Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ನಿರ್ವಹಣೆಯಲ್ಲಿ ಲೋಪವಾದರೆ ಆಯಾ...

ಕೋವಿಡ್ ನಿರ್ವಹಣೆಯಲ್ಲಿ ಲೋಪವಾದರೆ ಆಯಾ ಜಿಲ್ಲಾಧಿಕಾರಿಗಳೇ ಸಂಪೂರ್ಣ ಹೊಣೆ: ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ28 April 2021 7:49 PM IST
share
ಕೋವಿಡ್ ನಿರ್ವಹಣೆಯಲ್ಲಿ ಲೋಪವಾದರೆ ಆಯಾ ಜಿಲ್ಲಾಧಿಕಾರಿಗಳೇ ಸಂಪೂರ್ಣ ಹೊಣೆ: ಅಶ್ವತ್ಥ ನಾರಾಯಣ

ಬೆಂಗಳೂರು, ಎ.28: ಜಿಲ್ಲೆಗಳ ಕೋವಿಡ್ ಪರಿಸ್ಥಿತಿ ನಿಯಂತ್ರಣ ಹಾಗೂ ವ್ಯವಸ್ಥೆ ನಿರ್ವಹಣೆ ಸಂಪೂರ್ಣ, ನೇರ ಹೊಣೆಗಾರಿಕೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳದ್ದೆ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ವರ್ಚುವಲ್ ವೇದಿಕೆಯ ಮೂಲಕ ಬುಧವಾರ ಬೆಂಗಳೂರಿನಿಂದಲೇ ಬಳ್ಳಾರಿ ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಅವಲೋಕನ ಮಾಡಿದ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಕಂಡುಬಂದಿರುವ ಲೋಪದೋಷಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾ ಕೇಂದ್ರದಿಂದಲೆ ವರ್ಚುಯಲ್ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಎಲ್ಲ ತಾಲೂಕುಗಳ ತಹಶೀಲ್ದಾರ್ ಗಳೊಂದಿಗೆ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಜತೆ ಮಾತನಾಡಿದ ಅಶ್ವತ್ಥ ನಾರಾಯಣ, ಕೋವಿಡ್ ನಿರ್ವಹಣೆ ಏನೆ ಲೋಪವಾದರೂ ಜಿಲ್ಲಾಧಿಕಾರಿಯೆ ಹೊಣೆ ಎಂದರು.

ಪರೀಕ್ಷೆ-ಫಲಿತಾಂಶದ ಬಗ್ಗೆಯೂ ಅತೃಪ್ತಿ: ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ನಡೆಯುತ್ತಿಲ್ಲ. ಇದರಲ್ಲಿ ಬಹಳ ಲೋಪ ಕಂಡುಬರುತ್ತಿದೆ. ಫಲಿತಾಂಶ ಕೂಡ ತುಂಬಾ ತಡವಾಗಿ ನೀಡಲಾಗುತ್ತಿದೆ. ಫಲಿತಾಂಶ ಎಷ್ಟು ತಡವಾಗುತ್ತೊ ರೋಗವು ಅಷ್ಟು ಉಲ್ಬಣವಾಗುತ್ತದೆ. ಹೀಗಾಗಿ ಸಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗುತ್ತಿದೆ ಎಂದು ಅವರು ಹೇಳಿದರು.

ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿ ತಮ್ಮ ಕೈಯ್ಯಲ್ಲಿದ್ದ ಮಾಹಿತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಅಶ್ವತ್ಥ ನಾರಾಯಣ, ಈ ಬಗ್ಗೆ ಕೂಡಲೇ ಎಚ್ಚರಿಕೆ ವಹಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರಿಗೆ ವಿವರಿಸಿದರು.

ಯಾವ ಕಾರಣಕ್ಕೂ ರೋಗ ಉಲ್ಬಣವಾಗುವ ಹಂತಕ್ಕೆ ಬಿಡಲೇಬಾರದು. ವ್ಯಕ್ತಿಯಿಂದ ಸ್ಯಾಂಪಲ್ ಸ್ವೀಕರಿಸಿದ 24 ಗಂಟೆಯೊಳಗೆ ಫಲಿತಾಂಶ ಕೊಡಬೇಕು. ಒಂದು ಫಲಿತಾಂಶ ಪಾಸಿಟೀವ್ ಬಂದರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡುವುದೋ ಅಥವಾ ಅವರ ಮನೆಯಲ್ಲೇ ಐಸೋಲೇಷನ್ ಮಾಡಿ ಸೂಕ್ತ ಔಷಧಗಳನ್ನು ಪೂರೈಕೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಈ ಪ್ರಕ್ರಿಯೆ ಅತ್ಯಂತ ತ್ವರಿತವಾಗಿ ಆಗಬೇಕು ಹಾಗೂ ಸಮಯಕ್ಕೆ ಹೆಚ್ಚು ಮಹತ್ವ ನೀಡಬೇಕು. ರೋಗ ನಿರೋಧಕ ಚಿಕಿತ್ಸೆ ತ್ವರಿತವಾಗಿ ಆರಂಭಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದು ಅವರು, ಆನಂದ್ ಸಿಂಗ್ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಟ್ಟಿ ಅವರಿಗೆ ತಿಳಿಸಿದರು.

ಈಗ ಬಳ್ಳಾರಿ ಜಿಲ್ಲೆಯಲ್ಲಿ ತುರ್ತಾಗಿ ಆಗಬೇಕಿರುವ ಕೆಲಸವೆಂದರೆ, ಫಲಿತಾಂಶ ಕೊಡುವ ಲ್ಯಾಬ್‍ಗಳನ್ನು ಹೆಚ್ಚಿಸಬೇಕು ಹಾಗೂ ಇರುವ ಲ್ಯಾಬ್‍ಗಳಿಗೆ ಶಕ್ತಿ ತುಂಬಬೇಕು. ಒಂದು ಸ್ಯಾಂಪಲ್‍ಗಳು ಹೋಗುತ್ತಿದ್ದರೆ, ಇನ್ನೊಂದೆಡೆ ಫಲಿತಾಂಶ ಬರುತ್ತಿರಬೇಕು. ಅಗತ್ಯವಾದರೆ ಫಲಿತಾಂಶ ನೀಡುವ ಎಕ್ಸ್‍ಟ್ರಾಕ್ಸಿನ್ ಯಂತ್ರವನ್ನು ಇನ್ನಷ್ಟು ಖರೀದಿ ಮಾಡಿ. ಈ ಬಗ್ಗೆ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು. ಯಾವುದಕ್ಕೂ ಕೊರತೆ ಆಗಬಾರದು, ಬಳ್ಳಾರಿ ಮಾತ್ರವಲ್ಲ, ಎಲ್ಲ ಜಿಲ್ಲೆಗಳಿಗೂ ನಾನು ಇದೇ ಸಲಹೆಯನ್ನೆ ಮಾಡುತ್ತೇನೆಂದು ಅಶ್ವತ್ಥನಾರಾಯಣ ಹೇಳಿದರು.

ಔಷಧ ಕೊರತೆ ಆಗಬಾರದು: ಇದೇ ವೇಳೆ ಸಭೆಯಲ್ಲಿ ಉಪಸ್ಥಿತರಿದ್ದ ವೈದ್ಯಾಧಿಕಾರಿಗಳ ಜತೆಯೂ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ, ರೋಗ ಲಕ್ಷಣ ಇರುವವರಿಗೆ ಯಾವ ಔಷಧ ನೀಡಬೇಕು ಎಂಬುದನ್ನು ತಿಳಿಸಿದರಲ್ಲದೆ ಯಾವುದೇ ಕಾರಣಕ್ಕೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಿ. ಎಲ್ಲಿಯೂ ಆಮ್ಲಜನಕ, ವೆಂಟಿಲೇಟರ್, ರೆಮ್‍ಡಿಸಿವಿರ್ ಕೊರತೆ ಆಗದಂತೆ ಎಚ್ಚರ ವಹಿಸಿ. ಯಾವುದೇ ಸಮಸ್ಯೆ ಇದ್ದರೂ ಜಿಲ್ಲಾಧಿಕಾರಿ ಗಮನಕ್ಕೆ ತಂದು ಕೊರತೆ ಆಗದಂತೆ ನೋಡಿಕೊಳ್ಳಿ. ಸಮಸ್ಯೆ ಎದುರಾದಾಗ ಒದ್ದಾಡುವುದು ಬೇಡ ಎಂದು ಸೂಚಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆಗೆ ಪರಿಣಾಮಕಾರಿ ಸೌಲಭ್ಯಗಳ ಕೊರತೆ ಇದೆ ಎಂದು ಆನಂದ ಸಿಂಗ್ ಅವರ ಗಮನ ಸೆಳೆದ ಅಶ್ವತ್ಥ ನಾರಾಯಣ, ರೋಗ ಲಕ್ಷಣಗಳಿರುವ ಜನರಿಗೆ ತತ್‍ಕ್ಷಣದಿಂದಲೇ ಚಿಕಿತ್ಸೆ ಆಗತ್ಯವಿರುತ್ತದೆ ಎಂದು ಒತ್ತಿ ಹೇಳಿದರು.

ಆನಂದ್ ಸಿಂಗ್ ಸ್ಪಂದನೆ: ಉಪಮುಖ್ಯಮಂತ್ರಿ ಸಲಹೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆನಂದ್ ಸಿಂಗ್, ತಮ್ಮ ಎಲ್ಲ ಸಲಹೆಗಳನ್ನು ಈ ಕೂಡಲೇ ಜಾರಿಗೆ ತರುತ್ತೇವೆ. ಈ ಸಭೆಯ ನಂತರ ಸಭೆ ನಡೆಸಿ ಎಲ್ಲ ಕೊರತೆಗಳನ್ನು ನೀಗಿಸಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X