ಶನಿವಾರ ಗೃಹ ಸಚಿವ ಬೊಮ್ಮಾಯಿ ಉಡುಪಿಗೆ
ಉಡುಪಿ, ಎ.30: ರಾಜ್ಯ ಗೃಹ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹಾಗೂ ರವಿವಾರಗಳನ್ನು ಉಡುಪಿ ಜಿಲ್ಲೆಯಲ್ಲಿ ಪ್ರವಾಸದಲ್ಲಿರಲಿದ್ದಾರೆ.
ಶನಿವಾರ ಬೆಳಗ್ಗೆ 9:30ಕ್ಕೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಮುಳಗೋಡು, ಸಿರಸಿ, ಕುಮಟಾ ಮಾರ್ಗವಾಗಿ ಸಂಜೆ 4:00ಕ್ಕೆ ಉಡುಪಿಗೆ ಆಗಮಿಸುವ ಸಚಿವರು, 5 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣದ ಕುರಿತಂತೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡುವ ಸಚಿವರು, ಬೆಳಗ್ಗೆ 9 ರಿಂದ 10 ರವರೆಗೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು. ಬಳಿಕ 10ಕ್ಕೆ ರಸ್ತೆ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





