 PM IST
share
ಬಡವರ ಖಾತೆಗೆ 25 ಸಾವಿರ ರೂ.ಜಮಾ ಮಾಡಲು ಎಚ್‌.ಎಸ್‌. ಸುಂದರೇಶ್‌ ಆಗ್ರಹ

ಶಿವಮೊಗ್ಗ: ಕೊರೋನ ನಿಯಂತ್ರಣಕ್ಕೆ ರಾಜ್ಯ ಸರಕಾರ ಹೇರಿರುವ ಕರ್ಫ್ಯೂದಿಂದಾಗಿ ಬಡ ವ್ಯಾಪಾರಿಗಳು ಜರ್ಜರಿತರಾಗಿದ್ದಾರೆ. ವ್ಯಾಪಾರವಿಲ್ಲದೇ ನಲುಗಿದ್ದಾರೆ. ಅವರ ಖಾತೆಗೆ ಕೂಡಲೇ 25 ಸಾವಿರ ರೂ. ಪರಿಹಾರ ರೂಪದ ಹಣವನ್ನು ಸರಕಾರ ಜಮಾ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ ಒತ್ತಾಯಿಸಿದರು.

ಆನ್‌ಲೈನ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿತ್ಯ ದುಡಿದು ಹೊಟ್ಟೆ ತುಂಬಿಸಿಕೊಳ್ಳುವ ಕಾರ್ಮಿಕರಿಗೆ ಕರ್ಫ್ಯೂದಿಂದಾಗಿ ಕೆಲಸವಿಲ್ಲದಂತಾಗಿದೆ. ಅವರು ಒಂದು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ. ಹೀಗಾಗಿ, ಸರಕಾರ ಈ ನಿಟ್ಟಿನಲ್ಲಿಗಮನ ಹರಿಸಬೇಕು ಎಂದು ಹೇಳಿದರು.

ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸರಕಾರ ಈ ಕ್ರಮ ಕೈಗೊಂಡಿದೆ. ಆದರೆ, ದುಡಿಮೆಯೇ ಇಲ್ಲದೆ ಕಾರ್ಮಿಕರು ಬದುಕುವುದು ಹೇಗೆ ಎಂಬ ಬಗ್ಗೆಯೂ ಯೋಚಿಸಬೇಕು ಎಂದು ತಿಳಿಸಿದರು.

ಸೋಂಕು ಹೆಚ್ಚಲು ಸರಕಾರದ ವೈಫಲ್ಯವೇ ಕಾರಣ: ದೇಶದಲ್ಲಿಸೋಂಕು ಏರುತ್ತಲೇ ಇದೆ. ಇದಕ್ಕೆ ನೇರ ಕಾರಣ ಕೇಂದ್ರ ಮತ್ತು ರಾಜ್ಯ ಸರಕಾರ. ಎರಡನೇ ಅಲೆಯ ಬಗ್ಗೆ ಪೂರ್ವ ಮಾಹಿತಿ ಇದ್ದರೂ ಯಾವುದೇ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿಲ್ಲ. ಇದರಿಂದಾಗಿ, ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈಗಲೂ ರೋಗಿಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಲಾಗಿಲ್ಲ ಎಂದು ಆರೋಪಿಸಿದರು.

ಆಸ್ಪತ್ರೆಗಳಿಗೆ ಸರಿಯಾಗಿ ಆಕ್ಸಿಜನ್‌ ಪೂರೈಕೆ ಮಾಡಲಾಗುತ್ತಿಲ್ಲ ಎಂಬ ವಿಚಾರದ ಬಗ್ಗೆ ನ್ಯಾಯಾಲಯಗಳು ಸಹ ಸರಕಾರಕ್ಕೆ ಸೂಚನೆ ನೀಡಿವೆ. ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೂ ಸ್ಥಿತಿ ಹಾಗೆಯೇ ಇದೆ. ಈ ಹಿಂದೆ ಆಸ್ಪತ್ರೆಯಲ್ಲಿ ಲಭ್ಯವಿರುವ ಬೆಡ್‌ ಸೇರಿದಂತೆ ವಿಚಾರಗಳನ್ನು ಆಸ್ಪತ್ರೆಯಲ್ಲಿಯೇ ಪ್ರದರ್ಶಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿತ್ತು. ಆದರೆ, ಇದುವರೆಗೆ ಈ ನಿಟ್ಟಿನಲ್ಲಿ ತಲೆಕೆಡಿಸಿಕೊಂಡಿಲ್ಲ. ಸೋಂಕಿತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನೇರ ಹೊಣೆ ಎಂದು ಟೀಕಿಸಿದರು. ಕಾಂಗ್ರೆಸ್‌ ಮುಖಂಡರಾದ ಚಂದ್ರಭೂಪಾಲ್‌, ಸೌಗಂಧಿಕ ಇತರರಿದ್ದರು.

"ಬಿಜೆಪಿ ಕಾರ್ಯಕರ್ತರ ಕೈಯಲ್ಲಿ ರೆಮಿಡಿಸಿವರ್‌ "

ಕೋವಿಡ್‌ ಕಾಯಿಲೆಯಿಂದ ಬಳಲುತ್ತಿರುವ ರೋಗಿಗೆ ಅತ್ಯಗತ್ಯವಾಗಿ ಬೇಕಾದ ರೆಮಿಡಿಸಿವರ್‌ ಇಂಜೆಕ್ಷ ನ್‌ಗಳ ಕೊರತೆ ರಾಜ್ಯದೆಲ್ಲೆಡೆ ಇದೆ. ಇದು ಮಾಧ್ಯಮಗಳಲ್ಲೂವರದಿಯಾಗಿದೆ. ಆದರೆ, ಇಂತಹ ಅಮೂಲ್ಯ ಇಂಜೆಕ್ಷನ್‌ಗಳು ಬಿಜೆಪಿ ಕಾರ್ಯಕರ್ತರ ಮನೆಯಲ್ಲಿಲಭ್ಯವಾಗಿವೆ. ಇದು ದುರಾಡಳಿತವಲ್ಲದೇ ಮತ್ತೇನು ಎಂದು ಪ್ರಶ್ನಿಸಿದರು.

ರಾಜ್ಯದ ಹಲವೆಡೆ ನಕಲಿ ರೆಮಿಡಿಸಿವರ್‌ಗಳನ್ನು ವಿತರಿಸಲಾಗುತ್ತಿದೆ. ಇವುಗಳನ್ನು ನಿಗ್ರಹಿಸಬೇಕಾದ ಸರಕಾರ ಸುಮ್ಮನಿರುವುದು ವೈಫಲ್ಯವಲ್ಲದೆ ಮತ್ತೇನು. ಕೊರೊನಾವನ್ನು ಕೇಂದ್ರ ಮತ್ತು ರಾಜ್ಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X