Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರದೇಶ: ಪಂಚಾಯತ್ ಚುನಾವಣೆ...

ಉ.ಪ್ರದೇಶ: ಪಂಚಾಯತ್ ಚುನಾವಣೆ ಕರ್ತವ್ಯದಲ್ಲಿದ್ದ 135 ಅಧಿಕಾರಿಗಳು ಕೊರೋನ ಸೋಂಕಿನಿಂದ ಮೃತ್ಯು

ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ28 April 2021 11:50 PM IST
share
ಉ.ಪ್ರದೇಶ: ಪಂಚಾಯತ್ ಚುನಾವಣೆ ಕರ್ತವ್ಯದಲ್ಲಿದ್ದ 135 ಅಧಿಕಾರಿಗಳು ಕೊರೋನ ಸೋಂಕಿನಿಂದ ಮೃತ್ಯು

ಲಕ್ನೊ, ಎ.29: ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆ ಸಂದರ್ಭ ಕರ್ತವ್ಯ ನಿರ್ವಹಿಸಿದ್ದ 135 ಮತಗಟ್ಟೆ ಅಧಿಕಾರಿಗಳು ಕೊರೋನ ಸೋಂಕಿನಿಂದ ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿರುವ ಅಲಹಾಬಾದ್ ಹೈಕೋರ್ಟ್, ಚುನಾವಣೆಯ ಸಂದರ್ಭ ಕೊರೋನ ಮಾರ್ಗದರ್ಶಿ ಸೂತ್ರದ ಪಾಲನೆಯಾಗದಿರುವುದನ್ನು ಯಾಕೆ ಗಮನಿಸಿಲ್ಲ ಎಂದು ಪ್ರಶ್ನಿಸಿದೆ.

ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭ ಮತಗಟ್ಟೆ ಅಧಿಕಾರಿಗಳಾಗಿ ನಿಯೋಜನೆಗೊಂಡಿದ್ದ 135 ಶಿಕ್ಷಕರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಹಿಂದಿ ದೈನಿಕ ‘ಅಮರ್ ಉಜಾಲ’ದಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿ ಅಲಹಾಬಾದ್ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಅಂತಿಮ ಹಂತದ ಮತದಾನದ ಸಂದರ್ಭ ಕೊರೋನ ಮಾರ್ಗದರ್ಶಿ ಸೂತ್ರ ಮತ್ತು ಶಿಷ್ಟಾಚಾರ ಪಾಲನೆಯಾಗಲು ಕ್ರಮ ಕೈಗೊಳ್ಳಬೇಕು. ಇದಕ್ಕೆ ವಿಫಲವಾದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳನ್ನು ಮಾರಣಾಂತಿಕ ಸೋಂಕಿನ ದವಡೆಯಿಂದ ಪಾರುಮಾಡಲು ಪೊಲೀಸರಾಗಲೀ ಅಥವಾ ಚುನಾವಣಾ ಆಯೋಗವಾಗಲೀ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಣುತ್ತದೆ. ಕಳೆದ ವರ್ಷಾಂತ್ಯ ಕೊರೋನ ಸೋಂಕು ಪ್ರಕರಣ ಇಳಿಕೆಯಾಗಿರುವುದರಿಂದ ರಾಜ್ಯ ಸರಕಾರವೂ ನಿರ್ಲಕ್ಷ್ಯ ವಹಿಸಿರುವುದನ್ನು ಗಮನಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿದೆ. ಆಮ್ಲಜನಕದ ಸಿಲಿಂಡರ್ ತಂದರೆ ಮಾತ್ರ ಕೊರೋನ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವುದಾಗಿ ಖಾಸಗಿ ಆಸ್ಪತ್ರೆಯವರು ಸೂಚಿಸುತ್ತಿದ್ದಾರೆ ಎಂಬ ವರದಿಯ ಬಗ್ಗೆ ವಕೀಲರೊಬ್ಬರು ಹೈಕೋರ್ಟ್ ನ ಗಮನ ಸೆಳೆದರು. ಆಮ್ಲಜನಕದ ಕೊರತೆಯಿಂದಾಗಿ ಯಾರೊಬ್ಬರೂ ಸಾವನ್ನಪ್ಪದಂತೆ ಖಚಿತಪಡಿಸಬೇಕು. ಸ್ವಾತಂತ್ರ್ಯ ದೊರೆತ 7 ದಶಕದ ಬಳಿಕವೂ, ದೇಶದಲ್ಲಿ ಇಷ್ಟೊಂದು ಬೃಹತ್ ಕೈಗಾರಿಕೆ ಕಾರ್ಯಾರಂಭ ಮಾಡಿದ್ದರೂ ಜನರಿಗೆ ಆಮ್ಲಜನಕ ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂಬುದು ನಾಚಿಕೆಗೇಡಿನ ವಿಷಯವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಉತ್ತರಪ್ರದೇಶಕ್ಕೆ ಹಂಚಿಕೆಯಾಗಿರುವ ದ್ರವ ಆಮ್ಲಜನಕದ ಪ್ರಮಾಣದ ಬಗ್ಗೆ ರಾಜ್ಯ ಸರಕಾರದ ವಕೀಲರು ಮಾಹಿತಿ ನೀಡಿದರಲ್ಲದೆ, ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸಲು ಬದ್ಧ ಎಂದು ಹೇಳಿದರು. ಕೈಗಾರಿಕೆಗಳಿಗೆ ಪೂರೈಕೆಯಾಗುವ ಆಮ್ಲಜನಕವನ್ನು ಆಸ್ಪತ್ರೆಗೆ ಪೂರೈಸಲು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚಿಸಿತು. ರಾಜ್ಯದಲ್ಲಿ ಕೊರೋನ ಸೋಂಕು ಸಮಸ್ಯೆ ಇದೇ ರೀತಿ ಮುಂದುವರಿದರೆ 2 ವಾರದ ಲಾಕ್ಡೌನ್ ಘೋಷಿಸುವಂತೆ ಹೈಕೋರ್ಟ್ ಮತ್ತೊಮ್ಮೆ ರಾಜ್ಯ ಸರಕಾರಕ್ಕೆ ಸಲಹೆ ನೀಡಿತು. ಅಲ್ಲದೆ ಅತೀ ಹೆಚ್ಚು ಸೋಂಕು ಬಾಧಿತ 9 ಜಿಲ್ಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಆದೇಶಿಸಿ, ಅಧಿಕಾರಿಗಳು ಎಲ್ಲಾ ದಿಕ್ಕಿನಿಂದ ಬರುವ ಸಲಹೆಗಳಿಗೆ ಕಿವಿಗೊಡಬೇಕು ಎಂದು ಸಲಹೆ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X