ಕೊರೋನ ಕರ್ಫ್ಯೂ: ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು, ಎ.26: ರಾಜ್ಯಾದ್ಯಂತ ಎಪ್ರಿಲ್ 27ರ ರಾತ್ರಿಯಿಂದ 14 ದಿನ 'ಕೊರೋನ ಕರ್ಫ್ಯೂ' ಜಾರಿ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಬೇಕಿದ್ದ ಇಂಜಿನಿಯರಿಂಗ್, ಡಿಪ್ಲೋಮಾ ಮತ್ತು ಡಿಪ್ಲೊಮಾ ಪ್ರಾಕ್ಟಿಕಲ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಇಂಜಿನಿಯರಿಂಗ್, ಪಾಲಿಟೆಕ್ನಿಕ್‍ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೊರೋನ ಕರ್ಫ್ಯೂ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೋನ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





