ಮಂಗಳೂರು: ಕೈದಿಗಳಿಂದ ಹಲ್ಲೆಗೊಳಗಾದ ಜೈಲರ್ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು,ಎ.27: ನಗರದ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಕೈದಿಗಳ ಮಧ್ಯೆ ನಡೆದ ಗಲಾಟೆಯನ್ನು ತಡೆಯಲು ಹೋಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಜೈಲರ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅವರ ತಲೆಗೆ ಗಾಯವಾಗಿದ್ದು, ವೈದ್ಯರು ತಲೆಗೆ ಹೊಲಿಗೆ ಹಾಕಿ ಚಿಕಿತ್ಸೆ ನೀಡಿದ್ದಾರೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ನನ್ನ ಮೇಲೆ ಹಲ್ಲೆ ನಡೆದಿಲ್ಲ: ಆಯುಕ್ತರು
ಸಮೀರ್ ಎಂಬಾತ ಇತರ ಕೆಲವು ಕೈದಿಗಳೊಂದಿಗೆ ಸೇರಿ ಅನ್ಸಾರ್ ಮತ್ತು ಜೈನುದ್ದೀನ್‌ರ ಮೇಲೆ ಹಲ್ಲೆ ನಡೆಸಿದ್ದ. ಅದನ್ನು ತಡೆಯಲು ಹೋದ ಜೈಲು ಅಧಿಕಾರಿ, ಸಿಬಂದಿ ಮೇಲೆಯೂ ಹಲ್ಲೆ ನಡೆದಿದೆ. ಬಳಿಕ ವಿಚಾರಣೆಗೆ ಹೋಗಿದ್ದ ಸಿವಿಲ್ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ಮೇಲೆಯೂ ಹಲ್ಲೆಗೆ ಯತ್ನಿಸಲಾಗಿದೆ. ನಾನು ಕಾರಾಗೃಹದ ಆವರಣದಲ್ಲಿದ್ದು ನಿಗಾ ವಹಿಸುತ್ತಿದ್ದೆ. ನನ್ನ ಮೇಲೆ ಹಲ್ಲೆ ನಡೆದಿಲ್ಲ. ಆದರೆ ಕೆಲವು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಮೇಲೆಯೂ ಕೈದಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನನ್ನ ಮೇಲೆ ಯಾವುದೇ ಹಲ್ಲೆಯಾಗಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.





