ದ.ಕ. ಜಿಲ್ಲೆಯಲ್ಲಿ 295 ಕೊರೋನ ಪಾಸಿಟಿವ್
ಮಂಗಳೂರು, ಎ.26: ದ.ಕ.ಜಿಲ್ಲೆಯಲ್ಲಿ ಸೋಮವಾರ 295 ಕೊರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ಇದರೊಂದಿಗೆ ಈವರೆಗೆ 41,579 ಪಾಸಿಟಿವ್ ಪ್ರಕರಣಗಳು ಕಂಡು ಬಂದಂತಾಗಿದೆ.
ಸೋಮವಾರ 238 ಮಂದಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಹಾಗಾಗಿ ಈವರೆಗೆ 36,799 ಮಂದಿ ಗುಣಮುಖರಾಗಿ ಬಿಡುಗಡೆ ಗೊಂಡಂತಾಗಿದೆ. ಅಲ್ಲದೆ ಒಟ್ಟು 748 ಮಂದಿ ಕೊರೋನದಿಂದ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 7,18,695 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,77,021 ಮಂದಿಯ ವರದಿ ನೆಗೆಟಿವ್ ಬಂದಿದ್ದು, 4,032 ಸಕ್ರಿಯ ಪ್ರಕರಣವಿದೆ. ಕೊರೋನ ಏರಿಕೆಯಾಗುತ್ತಿದ್ದಂತೆಯೇ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಸೋಮವಾರ 2 ಕಂಟೈನ್ಮೆಂಟ್ ವಲಯವನ್ನು ಘೋಷಿಸುವುದರೊಂದಿಗೆ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 37ಕ್ಕೇರಿದೆ. ಎಕ್ಕೂರು ಮತ್ತು ಶಕ್ತಿನಗರದ ಒಂದೇ ಮನೆಯಲ್ಲಿ ತಲಾ 6 ಮಂದಿಗೆ ಕೊರೋನ ಪಾಸಿಟಿವ್ ಆಗಿದೆ. ಹಾಗಾಗಿ ಈ ಎರಡೂ ಮನೆಯನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ.
ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 49,060 ಪ್ರಕರಣ ದಾಖಲಿಸಿ 51,12,280 ರೂ. ದಂಡ ವಸೂಲಿ ಮಾಡಲಾಗಿದೆ.





