Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಅಂದು ಜಿಂದಾಲ್‌ಗೆ ಭೂಮಿ ನೀಡುವುದನ್ನು...

"ಅಂದು ಜಿಂದಾಲ್‌ಗೆ ಭೂಮಿ ನೀಡುವುದನ್ನು ವಿರೋಧಿಸಿದ್ದ ಬಿಜೆಪಿ ಇಂದು ಅದೇ ಭೂಮಿಯನ್ನು ಜಿಂದಾಲ್‌ಗೆ ಮಾರಿದೆ"

ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 April 2021 1:16 PM IST
share
ಅಂದು ಜಿಂದಾಲ್‌ಗೆ ಭೂಮಿ ನೀಡುವುದನ್ನು ವಿರೋಧಿಸಿದ್ದ ಬಿಜೆಪಿ ಇಂದು ಅದೇ ಭೂಮಿಯನ್ನು ಜಿಂದಾಲ್‌ಗೆ ಮಾರಿದೆ

ಬೆಂಗಳೂರು, ಎ.27: 'ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ...' ಜಿಂದಾಲ್‌ಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ, ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ 'ಸಂಸ್ಕೃತಿ'. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ? ಎಂದು ಪ್ರಶ್ನಿಸಿದ್ದಾರೆ.

''ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ಅನ್ನು'ಈಸ್ಟ್‌ ಇಂಡಿಯಾ ಕಂಪನಿ' ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ?''

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ.

''ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ 'ಗೊತ್ತಿಲ್ಲ' ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ''

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು  ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X