ಕುಂದಾಪುರ ಪ್ಲೈಓವರ್ ಸಂಚಾರಕ್ಕೆ ಮುಕ್ತ

ಕುಂದಾಪುರ, ಎ.26: ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಫ್ಲೈಓವರ್‌ಗೆ ಕೊನೆಗೂ ಸಂಚಾರಕ್ಕೆ ಮುಕ್ತವಾಗಿದೆ.
ಕಳೆದ ಹಲವು ವರ್ಷಗಳಿಂದ ನಿಧಾನಗತಿಯ ಕಾಮಗಾರಿಯಿಂದ ಸಾರ್ವ ಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಪ್ಲೈಓವರ್ ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ರವಿವಾರ ಸಂಜೆಯಿಂದ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕುಂದಾಪುರ ಪ್ಲೈಓವರ್ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಕುಂದಾಪುರ ಹೆದ್ದಾರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಹಲವು ಭಾರಿ ಪ್ರತಿಭಟನೆ ನಡೆಸಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆದಿದ್ದರು.
ಕುಂದಾಪುರ ಪುರಸಭೆಯ ಸಾಮಾನ್ಯ ಸಭೆ ಹಾಗೂ ವಿವಿದೆಡೆ ಈ ಬಗ್ಗೆ ಸಾಕಷ್ಟು ಭಾರಿ ಚರ್ಚೆ ನಡೆದಿದ್ದವು. ಅಂತಿಮವಾಗಿ ಪ್ಲೈಓವರ್ ಸಂಚಾರಕ್ಕೆ ಮುಕ್ತಗೊಂಡಿದ್ದು. ಕಳೆದೊಂದು ದಶಕದಿಂದ ಸಂಚಾರ ಅಡಚಣೆ ಎದುರಿಸುತ್ತಿದ್ದ ನಾಗರಿಕರಿಗೆ ದೊಡ್ಡ ತಲೆನೋವಿನಿಂದ ಮುಕ್ತಿ ದೊರಕಿದಂತಾಗಿದೆ.
Next Story





