ಭಟ್ಕಳ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ

ಭಟ್ಕಳ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಶುಕ್ರವಾರ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕರೋನ ಮುಂಜಾಗ್ರತ ಕ್ರಮ ಹಾಗೂ ಸಾರ್ವಜನಿಕರ ಸಹಕಾರದ ಕುರಿತು ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಜೊತೆ ಸಮಾಲೋಚನೆ ನಡೆಸಿದರು.
ಕೋವಿಡ್ ನಿಯಂತ್ರಣಕ್ಕೆ ಅಗತ್ಯದ ಎಲ್ಲಾ ರೀತಿಯ ಸಹಕಾರವನ್ನು ನೀಡಲು ಪ್ರತಿ ತಾಲೂಕಿನಲ್ಲಿಯೂ ನಮ್ಮ ಕಾರ್ಯಕರ್ತರು ಇದ್ದಾರೆ. ತುರ್ತು ಅಗತ್ಯೆಗಳಿಗೆ ಹಾಗೂ ಯಾವುದೇ ಸಂದರ್ಭದಲ್ಲಿ ಸಹಾಯ ಬೇಕಾದಲ್ಲಿ ತಿಳಿಸುವಂತೆ ಕೋರಿದರು. ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಮಾತನಾಡಿ ಕೋವಿಡ್ ಎರಡನೇ ಅಲೆ ಯುವಕರಿಗೆ ತೀರಾ ತೊಂದರೆ ನೀಡುತ್ತಿದೆ.ಎಲ್ಲವೂ ಸರಿಯಾಗಿರುವ ವ್ಯಕ್ತಿ ಒಂದೇ ಸವನೆ ತುರ್ತು ಸ್ಥಿತಿಗೆ ತಲುಪುವುದು ದೊಡ್ಡ ತಲೆನೋವಾಗಿದೆ. ತಾಲೂಕಾ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆಯೂ ಕೂಡಾ ಉತ್ತಮವಾಗಿದ್ದು, ಆಕ್ಸಿಜನ್ ಸಿಲಿಂಡರ್ಗಳ ಕೊರತೆಯೂ ಇಲ್ಲ. ಕೋವಿಡ್ ಸೋಂಕಿತರಿಗಾಗಿಯೇ 50 ಬೆಡ್ ಇಡಲಾಗಿದ್ದು ಉಳಿದಂತೆ ಸಾಮಾನ್ಯ ರೋಗಿಗಳಿಗೆ ಪಕ್ಕದ ವಸತಿ ನಿಲಯದಲ್ಲಿ ವ್ಯವಸ್ಥೆ ಮಾಡಿದ್ದೇವೆ ಎಂದರು. ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದ ಭೀಮಣ್ಣ ನಾಯ್ಕ ಅವರು ಭಟ್ಕಳ ಸರಕಾರಿ ಆಸ್ಪತ್ರೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ದೊಡ್ಮನಿ. ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್, ಸಮಾಜ ಸೇವಕ ರುಕ್ನುದ್ಧೀನ್ ನಿಸಾರ್ ಅಹಮ್ಮದ್ ಇದ್ದರು.










