Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಮಾರ್ಗಸೂಚಿಗಳನ್ನು...

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ27 April 2021 7:03 PM IST
share
ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಎ.27: ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎ.27ರಿಂದ ಮೇ 12ರವರೆಗೆ ಸರಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಮಾರ್ಗಸೂಚಿಗಳನ್ನು ಕಾಟಾಚಾರಕ್ಕೆ ಅನುಷ್ಠಾನ ಮಾಡುವ ಅಧಿಕಾರಿಗಳ ವಿರುದ್ಧ ಎಪಿಡಮಿಕ್ ಕಾಯಿದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸರಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಜಿಲ್ಲೆಯಲ್ಲಿ ಕೋವಿಡ್ ಉಲ್ಬಣವಾಗುವುದನ್ನು ನಿಯಂತ್ರಿಸಬೇಕು. ರೈಲು ಮತ್ತು ವಿಮಾನ ಪ್ರಯಾಣ ಮಾಡುವವರನ್ನು ಅವರು ಹೊಂದಿರುವ ಅಧಿಕೃತ ಟಿಕೆಟ್ ಆಧಾರದಲ್ಲಿ ಸಂಚಾರಕ್ಕೆ ಅನುಮತಿ ನೀಡಬೇಕು. ತುರ್ತು ಆರೋಗ್ಯ ಸಮಸ್ಯೆಯಿರುವ ರೋಗಿಗಳು ಆಟೋ, ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳಲ್ಲಿ ಸಂಚರಿಸಲು ಅನುಮತಿ ಇದೆ. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹೋಂ ಡೆಲಿವರಿಗೆ ಮಾತ್ರ ಅವಕಾಶ ನೀಡಿ ಎಂದರು.

ಗುರುತು ಚೀಟಿ ಬೇಕು: ಅವಶ್ಯಕ ಮತ್ತು ತುರ್ತು ಸೇವೆ ಒದಗಿಸುವ ಸಿಬ್ಬಂದಿಗಳಿಗೆ ಅವರ ಗುರುತಿನ ಚೀಟಿ ಆಧಾರದಲ್ಲಿ ಸಂಚರಿಸಲು ಅವಕಾಶ ಇದೆ ಹಾಗೂ ಗಾರ್ಮೆಂಟ್ಸ್ ಹೊರತುಪಡಿಸಿ ಎಲ್ಲಾ ಕೈಗಾರಿಕೆಗಳಲ್ಲಿ ಹಾಗೂ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಸೂಕ್ತ ಗುರುತಿನ ಚೀಟಿ ಹೊಂದಿ ಸಂಚರಿಸಲು ಅವಕಾಶ ಇದೆ. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರು ತಮ್ಮ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು. ಸರಕು ಸಾಗಾಣಿಕೆ ವಾಹನಗಳು ಲೋಡ್ ಮತ್ತು ಅನ್‌ಲೋಡ್ ಮಾಡಿ ಸಂಚರಿಸಲು ಯಾವುದೇ ನಿರ್ಬಂಧಗಳಿಲ್ಲ. ಅಂತಹ ವಾಹನಗಳನ್ನು ತಡೆಯಬಾರದು ಎಂದು ಡಿಸಿ ಹೆಳಿದರು.

ಕಟ್ಟಡ ನಿರ್ಮಾಣ ಚಟುವಟಿಕೆಗೆ ಅವಕಾಶವಿದ್ದು, ಕಾರ್ಮಿಕರಿಗೆ ಸಂಬಂಧಪಟ್ಟ ನಿರ್ಮಾಣ ಸಂಸ್ಥೆ ಅಥವಾ ಮಾಲಕರು ಸೂಕ್ತ ಗುರುತಿನ ಚೀಟಿ ಒದಗಿಸಬೇಕು. ಮೀನುಗಾರಿಕೆಯನ್ನು ನಿಗದಿತ ಅವಧಿಯೊಳಗೆ ಮಾಡಲು ಕ್ರಮ ಕೈಗೊಳ್ಳಿ. ಕೃಷಿ ಚಟುವಟಿಕೆ ನಡೆಸಲು ನಿರ್ಬಂಧಗಳಿಲ್ಲ ಎಂದವರು ವಿವರಿಸಿದರು.

ಮದುವೆಗೆ 50 ಮಂದಿ: ಮದುವೆ ಕಾರ್ಯಕ್ರಮಕ್ಕೆ 50 ಮಂದಿ, ಶವ ಸಂಸ್ಕಾರಕ್ಕೆ 5 ಮಂದಿ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಮೊನ್ನೆ ನಡೆದ ವಿವಾಹ ಕಾರ್ಯಕ್ರಮಗಳ ಬಗ್ಗೆ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಂಡಿದ್ದಾರೆ. ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಇದೇ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿ.ಜಗದೀಶ್ ಹೇಳಿದರು.

ಸಭೆಯಲ್ಲಿ ಉಡುಪಿ ಜಿಪಂ ಸಿಇಓ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಬಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ದಿನಬಳಕೆಯ ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 6ರಿಂದ 10ರವರೆಗೆ ಅವಕಾಶವಿದ್ದು, ಸಾರ್ವಜನಿಕರು ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಬೇಕು. ಅನಾವಶ್ಯಕವಾಗಿ ಸಂಚರಿಸಬಾರದು. ಕೋವಿಡ್ ಲಸಿಕೆ ಪಡೆಯುವವರು ತಮ್ಮ ಸಮೀಪದ ಆಸ್ಪತ್ರೆಗಳಿಗೆ ಮಾತ್ರ ತೆರಳಿ, ಲಸಿಕೆ ಪಡೆಯಲು ಅವಕಾಶವಿದೆ. ಲಸಿಕೆ ಪಡೆಯುವ ಉದ್ದೇಶದಿಂದ ಅನಗತ್ಯ ಸಂಚಾರ ಮಾಡುವಂತಿಲ್ಲ. ಲಸಿಕೆ ನೀಡುವ ಕೇಂದ್ರಗಳಲ್ಲಿ ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ನೀಡಲು ವ್ಯವಸ್ಥೆ ಮಾಡಬೇಕು.

-ಜಿ.ಜಗದೀಶ್, ಉಡುಪಿ ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X