Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂದಿನ ಜೂನ್ ಅಂತಿಮ ವಾರದೊಳಗೆ ಕೋವಿಡ್...

ಮುಂದಿನ ಜೂನ್ ಅಂತಿಮ ವಾರದೊಳಗೆ ಕೋವಿಡ್ 2ನೆ ಅಲೆ ಕಡಿಮೆ ಆಗಬಹುದು: ಡಾ.ಸಿ.ಎನ್.ಮಂಜುನಾಥ್

ವಾರ್ತಾಭಾರತಿವಾರ್ತಾಭಾರತಿ30 April 2021 11:03 PM IST
share
ಮುಂದಿನ ಜೂನ್ ಅಂತಿಮ ವಾರದೊಳಗೆ ಕೋವಿಡ್ 2ನೆ ಅಲೆ ಕಡಿಮೆ ಆಗಬಹುದು: ಡಾ.ಸಿ.ಎನ್.ಮಂಜುನಾಥ್

ಬೆಂಗಳೂರು, ಎ.30: ಕೋವಿಶೀಲ್ಡ್, ಕೋವ್ಯಾಕ್ಸಿನ್ ಎರಡರಲ್ಲಿ ಯಾವುದಾದರು ಒಂದು ಲಸಿಕೆಯನ್ನು ಪಡೆದುಕೊಳ್ಳುವುದರಿಂದ ಕೋವಿಡ್ ಸೋಂಕಿಗೆ ಒಳಗಾದವರು ಪ್ರಾಣಾಪಾಯದಿಂದ ರಕ್ಷಿಸಿಕೊಳ್ಳಬಹುದೆಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.

ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ ಪಡೆದವರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಹಾಗಾದರೆ, ಕೋವಿಡ್ ಲಸಿಕೆ ಪಡೆಯುವ ಅಗತ್ಯವಿದೆಯೇ ಎಂದು ಕೆಲವರು ಸಂದೇಹ ವ್ಯಕ್ತಪಡಿಸಿದ್ದಾರೆ. ಆದರೆ, ಕೋವಿಡ್ ಲಸಿಕೆ ಪಡೆದವರಿಗೆ ಕೋವಿಡ್ ಸೋಂಕು ತಗುಲಿದರು ಪ್ರಾಣಕ್ಕೆ ಯಾವುದೇ ಅಪಾಯ ಆಗದಂತೆ ಗುಣವಾಗುತ್ತಾರೆ. ಹೀಗಾಗಿಯೇ ಕೋವಿಡ್ ಲಸಿಕೆ ಪಡೆಯುವುದು ಅಗತ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತೊಂದೆಡೆ ಕೋವಿಶೀಲ್ಡ್ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಜಯದೇವ ಆಸ್ಪತ್ರೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಕೋವಿಶೀಲ್ಡ್ ಪಡೆದಿದ್ದೇವೆ. ಯಾರಿಗೂ ಏನು ತೊಂದರೆಯಾಗಿಲ್ಲ. ಹೀಗಾಗಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಯಲ್ಲಿ ಯಾವುದು ಲಭ್ಯತೆ ಇದೆಯೋ ಅದನ್ನು ಪಡೆದುಕೊಳ್ಳಬೇಕೆಂದು ಅವರು ಹೇಳಿದ್ದಾರೆ.

ಮಾಧ್ಯಮಗಳ ಜವಾಬ್ದಾರಿ ಹೆಚ್ಚಿದೆ: ಕೋವಿಡ್ ಪರಿಣಾಮ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮಾಧ್ಯಮಗಳ ಪಾತ್ರ ದೊಡ್ಡದಿದೆ. ಮುಖ್ಯವಾಗಿ ಮಾಧ್ಯಮಗಳು ಸ್ಮಶಾನ ದೃಶ್ಯಗಳು, ಸಾವಿನ ಅಂಕಿ ಅಂಶಗಳನ್ನು ವೈಭವೀಕರಿಸಿದರೆ ಹೋಂ ಐಸೋಲೆಷನ್‍ನಲ್ಲಿರುವವರು ಮತ್ತಷ್ಟು ಖಿನ್ನತೆಗೆ ಒಳಗಾಗುತ್ತಾರೆ. ಹೀಗಾಗಿ ಮಾಧ್ಯಮಗಳು ಜನತೆಯಲ್ಲಿ ಆತ್ಮವಿಶ್ವಾಸ ಮೂಡಿಸುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡಬೇಕೆಂದು ಅವರು ಆಶಿಸಿದ್ದಾರೆ.

5ರಲ್ಲಿ ಒಬ್ಬರಿಗೆ ಸೋಂಕು: ಕೋವಿಡ್ ಎರಡನೇ ಅಲೆಯ ಹರಡುವಿಕೆ ಹಾಗೂ ತೀವ್ರತೆ ಹೆಚ್ಚಾಗುತ್ತಿದೆ. ಪ್ರತಿ 5ರಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗುತ್ತಿದ್ದು, ರಾಜ್ಯದಲ್ಲಿ ಒಂದೂವರೆ ಎರಡು ಕೋಟಿ ಜನತೆಗೆ ಕೊರೋನ ಸೋಂಕು ಬಂದಿದೆ. ಹೀಗಾಗಿ ಬಹಳ ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಿದೆ. ಒಂದು ವೇಳೆ ಆರ್‍ಟಿಪಿಸಿಆರ್‍ನಲ್ಲಿ ಕೋವಿಡ್ ನೆಗೆಟಿವ್ ಬಂದಿದ್ದರೂ ವಾಸನೆ ಗ್ರಹಿಸಲು ಸಾಧ್ಯವಾಗದಿದ್ದರೆ ಕೋವಿಡ್ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಿರುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಸಂವಾದದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಸೇರಿದಂತೆ ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

-ನಿಂಬೆರಸದಿಂದ ಕೋವಿಡ್ ರೋಗ ಗುಣಮುಖವಾಗುವುದಾದರೆ ಅದನ್ನು ಹೇಳಿದವರಿಗೆ ಡಬಲ್ ನೊಬೆಲ್ ಪ್ರಶಸ್ತಿ ಕೊಡಬೇಕು. ಇಂತಹ ಅವೈಜ್ಞಾನಿಕ ಮೌಢ್ಯವನ್ನು ಎಲ್ಲರೂ ಖಂಡಿಸಲೇಬೇಕು. ನಿಂಬೆರಸಕ್ಕೂ ಆಕ್ಸಿಜನ್‍ಗೂ ಯಾವುದೇ ಸಂಬಂಧವಿಲ್ಲ. ಜನತೆ ನಿಂಬೆರಸವನ್ನು ಮೂಗಿಗೆ ಹಾಕಿಕೊಂಡು ಅಪಾಯಕ್ಕೆ ಸಿಲುಕಬಾರದು.

-ರೆಮ್‍ಡಿಸಿವಿರ್ ಔಷಧಿಯನ್ನು ಕೋವಿಡ್ ಸೋಂಕಿತ ಎಲ್ಲರಿಗೂ ಕೊಡುವ ಅಗತ್ಯವಿಲ್ಲ. ಗಂಭೀರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಮಾತ್ರ ಇದನ್ನು ಕೊಡಬೇಕಾಗುತ್ತದೆ. ಕೋವಿಡ್ ರೋಗ ಲಕ್ಷಣಗಳು ಕಡಿಮೆ ಇದ್ದವರಿಗೆ ಇದನ್ನು ಕೊಡುವ ಅಗತ್ಯವಿಲ್ಲ.

-ಮುಂದಿನ ಜೂನ್ ಅಂತಿಮ ವಾರದೊಳಗೆ ಕೋವಿಡ್ ಎರಡನೆ ಅಲೆ ಕಡಿಮೆ ಆಗಬಹುದು. ಆದರೆ, ಡಿಸೆಂಬರ್ ವರೆಗೂ ನಾವು ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಪಾಲಿಸಬೇಕಾಗುತ್ತದೆ. ಇಲ್ಲದಿದ್ದರೆ, ಕೋವಿಡ್ ಮೂರನೇ ಅಲೆಯನ್ನು ಎದುರಿಸಬೇಕಾಗುತ್ತದೆ.

-ಡಾ.ಸಿ.ಎನ್.ಮಂಜುನಾಥ್, ನಿರ್ದೇಶಕ, ಜಯದೇವ ಆಸ್ಪತ್ರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X