Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಝೀಝ್‌ ಕಂದಾವರ ಕೊಲೆಯತ್ನ ಪ್ರಕರಣ: ಏಳು...

ಅಝೀಝ್‌ ಕಂದಾವರ ಕೊಲೆಯತ್ನ ಪ್ರಕರಣ: ಏಳು ಮಂದಿ ಆರೋಪಿಗಳ ಬಂಧನ

'ಪ್ರಕರಣ ಬೇಧಿಸಿದ ಸಿಸಿಬಿ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನ'

ವಾರ್ತಾಭಾರತಿವಾರ್ತಾಭಾರತಿ30 April 2021 4:20 PM IST
share
ಅಝೀಝ್‌ ಕಂದಾವರ ಕೊಲೆಯತ್ನ ಪ್ರಕರಣ: ಏಳು ಮಂದಿ ಆರೋಪಿಗಳ ಬಂಧನ

ಮಂಗಳೂರು, ಎ.30: ನಗರದ ಬಜ್ಪೆ ಹಾಗೂ ಮಂಗಳೂರು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ನವೆಂಬರ್ ತಿಂಗಳಿನಲ್ಲಿ ನಡೆದ 2 ಕೊಲೆ ಯತ್ನ ಪ್ರಕರಣಗಳಿಗೆ ಸಂಬಂಧಿಸಿ 7 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದು, ಆರೋಪಿಗಳನ್ನು ಕಂಕನಾಡಿಯ ಅಬ್ದುಲ್ ಜಬ್ಬಾರ್ ಯಾನೆ ಮಾರಿಪಳ್ಳ ಜಬ್ಬಾರ್, ನಝೀರ್ ಅಹಮ್ಮದ್ ಫರಿಂಗಿಪೇಟೆ, ಬಿಲಾಲ್ ಮೊಯಿದ್ದೀನ್ ಫಳ್ನೀರ್, ಇಬ್ರಾಹೀಂ ಶಾಕೀರ್ ಮುಳಿಹಿತ್ಲು, ಮುಹಮ್ಮದ್ ನಿಹಾಲ್ ಅತ್ತಾವರ, ಅಬ್ಬಾಸ್ ಅಫ್ವಾನ್ ಪಾಂಡೇಶ್ವರ ಹಾಗೂ ಮುಹಮ್ಮದ್ ಅತಿಂ ಇಶಾಂ ಪಾಂಡೇಶ್ವರ ಎಂದು ಗುರುತಿಸಲಾಗಿದೆ.

ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳಾದ ನಿಝಾಮುದ್ದೀನ್, ಸಫ್ವಾನ್ ಹುಸೇನ್, ಬಾಶಿತ್ ಎಂಬವರ ಜತೆ ಸೇರಿಕೊಂಡು ಈ ಆರೋಪಿಗಳು ಇತರ ಸಹಾಯದಿಂದ ಕೊಲೆ ಯತ್ನ ನಡೆಸಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

2020ರ ನವೆಂಬರ್ 15ರಂದು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಮಸೀದಿ ಬಳಿ ಅಬ್ದುಲ್ ಅಝೀಝ್‌ರವರು ರಾತ್ರಿ 10.30ರ ವೇಳೆಗೆ ಮಸೀದಿಯಿಂದ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ತಂಡ ತಲವಾರಿನಿನಿಂದ ಕಡಿದು ಕೊಲೆಗೆ ಯತ್ನಿಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಅಬ್ದುಲ್ ಅಝೀಝ್ ರನ್ನು ನಗರದ ಫಳ್ನೀರ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೈಕೆ ಮಾಡುತ್ತಿದ್ದ ಅವರ ತಂಗಿಯ ಮಗ ಮಕ್ದೂಮ್‌ರವರು ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಅಬ್ದುಲ್ ಅಝೀಝ್ ರ ಮಗಳ ಗಂಡ ನೌಶಾದ್ ಎಂಬವರ ಜತೆ ಮಾತನಾಡುತ್ತಿದ್ದ ವೇಳೆ ಇಬ್ಬರು ಯುವಕರು ಮಕ್ದೂಮ್ ಎಂದು ಭಾವಿಸಿ ನೌಶಾದ್‌ರಿಗೆ ತಲವಾರಿನಿಂದ ಹಲ್ಲೆ ನಡೆಸಿದ್ದರು. ಈ ಎರಡೂ ಕೊಲೆ ಯತ್ನ ಪ್ರಕರಣವು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ನಡೆದಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಡಿಸಿಪಿ ಹರಿರಾಂ ಶಂಕರ್ ಹಾಗೂ ವಿನಯ್ ಎ. ಗಾಂವ್ಕರ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ಐಗಳಾದ ರಾಜೇಂದ್ರ ಬಿ., ಪ್ರದೀಪ್ ಟಿ.ಆರ್. ಮತ್ತು ಸಿಸಿಬಿ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಕರಣ ಬೇಧಿಸಿದ ಸಿಸಿಬಿ ತಂಡಕ್ಕೆ 10000 ರೂ. ನಗದು ಬಹುಮಾನ

ಈ ಪ್ರಕರಣವನ್ನು ಬೇಧಿಸಿದ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ತಂಡಕ್ಕೆ 10,000 ರೂ.ಗಳ ನಗದು ಬಹುಮಾನ ಘೋಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X