Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ವರದಿ ನೆಗೆಟಿವ್ ಬಂದರೂ ಶ್ವಾಸಕೋಶ...

ಕೊರೋನ ವರದಿ ನೆಗೆಟಿವ್ ಬಂದರೂ ಶ್ವಾಸಕೋಶ ಎಕ್ಸ್ ರೆ ಅಗತ್ಯ: ಡಾ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ25 April 2021 10:27 PM IST
share

ಬೆಂಗಳೂರು: ಕೊರೋನ ಸೋಂಕಿನ ವರದಿ ನೆಗೆಟಿವ್ ಬಂದರೂ ಸೋಂಕು ಶ್ವಾಸಕೋಶಕ್ಕೆ ತಗುಲಿರುವ ಸಾಧ್ಯತೆ ಇರುತ್ತದೆ. ಹೀಗಾಗಿ, ನೆಗೆಟಿವ್ ಬಂದರೂ ಶ್ವಾಸಕೋಶ ಎಕ್ಸರೇ ಮಾಡುವುದು ಅವಶ್ಯ ಎಂದು ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್ ಉಸ್ತುವಾರಿ ಡಾ.ಶಿವಕುಮಾರ್ ಹೇಳಿದ್ದಾರೆ. 

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಾಸಿಗೆ ಇಲ್ಲ, ಸರಿಯಾಗಿ ಚಿಕಿತ್ಸೆ ಆಗುತ್ತಿಲ್ಲ ಎಂದು ಕೊರೋನ ಸೋಂಕಿತರ ಸಂಬಂಧಿಗಳು ವೈದ್ಯರೊಂದಿಗೆ ವಾಗ್ವಾದ, ಮಾತಿನ ಚಕಮಕಿ ನಡೆಸಿದ ಸಂದರ್ಭದಲ್ಲಿ ಸಂಬಂಧಿಗಳನ್ನು ಸಮಾಧಾನಪಡಿಸಿ ಮಾತನಾಡಿದ ಅವರು, ಕೊರೋನ ಎಲ್ಲ ಕಡೆಗೂ ವ್ಯಾಪಿಸಿದೆ ಇದನ್ನು ತಡೆಗಟ್ಟುವ ಕೆಲಸವಾಗಬೇಕಾಗಿದೆ. ಇದನ್ನು ಅರ್ಥ ಮಾಡಿಕೊಳ್ಳಿ. ನಾವು ರೋಗಿಗಳಿಗೆ ಶಕ್ತಿಮೀರಿ ಚಿಕಿತ್ಸೆ ನೀಡುತ್ತಿದ್ದೇವೆ. ಶ್ವಾಸಕೋಶಕ್ಕೆ ಸೋಂಕು ತಗುಲಿ ವೆಂಟಿಲೇಟರ್ ಅಳವಡಿಸಿರುವ ರೋಗಿಗಳು ಉಳಿಯುವುದು ಕಷ್ಟ ಎಂದು ತಿಳಿಸಿದರು. 

ದೇಶದ ಜನಪ್ರತಿನಿಧಿಗಳೇ ಕೊರೋನಕ್ಕೆ ಬಲಿಯಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಯುವ ವೈದ್ಯ ಡಾ.ಸುಹಾಸ್ ಕೊರೋನಕ್ಕೆ ಬಲಿಯಾದರು. ನಾವು ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. 

ಆರ್‍ಟಿಪಿಸಿಆರ್ ನೆಗೆಟಿವ್ ಬಂದಿದೆ ಎಂದು ಸುಮ್ಮನೆ ಕುಳಿತುಕೊಳ್ಳಬೇಡಿ. ಶ್ವಾಸಕೋಶ ಪರೀಕ್ಷೆಗೆ ಒಳಗಾಗಬೇಕು. ಶ್ವಾಸಕೋಶದಲ್ಲಿ ಸೋಂಕು ಹೆಚ್ಚಿದ್ದರೆ ರೋಗಿ ಬದುಕುವುದು ಕಷ್ಟ. ಕೊರೋನ ವಿಚಾರದಲ್ಲಿ ಸುಳ್ಳು, ಸತ್ಯ ಎನ್ನುವುದಿಲ್ಲ. ಎಲ್ಲವೂ ಹಣೆ ಬರಹ ಎಂದು ಅವರು ಬೇಸರದಿಂದ ಹೇಳಿದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಶಕ್ತಿಮೀರಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ ರೋಗಿಗಳು ಸಾಯುತ್ತಿದ್ದಾರೆ. ಏನು ಮಾಡುವುದು, ಸೋಂಕು ಹೆಚ್ಚಾಗಿ ಶ್ವಾಸಕೋಶಕ್ಕೆ ತಗುಲಿದ್ದರೆ ಬದುಕುವುದು ಕಷ್ಟ. ಹೀಗಾಗಿ, ಆರಂಭದಲ್ಲೆ ಸೋಂಕನ್ನು ಪತ್ತೆ ಮಾಡಿ ಚಿಕಿತ್ಸೆ ಪಡೆಯಬೇಕು. ಸೋಂಕು ಉಲ್ಬಣವಾದ ಬಳಿಕ ಕೊರೋನ ರೋಗಿಯನ್ನು ಬದುಕಿಸುವುದು ಕಷ್ಟ ಎಂದು ಹೇಳಿದರು. 

‘ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯಾವುದೇ ಪ್ರಭಾವಕ್ಕೆ ಮಣಿದು ಬೆಡ್ ನೀಡುತ್ತಿಲ್ಲ. ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಬೆಡ್ ನೀಡಿದ್ದೇವೆ. ಎಷ್ಟೋ ಜನ ಐಎಎಸ್, ಕೆಎಎಸ್, ಪೊಲೀಸ್ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಬೆಡ್‍ಗೆ ಬೇಡಿಕೆ ಇಟ್ಟಿದ್ದಾರೆ. ಏನೂ ಮಾಡಲು ಸಾಧ್ಯವಿಲ್ಲ. ದೇವರೇ ಎಲ್ಲರನ್ನೂ ಕಾಪಾಡಬೇಕು.
-ಡಾ.ಶಿವಕುಮಾರ್, ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್ ಉಸ್ತುವಾರಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X