Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್‌ಡೌನ್‌ನಲ್ಲಿ ಬಡವರಿಗೆ ಆಹಾರ...

ಲಾಕ್‌ಡೌನ್‌ನಲ್ಲಿ ಬಡವರಿಗೆ ಆಹಾರ ಸಾಮಗ್ರಿ ಕಿಟ್ ನೀಡಿ: ರಮಾನಾಥ ರೈ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ28 April 2021 11:56 AM IST
share
ಲಾಕ್‌ಡೌನ್‌ನಲ್ಲಿ ಬಡವರಿಗೆ ಆಹಾರ ಸಾಮಗ್ರಿ ಕಿಟ್ ನೀಡಿ: ರಮಾನಾಥ ರೈ ಒತ್ತಾಯ

ಮಂಗಳೂರು, ಎ. 28: ಕೊರೋನ 2ನೇ ಅಲೆ ತೀವ್ರವಾಗಿದ್ದು ರಾಜ್ಯದಲ್ಲಿ ಲಾಕ್‌ಡೌನ್ ಪರಿಸ್ಥಿತಿ ಮುಂದುವರಿಯ ಸಾಧ್ಯತೆ ಇರುವುದರಿಂದ ರಾಜ್ಯ ಸರಕಾರ ಬಡವರಿಗೆ ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಒದಗಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಮಾಡುವುದು ಸುಲಭ. ಆದರೆ ಆ ಸಂದರ್ಭದಲ್ಲಿ ಬಡವರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರ ಹಿತ ಕಾಯ್ದುಕೊಳ್ಳುವುದು ಸರಕಾರದ ಹೊಣೆಗಾರಿಕೆಯಾಗಿದೆ. ಕಳೆದ ವರ್ಷ ಲಾಕ್‌ಡೌನ್ ಸಂದರ್ಭದಲ್ಲಿಯೂ ವಲಸೆ ಕಾರ್ಮಿಕರು ಬಹಳಷ್ಟು ಸಂಕಟ ಎದುರಿಸಿದ್ದಾರೆ. ದ.ಕ. ಜಿಲ್ಲೆಯ ಹಲವಾರು ಕಾರಣಗಳಿಗೆ ವಲಸೆ ಕಾರ್ಮಿಕರನ್ನು ಅವಲಂಬಿಸಿದೆ. ಇದೀಗ ಸರಕಾರ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ಪಂಚಾಯತ್‌ಗಳಲ್ಲಿ ವಲಸೆ ಕಾರ್ಮಿಕರಿಗೆ ಗಂಜಿ ಕೇಂದ್ರವನ್ನು ತೆರೆದು ಅವರ ಹಸಿವನ್ನು ನೀಗಿಸಬೇಕು ಎಂದು ಸಲಹೆ ನೀಡಿದರು.

ಲಾಕ್‌ಡೌನ್ ಅವಧಿಯಲ್ಲಿ ವಿದ್ಯುತ್, ನೀರು, ಟೆಲಿಫೋನ್ ಶುಲ್ಕವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದ ರೈ, ಕೆಲವು ರಾಜ್ಯಗಳು ಈಗಾಗಲೇ ವಿದ್ಯುತ್ ಬಿಲ್ ಮನ್ನಾ ಮಾಡಿವೆ. ಹಾಗಾಗಿ ರಾಜ್ಯ ಸರಕಾರವೂ ಆ ಕ್ರಮ ಕೈಗೊಳ್ಳಬೇಕು. ತಾಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜನ ಸಾಮಾನ್ಯರಿಗೆ ಸಹಕಾರ ನೀಡುವ ಕೆಲಸವಾಗಬೇಕು ಎಂದು ಅವರು ಹೇಳಿದರು.

ದೇಶದಲ್ಲಿ ರಾಜ್ಯಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ತಾರತಮ್ಯ ಎಸಗಲಾಗುತ್ತಿರುವ ಆರೋಪವಿದೆ. ಪಿಎಂ ಕೇರ್‌ನಿಂದ ಎಲ್ಲ ರಾಜ್ಯಗಳಲ್ಲೂ ಆಮ್ಲಜನಕ ಘಟಕ ಸ್ಥಾಪಿಸುವ ಪ್ರಸ್ತಾವ ಇದೆಯಾದರೂ ಕರ್ನಾಟಕಕ್ಕೆ ಆ ಪ್ರಸ್ತಾವ ಇಲ್ಲಿಯವರೆಗೆ ಇಲ್ಲ ಎಂದು ಅವರು ಆಕ್ಷೇಪಿಸಿದರು.

ಪಿಎಂ ಕೇರ್‌ನಡಿ ಎಷ್ಟು ಹಣ ಸಂಗ್ರವಾಗಿದೆ, ಖರ್ಚಾಗಿದೆ ಎಂಬ ಬಗ್ಗೆ ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಬೇಕು. ಮಾತ್ರವಲ್ಲದೆ. ಕಳೆದ ಬಾರಿ ಕೋವಿಡ್ ನಿರ್ವಹಣೆಗಾಗಿ ಕೇಂದ್ರ ಬಿಡುಗಡೆ ಮಾಡಿರುವ 20,000 ಕೋಟಿ ರೂ.ಗಳನ್ನು ಯಾವ ರೀತಿಯಲ್ಲಿ ಖರ್ಚು ಮಾಡಲಾಗಿದೆ ಎಂಬ ಬಗ್ಗೆಯೂ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಚಿವರು ಆಗ್ರಹಿಸಿದರು.

ರಾಜ್ಯದಲ್ಲಿ ಸಚಿವರ ನಡುವೆ ಸಮನ್ವಯತೆ ಇಲ್ಲ ಎಂದು ಆರೋಪಿಸಿದ ರಮಾನಾಥ ರೈ, ರಾಜ್ಯ ಸರಕಾರ ನಿಸ್ತೇಜವಾಗಿರುವುದರಿಂದಲೇ ರಾಜ್ಯಪಾಲರು ಸಭೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಗೆ ಆರೋಗ್ಯ ಸಮಸ್ಯೆ ಇದ್ದಾಗ ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳಿದ್ದರೂ ರಾಜ್ಯಪಾಲರು ಸಭೆ ನಡೆಸಿರುವುದು ಸರಕಾರ ಕ್ರಿಯಾಶೀಲವಾಗಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಅವರು ಟೀಕಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಯಲ್ಲಿ ಸರಕಾರಕ್ಕೆ ಯಾವ ರೀತಿಯಲ್ಲಿ ಸಹಾಯ ನೀಡಬಹುದು ಎಂಬ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ. ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರ ಕಚೇರಿಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಪಕ್ಷದ ವತಿಯಿಂದ ಯಾವ ರೀತಿಯಲ್ಲಿ ಜನಸಾಮಾನ್ಯರಿಗೆ ಸಹಕಾರ ನೀಡಲು ಸಾಧ್ಯವೋ ಅದನ್ನು ಮಾಡಲಾಗುವುದು ಎಂದು ರಮಾನಾಥ ರೈ ಹೇಳಿದರು.

ವ್ಯಾಕ್ಸಿನ್ ಕೊರತೆ- ರಾಜ್ಯ ಸರಕಾರ ಖರೀದಿಸಿ ಒದಗಿಸಲಿ:

ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಮಾತನಾಡಿ, ಮಂಗಳೂರು ನಗರದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಇಲ್ಲದೆ ನೂರಾರು ಜನರು ಹಿಂದಿರುಗುತ್ತಿದ್ದಾರೆ. ದ.ಕ. ಜಿಲ್ಲೆಯಲ್ಲಿ 15 ಲಕ್ಷ ಜನರು ಲಸಿಕೆ ಪಡೆಯಲು ಅರ್ಹರಾಗಿದ್ದಾರೆ. ಈವರೆಗೆ ಲಸಿಕೆ ಪಡೆದವರ ಸಂಖ್ಯೆ ಶೇ.5ರಷ್ಟು ಮಾತ್ರ. ಅದರಲ್ಲೂ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ. ಹಾಗಿರುವಾಗ ಸರಕಾರ ಲಸಿಕೆ ಕೊರತೆ ಇದ್ದಾಗ ಕೇಂದ್ರದಿಂದ ಬರುವುದನ್ನು ಕಾಯದೆ ತಾನೇ ಖರೀದಿಸಿ ಜನರಿಗೆ ಉಚಿತವಾಗಿ ಒದಗಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮುಖಂಡರಾದ ಜೆ.ಆರ್.ಲೋಬೋ, ಶಶಿಧರ ಹೆಗ್ಡೆ, ಸದಾಶಿವ ಉಳ್ಳಾಲ್, ವಿನಯರಾಜ್, ಅಪ್ಪಿ, ಲುಕ್ಮಾನ್ ಬಂಟ್ವಾಳ, ಶಾಲೆಟ್ ಪಿಂಟೋ, ಶುಭೋದಯ ಆಳ್ವ, ಸುಧೀರ್ ಶೆಟ್ಟಿ, ನವೀನ್ ಡಿಸೋಜ, ಸದಾಶಿವ ಶೆಟ್ಟಿ, ಮಹಾಬಲ ಮಾರ್ಲ, ಅಬ್ದುಲ್ ರವೂಫ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X