Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಕರ್ಫ್ಯೂ: ಉದ್ಯೋಗ ಅರಸಿ...

ಕೊರೋನ ಕರ್ಫ್ಯೂ: ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಮತ್ತೆ ಊರಿನತ್ತ

ಪ್ರಕಾಶ್ ಅವರಡ್ಡಿಪ್ರಕಾಶ್ ಅವರಡ್ಡಿ26 April 2021 9:45 PM IST
share
ಕೊರೋನ ಕರ್ಫ್ಯೂ: ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಮತ್ತೆ ಊರಿನತ್ತ

ಬೆಂಗಳೂರು, ಎ.26: ಕೋವಿಡ್-19 ಸೋಂಕಿನ ಎರಡನೆ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಎ.27ರಿಂದ 14 ದಿನಗಳ ಕಾಲ ರಾಜ್ಯಾದ್ಯಂತ ಕೊರೋನ ಕರ್ಫ್ಯೂ ಜಾರಿ ಮಾಡುವ ತೀರ್ಮಾನ ಕೈಗೊಂಡ ಬೆನ್ನಲ್ಲೇ, ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ಜನರು ಸಾಲು ಸಾಲಾಗಿ ಬೆಂಗಳೂರನ್ನು ತೊರೆಯಲಾರಂಭಿಸಿದ್ದಾರೆ.  

ಬೆಂಗಳೂರಿನಲ್ಲಿ ಕೊರೋನ ಸೋಂಕು ಮತ್ತು ಸಾವಿನ ಸಂಖ್ಯೆ ಉಲ್ಬಣಿಸುತ್ತಿದ್ದು, ಸರಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದೆ ಎಂಬ ಹಿನ್ನೆಲೆಯಲ್ಲಿ ಬದುಕು ಕಟ್ಟಿಕೊಳ್ಳಲು ನಗರಕ್ಕೆ ಬಂದಿದ್ದ ಜನ ಈಗ ಮತ್ತೆ ತಮ್ಮ ತಮ್ಮ ಊರುಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಕಳೆದ ಬಾರಿ ಏಕಾಏಕಿ ಲಾಕ್‍ಡೌನ್ ಘೋಷಣೆಯಾದಾಗ ತಮ್ಮ ಊರುಗಳಿಗೆ ತಲುಪಲು ಸಾಧ್ಯವಾಗದೆ ತಮ್ಮ ಮಕ್ಕಳೊಂದಿಗೆ ನೂರಾರು ಕಿ.ಮೀ ನಡೆದೆ ಹೋಗಿದ್ದರು. ಕೆಲಸವಿಲ್ಲದೆ ಆಹಾರದ ಅಭಾವದಿಂದ ಎಷ್ಟೋ ಜನ ನಲುಗಿದ್ದರು. ಈಗ ಮತ್ತೆ ಕೊರೋನ ಸೋಂಕು ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣವು ಹೆಚ್ಚಾಗುತ್ತಿದೆ. ಜೀವ ಇದ್ದರೆ ಜೀವನ ಮಾಡಬಹುದು ಎಂದು ತಮ್ಮ ತಮ್ಮ ಊರುಗಳಿಗೆ ತೆರಳಲು ಮುಂದಾಗುತ್ತಿದ್ದಾರೆ.

ಎ.27ರಿಂದ ಹದಿನಾಲ್ಕು ದಿನಗಳ ಕಾಲ ಕೊರೋನ ಕರ್ಫ್ಯೂ ಜಾರಿ ಎನ್ನುತ್ತಿದ್ದಂತೆಯೇ ಇನ್ನಷ್ಟು ಜನರು ಸೋಮವಾರ ಬೆಂಗಳೂರಿನ ವಿವಿಧೆಡೆಯಿಂದ ಖಾಸಗಿ ಬಸ್, ಕ್ರೂಸರ್, ಟೆಂಪೋ, ಗೂಡ್ಸ್ ವಾಹನಗಳ ಮೂಲಕ ಲಗೇಜ್‍ಗಳನ್ನು ತುಂಬಿಕೊಂಡು ಊರುಗಳಿಗೆ ಜನ ತೆರಳುತ್ತಿದ್ದದ್ದು ಕಂಡುಬಂತು.

ಕಳೆದ ಬಾರಿ ಲಾಕ್‍ಡೌನ್ ಆದಾಗ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗಲು ಕಠಿಣ ನಿಯಮಾವಳಿಗಳನ್ನು ಜಾರಿ ಮಾಡಲಾಗಿತ್ತು. ಬೆಂಗಳೂರಿನಿಂದ ಹಳ್ಳಿಗಳಿಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಗ್ರಾಮಗಳಿಗೆ, ಬೇರೆ ಪ್ರದೇಶಗಳಿಗೆ ಹೋಗಬೇಕಾದರೆ ಕೊರೋನ ತಪಾಸಣೆ ಮಾಡಿಸಿಕೊಂಡು ದೃಢೀಕರಣ ಪತ್ರ ಪಡೆದು ಹೋಗಬೇಕಾಗಿತ್ತು. ಆದರೆ ಸದ್ಯ ಈಗ ಅಂಥ ಪರಿಸ್ಥಿತಿ ಇಲ್ಲ. ಸರಕಾರ ಅಂಥ ನಿಯಮಗಳೇನಾದರೂ ಮತ್ತೆ ಜಾರಿಗೊಳಿಸಿದರೆ ನಾವು ನಮ್ಮ ಹಳ್ಳಿಗಳನ್ನು ಸೇರಿಕೊಳ್ಳುವುದು ಕಷ್ಟವಾಗುತ್ತದೆ. ಅದಕ್ಕಾಗಿ ಈಗಲೇ ಹೋಗುವುದು ಸೂಕ್ತ ಎಂದು ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ.

ಕೊರೋನ ಮೊದಲ ಅಲೆ ಶುರುವಾಗಿ, ಲಾಕ್‍ಡೌನ್ ಘೋಷಣೆಯಾಗಿ, ನಿಧಾನವಾಗಿ ಅನ್ ಲಾಕ್ ಆದಾಗ ಊರುಗಳಲ್ಲಿದ್ದ ಜನರು ಬೆಂಗಳೂರಿಗೆ ಬಂದಿದ್ದರು. ಕೆಲವರು ಬೆಂಗಳೂರಿಗೆ ಬರದೆ ಅಲ್ಲೆ ನೆಲೆ ಕಂಡುಕೊಂಡಿದ್ದರು. ಕೊರೋನ ಮುಗಿದೇ ಹೋಯಿತು, ಇನ್ನೇನು ಸಾಂಕ್ರಾಮಿಕ ರೋಗದ ಭೀತಿಯಿಲ್ಲ, ಇದರಿಂದ ನಾವು ಮುಕ್ತವಾದವು ಎಂದು ಜನ ನಿರ್ಭೀತಿಯಿಂದ ಓಡಾಡುತ್ತಿದ್ದ ಸಂದರ್ಭದಲ್ಲಿ 2ನೆ ಅಲೆಯ ಆರ್ಭಟ ಜೋರಾಯಿತು.

ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಪ್ರತಿದಿನ 15ರಿಂದ 20 ಸಾವಿರದಷ್ಟು ಹೆಚ್ಚಳವಾಗತೊಡಗಿದೆ. ಈಗಾಗಲೇ ಸಾವಿನ ಪ್ರಮಾಣ ಪ್ರತಿದಿನ 100ರ ಗಡಿ ದಾಟಿದೆ. ಇದೇ ರೀತಿ ಮುಂದುವರಿದರೆ ನಮ್ಮ ಗತಿಯೇನು ಎಂಬ ಆತಂಕದಿಂದ ಜನ ತಮ್ಮ ತಮ್ಮ ಊರುಗಳಿಗೆ ಹೋಗಲು ಅಣಿಯಾಗಿದ್ದಾರೆ.

ಜನ ಏಕಾಏಕಿ ಸ್ವಂತ ಊರುಗಳಿಗೆ ಹೋಗುತ್ತಿರುವುದರಿಂದ ಕೊರೋನ ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಳ ಆಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಜಿಲ್ಲಾ ಮಟ್ಟದಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಕಂಡುಬರುತ್ತಿದೆ. ಈಗ ಜನ ಗ್ರಾಮೀಣ ಪ್ರದೇಶಗಳಿಗೆ ಹೋದರೆ ಅಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

share
ಪ್ರಕಾಶ್ ಅವರಡ್ಡಿ
ಪ್ರಕಾಶ್ ಅವರಡ್ಡಿ
Next Story
X