Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಗದಿತ ತೂಕಕ್ಕಿಂತ ಹೆಚ್ಚಿದ್ದಲ್ಲಿ...

ನಿಗದಿತ ತೂಕಕ್ಕಿಂತ ಹೆಚ್ಚಿದ್ದಲ್ಲಿ ಕೋವಿಡ್‌ ಗಂಭೀರ ಪರಿಣಾಮ ಬೀರಬಹುದು: ಹೊಸ ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ30 April 2021 8:20 PM IST
share
ನಿಗದಿತ ತೂಕಕ್ಕಿಂತ ಹೆಚ್ಚಿದ್ದಲ್ಲಿ ಕೋವಿಡ್‌ ಗಂಭೀರ ಪರಿಣಾಮ ಬೀರಬಹುದು: ಹೊಸ ಅಧ್ಯಯನ

ವಾಶಿಂಗ್ಟನ್, ಎ. 30: ಯುವಕರು ನಿಗದಿತ ತೂಕಕ್ಕಿಂತ ಕೊಂಚವೇ ಹೆಚ್ಚು ತೂಕ ಹೊಂದಿದರೂ ಕೊರೋನ ವೈರಸ್ ಕಾಯಿಲೆಯು ಅವರಲ್ಲಿ ಗಂಭೀರ ಸ್ವರೂಪಕ್ಕೆ ತಿರುಗಬಹುದು ಎಂದು ಹೊಸ ಅಧ್ಯಯನವೊಂದು ತಿಳಿಸಿದೆ.

 The Lancet Diabetes & Endocrinology  journal ನಲ್ಲಿ ಗುರುವಾರ ಪ್ರಕಟಗೊಂಡ ಅಧ್ಯಯನವು, ಕೊರೋನ ವೈರಸ್ ಸಾಂಕ್ರಾಮಿಕವು ಯಾರಲ್ಲಿ ಗಂಭೀರ ಸ್ವರೂಪವನ್ನು ತಾಳುತ್ತದೆ ಎಂಬ ಬಗ್ಗೆ ಹೊಸ ಮಾಹಿತಿಗಳನ್ನು ನೀಡಿದೆ. ನಿರ್ದಿಷ್ಟ ವಯೋ ಗುಂಪುಗಳು ಮತ್ತು ಜನಾಂಗೀಯ ಗುಂಪುಗಳ ಮೇಲೆ ವೈರಸ್ನ ಪರಿಣಾಮ ಹಾಗೂ ತೂಕ ಹೆಚ್ಚಳದ ಪಾತ್ರದ ಬಗ್ಗೆ ಮಹತ್ವದ ಒಳನೋಟಗಳನ್ನು ಒದಗಿಸಿದೆ.

ಪುನರಾವರ್ತಿತ ಲಾಕ್ಡೌನ್‌ ಗಳು ಮತ್ತು ಸಾಂಕ್ರಾಮಿಕ ತಂದಿರುವ ಒತ್ತಡವು ಹಲವು ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಜನರ ಸೊಂಟದ ಸುತ್ತಳತೆಯನ್ನು ಹಿಗ್ಗಿಸಿರುವ ಹಾಗೂ ಕೇವಲ ಬೊಜ್ಜು ದೇಹಿಗಳಲ್ಲಿ ಮಾತ್ರ ಸಾಂಕ್ರಾಮಿಕದ ತೀವ್ರ ಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಕಲ್ಪನೆಯನ್ನು ಹೋಗಲಾಡಿಸಿರುವ ಸಂದರ್ಭದಲ್ಲೇ ಹೊಸ ಅಧ್ಯಯನ ಹೊರಬಿದ್ದಿದೆ.

ಬಾಡಿ-ಮಾಸ್ ಸೂಚ್ಯಂಕ 23ನ್ನು ಆರೋಗ್ಯಯುತ ಶ್ರೇಣಿಯ ಗರಿಷ್ಠ ಮಿತಿ ಎಂಬುದಾಗಿ ಪರಿಗಣಿಸಲಾಗಿದೆ. ಇದಕ್ಕಿಂತ ಹೆಚ್ಚಿನ ಬಾಡಿ-ಮಾಸ್ ಸೂಚ್ಯಂಕ ಹೊಂದಿರುವವರು ಈಗಾಗಲೇ ಕೊರೋನ ವೈರಸ್ ಸಾಂಕ್ರಾಮಿಕದಿಂದ ಗರಿಷ್ಠ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ಬ್ರಿಟನ್ನ ಸಂಶೋಧಕರು ಹೇಳಿದ್ದಾರೆ. ಬಾಡಿ-ಮಾಸ್ ಸೂಚ್ಯಂಕದಲ್ಲಿ ಆಗುವ ಪ್ರತಿ ಒಂದು ಅಂಶದ ಏರಿಕೆಯು ಜನರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯನ್ನು 5 ಶೇಕಡದಷ್ಟು ಹಾಗೂ ತುರ್ತು ನಿಗಾ ಘಟಕಕ್ಕೆ ದಾಖಲಾಗುವ ಸಾಧ್ಯತೆಯನ್ನು 10 ಶೇಕಡದಷ್ಟು ಹೆಚ್ಚಿಸುತ್ತದೆ ಎನ್ನುವುದನ್ನು ಅವರು ಕಂಡುಕೊಂಡಿದ್ದಾರೆ.

ಬಾಡಿ-ಮಾಸ್ ಸೂಚ್ಯಂಕದಲ್ಲಿ ಆಗುವ ಏರಿಕೆಯ ಗರಿಷ್ಠ ಪರಿಣಾಮವು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಮೇಲೆ ಆಗುತ್ತದೆ. ಇತರ ಜನಾಂಗೀಯ ಗುಂಪುಗಳಿಗೆ ಹೋಲಿಸಿದರೆ ಆಫ್ರಿಕನ್ ಕಪ್ಪು ವರ್ಣೀಯರ ಮೇಲೆ ಇದರ ಪರಿಣಾಮವು ಹೆಚ್ಚು ಭೀಕರವಾಗಿರುತ್ತದೆ. ಇಂಗ್ಲೆಂಡ್ನಲ್ಲಿ ಸುಮಾರು 70 ಲಕ್ಷ ಜನರ ಆರೋಗ್ಯ ದಾಖಲೆಗಳನ್ನು ಅಧ್ಯಯನ ಮಾಡಿದ ಬಳಿಕ ಸಂಶೋಧಕರು ಈ ತೀರ್ಮಾನಕ್ಕೆ ಬಂದಿದ್ದಾರೆ. 80 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರ ಮೇಲೆ ಬೊಜ್ಜಿನ ಅಂಶವು ಹೆಚ್ಚಿನ ಪರಿಣಾಮವನ್ನು ಬೀರಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X