Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಸೇವಾ ಚಟುವಟಿಕೆಗೆ ಅಗತ್ಯ ಸಾರಿಗೆ...

ಕೋವಿಡ್ ಸೇವಾ ಚಟುವಟಿಕೆಗೆ ಅಗತ್ಯ ಸಾರಿಗೆ ಸೌಲಭ್ಯ: ಲಕ್ಷ್ಮಣ ಸವದಿ

ವಾರ್ತಾಭಾರತಿವಾರ್ತಾಭಾರತಿ30 April 2021 9:11 PM IST
share
ಕೋವಿಡ್ ಸೇವಾ ಚಟುವಟಿಕೆಗೆ ಅಗತ್ಯ ಸಾರಿಗೆ ಸೌಲಭ್ಯ: ಲಕ್ಷ್ಮಣ ಸವದಿ

ಬೆಂಗಳೂರು, ಎ.30: ಕೋವಿಡ್‍ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೋವಿಡ್ ವಾರಿಯರ್ಸ್‍ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇಡೀ ರಾಜ್ಯವೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ತುರ್ತು ಸನ್ನಿವೇಶವನ್ನು ಎದುರಿಸುತ್ತಿದೆ. ಆದ್ದರಿಂದ ಸಾರಿಗೆ ನಿಗಮಗಳಿಂದಲೂ ಸಹ ಈ ಸೂಕ್ಷ್ಮ ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರದ ಪ್ರಯತ್ನಗಳಿಗೆ ಕೈಜೋಡಿಸಿ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಈಗಾಗಲೇ ಆರೋಗ್ಯ ಮತ್ತು ತುರ್ತು ಸೇವೆಗಳಿಗಾಗಿ ಪ್ರತಿನಿತ್ಯ 156 ಬಿಎಂಟಿಸಿ ಬಸ್ಸುಗಳನ್ನು ಒದಗಿಸಲಾಗಿದೆ. ಇದರಿಂದಾಗಿ ವಿವಿಧ ಆಸ್ಪತ್ರೆಗಳ ನಡುವೆ ಸಂಪರ್ಕಕ್ಕೆ ಹಾಗೂ ವೈದ್ಯರಿಗೆ, ದಾದಿಯರಿಗೆ, ಪೊಲೀಸರಿಗೆ, ಅಗ್ನಿಶಾಮಕ ದಳದವರಿಗೆ, ನೀರು-ವಿದ್ಯುತ್ ಪೂರೈಕೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಸಂಚಾರ ಸೌಲಭ್ಯಕ್ಕೆ ಸಹಾಯಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಾಯವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ನಿಗಮಗಳಿಂದಲೂ ಆಯಾ ಜಿಲ್ಲಾಡಳಿತವು ಮನವಿ ಮಾಡಿಕೊಂಡ ಪ್ರಕಾರ ತುರ್ತು ಸೇವೆಗಾಗಿ ಬಸ್ಸುಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತದಿಂದ ಒಂದು ವೇಳೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್ಸುಗಳಿಗೆ ಬೇಡಿಕೆ ಬಂದರೆ ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಬಸ್ಸುಗಳನ್ನು ಒದಗಿಸುವುದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಕೋವಿಡ್ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಸಾರಿಗೆ ನಿಗಮಗಳ ಬಸ್ಸುಗಳನ್ನೇ ಮೊಬೈಲ್ ಕ್ಲಿನಿಕ್‍ಗಳನ್ನಾಗಿ ಮತ್ತು ಕೋವಿಡ್ ಟೆಸ್ಟಿಂಗ್ ವಾಹನಗಳನ್ನಾಗಿ ಮಾರ್ಪಡಿಸಲಾಗಿತ್ತು. ಅಂತಹ ಸುಮಾರು 20 ಮೊಬೈಲ್ ಬಸ್ಸುಗಳೂ ಸಹ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದೊಂದಿಗೆ ಸೇವೆ ಸಲ್ಲಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X