ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘನೆ: ದ.ಕ.ಜಿಲ್ಲೆಯಲ್ಲಿ 64 ವಾಹನಗಳು ವಶ
ಮಂಗಳೂರು, ಎ.30: ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಕರ್ಫ್ಯೂ ಉಲ್ಲಂಘನೆಯಡಿ 6 ಕೇಸು ದಾಖಲಿಸಲಾಗಿದೆ. ಅಲ್ಲದೆ 449 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 64 ವಾಹನಗಳು ವಶಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 160 ಮಾಸ್ಕ್ ಉಲ್ಲಂಘನೆ ಕೇಸ್, 3 ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಪ್ರಕರಣ, 59 ದ್ವಿಚಕ್ರ ವಾಹನ ಹಾಗೂ 4 ನಾಲ್ಕು ಚಕ್ರವಾಹನ ವಶಪಡಿಸಲಾಗಿದೆ.ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ಫ್ಯೂ ಉಲ್ಲಂಘನೆಯ 3 ಕೇಸ್, 289 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story





