ಮಂಗಳೂರಿನಿಂದ ಮುಂಬೈ, ಮಡಗಾಂವ್ ರೈಲು ಸಂಚಾರ ರದ್ದು

ಸಾಂದರ್ಭಿಕ ಚಿತ್ರ
ಉಡುಪಿ, ಎ.28: ಕೊರೋನ ಸೋಂಕಿತರ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಯಾಣಿಕರ ಕೊರತೆ ಹಾಗೂ ಕೊರೋನ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್-ಮುಂಬಯಿ ಲೋಕಮಾನ್ಯ ತಿಲಕ್ ಹಾಗೂ ಮಂಗಳೂರು ಸೆಂಟ್ರಲ್- ಮಡಗಾಂವ್ ನಡುವೆ ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರವನ್ನು ನಾಳೆಯಿಂದ ರದ್ದು ಪಡಿಸಲಾಗಿದೆ.
ಮಂಗಳೂರು ಸೆಂಟ್ರಲ್-ಮುಂಬಯಿ ನಡುವಿನ ದೈನಂದಿನ ಮತ್ಸಗಂಧ ಸೂಪರ್ಫಾಸ್ಟ್ ವಿಶೇಷ ರೈಲು ಸಂಚಾರವನ್ನು ಮಂಗಳೂರಿನಿಂದ ಎ.29 ಹಾಗೂ ಮುಂಬಯಿಯಿಂದ ಎ.30ರಿಂದ ರದ್ದುಪಡಿಸಲಾಗಿದೆ. ಅದೇ ರೀತಿ ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ನಡುವಿನ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ನಾಳೆಯಿಂದ ಅನಿರ್ದಿಷ್ಟಾವಧಿಗೆ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
Next Story





